AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಿದೆ ಚುನಾವಣಾ ಆಯೋಗ

ಬಿಹಾರದ ಮಾದರಿಯಲ್ಲಿ ಇಡೀ ದೇಶಾದ್ಯಂತ ಭಾರತೀಯ ಚುನಾವಣಾ ಆಯೋಗ(ECI)ವು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಮುಂದಾಗಿದೆ. ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮತದಾರರ ಪಟ್ಟಿಯ ಸಮಗ್ರತೆಯನ್ನು ರಕ್ಷಿಸಲು ತನ್ನ ಸಾಂವಿಧಾನಿಕ ಆದೇಶವನ್ನು ಪೂರೈಸಲು ಆಯೋಗವು ಈಗ ಇಡೀ ದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ  ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗುತ್ತದೆ. ರಾಷ್ಟ್ರವ್ಯಾಪಿ ಈ ವೇಳಾಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ.

ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಿದೆ ಚುನಾವಣಾ ಆಯೋಗ
ಮತದಾರರು Image Credit source: CNBC
ನಯನಾ ರಾಜೀವ್
|

Updated on: Jul 25, 2025 | 12:23 PM

Share

ನವದೆಹಲಿ, ಜುಲೈ 25: ಬಿಹಾರದ ಮಾದರಿಯಲ್ಲಿ ಇಡೀ ದೇಶಾದ್ಯಂತ ಭಾರತೀಯ ಚುನಾವಣಾ ಆಯೋಗ(ECI)ವು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಲು ಮುಂದಾಗಿದೆ. ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮತದಾರರ ಪಟ್ಟಿಯ ಸಮಗ್ರತೆಯನ್ನು ರಕ್ಷಿಸಲು ತನ್ನ ಸಾಂವಿಧಾನಿಕ ಆಶಯವನ್ನು ಪೂರೈಸಲು ಆಯೋಗವು ಈಗ ಇಡೀ ದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ  ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗುತ್ತದೆ. ರಾಷ್ಟ್ರವ್ಯಾಪಿ ಈ ವೇಳಾಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ.

ಬಿಹಾರದಲ್ಲಿ ಎಸ್‌ಐಆರ್ ಕುರಿತು ವಿರೋಧ ಪಕ್ಷಗಳ ಕೋಲಾಹಲದ ನಡುವೆಯೇ ಈ ಘೋಷಣೆ ಹೊರಬಿದ್ದಿದೆ. ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹಲವಾರು ಸಂದರ್ಭಗಳಲ್ಲಿ ಈ ಪ್ರಕ್ರಿಯೆಯನ್ನು ಟೀಕಿಸಿದ್ದಾರೆ ಮತ್ತು ರಾಜ್ಯದಲ್ಲಿ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವ ಸುಳಿವು ನೀಡಿದ್ದಾರೆ.

ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟ ಪಕ್ಷಗಳ ಹಲವಾರು ಸಂಸದರು ಗುರುವಾರ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದ್ದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಹಿಂಪಡೆಯಬೇಕು, ಉಭಯ ಸದನಗಳಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ಅವರು ಆಗ್ರಹಿಸಿದ್ದರು.

ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರನ್ನು ವಂಚಿಸುವ ಗುರಿಯನ್ನು ಚುನಾವಣಾ ಆಯೋಗ ಹೊಂದಿದೆ ಎಂದು ಆರೋಪಿಸಿ, ವಿರೋಧ ಪಕ್ಷಗಳು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ವಿರುದ್ಧ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಚುನಾವಣಾ ಆಯೋಗವು ಈ ಹಿಂದೆ ಹೇಳಿದ್ದ ಪ್ರಕಾರ, ಈ ಪರಿಷ್ಕರಣೆಯು ನಕಲಿ ಮತ್ತು ಅನರ್ಹ ಮತದಾರರನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ. ವಲಸಿಗರು ಚಿಂತಿಸಬೇಕಾಗಿಲ್ಲ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಆಧಾರ್ ಮೊದಲ ಐಡೆಂಟಿಟಿಯಲ್ಲ, ಪೌರತ್ವಕ್ಕೆ ಸಾಕ್ಷಿಯಲ್ಲ; ಯುಐಡಿಎಐ ಸಿಇಒ ಮಹತ್ವದ ಹೇಳಿಕೆ

ಕಾನೂನಿನ ಪ್ರಕಾರ ಅನರ್ಹ ಮತದಾರರನ್ನು ತೆಗೆದುಹಾಕುವ ಮೂಲಕ ಚುನಾವಣಾ ಸಮಗ್ರತೆಯನ್ನು ಎತ್ತಿಹಿಡಿಯುತ್ತದೆ ಎಂದು ಇಸಿ ಹೇಳಿತ್ತು. ಆಧಾರ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪೌರತ್ವ ಪುರಾವೆಗಾಗಿ ಅಲ್ಲ, ಗುರುತಿನ ಪರಿಶೀಲನೆಗಾಗಿ ಬಳಸಲಾಗುತ್ತಿದೆ ಎಂದು ಇಸಿ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದೆ. ಎಸ್‌ಐಆರ್‌ನ ಕಾನೂನುಬದ್ಧತೆಯನ್ನು ಪರಿಶೀಲಿಸುತ್ತಿರುವ ಸುಪ್ರೀಂ ಕೋರ್ಟ್, ಜುಲೈ 28 ರಂದು ಮುಂದಿನ ಪ್ರಕರಣವನ್ನು ವಿಚಾರಣೆ ನಡೆಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ