Assembly elections 2021 Date: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕ ಸಂಜೆ 4.30ಕ್ಕೆ ಪ್ರಕಟ

Assembly Election 2021: ನವದೆಹಲಿಯ ವಿಗ್ಯಾನ್ ಭವನ್​ನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಚುನಾವಣೆಯ ದಿನಾಂಕ ಪ್ರಕಟಿಸಲಿದ್ದಾರೆ.

Assembly elections 2021 Date: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕ ಸಂಜೆ 4.30ಕ್ಕೆ ಪ್ರಕಟ
ಚುನಾವಣಾ ಆಯೋಗ
Follow us
ರಶ್ಮಿ ಕಲ್ಲಕಟ್ಟ
|

Updated on:Feb 26, 2021 | 3:31 PM

ದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಇಂದು ಸಂಜೆ 4.40ಕ್ಕೆ ಪ್ರಕಟಿಸಲಿದೆ. ನವದೆಹಲಿಯ ವಿಗ್ಯಾನ್ ಭವನ್​ನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಲಿದ್ದಾರೆ. ಕೊರೊನಾವೈರಸ್ ಸಾಂಕ್ರಾಮಿಕದ ಹೊತ್ತಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಇದಾಗಿದ್ದು, ಕಟ್ಟು ನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕದ ನಡುವೆಯೇ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಮೂರು ಹಂತದಲ್ಲಿ ನಡೆದಿತ್ತು. ನಾಲ್ಕು ರಾಜ್ಯಗಳ ಅಧಿಕಾರವಧಿಯು ಮೇ- ಜೂನ್ ತಿಂಗಳಲ್ಲಿ ಮುಕ್ತಾಯವಾಗಲಿದೆ. ಕೇರಳದಲ್ಲಿ ಎಡರಂಗ ನೇತೃತ್ವದ ಪಿಣರಾಯಿ ವಿಜಯನ್ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರುವ ಸಿದ್ಧತೆ ನಡೆಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಮತ್ತು ಬಿಜೆಪಿ ಪಕ್ಷದ ನಡುವೆ ಈ ಬಾರಿ ಸ್ಪರ್ಧೆ ನಡೆಯಲಿದ್ದು, ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಡಿಎಂಕೆ ವಿರುದ್ಧ ಸ್ಪರ್ಧಿಸಲಿದೆ.

ಅಸ್ಸಾಂನಲ್ಲಿ ಬಿಜೆಪಿಗೆ ಪ್ರತಿಷ್ಠೆಯ ಸಂಕೇತ. ಕಾಂಗ್ರೆಸ್  ನದ್ದು ಉಳಿವಿಗಾಗಿ ಹೋರಾಟ.  ಪುದುಚೇರಿಯಲ್ಲಿ ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತುಗೊಳಿಸಲು ವಿಫಲಗೊಂಡು ಸರ್ಕಾರ ಪತನವಾಗಿತ್ತು. ಸರ್ಕಾರ ಪತನವಾದ ನಂತರ ಇಲ್ಲಿ ರಾಷ್ಟ್ರಪತಿ ಆಡಳಿತವಿದೆ.

ಪಶ್ಚಿಮ ಬಂಗಾಳದಲ್ಲಿ 294 ಸೀಟು, ತಮಿಳುನಾಡಿನಲ್ಲಿ 234 ಸೀಟು, ಕೇರಳದಲ್ಲ 140 ಸೀಟು, ಅಸ್ಸಾಂನಲ್ಲಿ 126 ಸೀಟು ಮತ್ತು ಪುದುಚೇರಿಯಲ್ಲಿ 30 ಸೀಟುಗಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಬಂಗಾಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸ್ಪರ್ಧೆಗಳಿದಿರುವ ಬಿಜೆಪಿ, ಟಿಎಂಸಿ ಭದ್ರಕೋಟೆಯಲ್ಲಿ ಅಧಿಕಾರ ಸ್ಥಾಪಿಸಲು ಶತಾಯಗತಾಯ ಪ್ರಯತ್ನಿಸುತ್ನಿಸುತ್ತಿದೆ. ಈ ಹಿಂದಿನ ಚುನಾವಣೆಗಳಲ್ಲಿ ಟಿಎಂಸಿಗೆ ಪ್ರತಿಸ್ಪರ್ಧಿಯಾಗಿದ್ದ ಎಡಪಕ್ಷ ಈ ಬಾರಿ ಸದ್ದು ಮಾಡಿಲ್ಲ.

2016ರಲ್ಲಿ ಮೊದಲ ಬಾರಿ ಕಾಂಗ್ರೆಸ್ ಸರ್ಕಾರವನ್ನು ಮಣಿಸಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಈ ಬಾರಿಯೂ ಅಧಿಕಾರವನ್ನುಳಿಸುವ ಯತ್ನ ನಡೆಸಲಿದೆ.

ಕೇರಳದಲ್ಲಿ ಎಡರಂಗ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆಯೇರ್ಪಟ್ಟಿದ್ದರೂ ಬಿಜೆಪಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವಂತಿಲ್ಲ. ಹಿಂದಿನ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಪೂರೈಸಿ ಎರಡನೇ ಬಾರಿ ಅಧಿಕಾರಕ್ಕೇರುತ್ತೇವೆ ಎಂದು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಹೇಳುತ್ತಿದೆ. ಅದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ನಾಯಕರು ಭಿನ್ನಾಭಿಪ್ರಾಗಳನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನಿಸುತ್ತಿದೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಡರಂಗ ಗೆಲುವು ಸಾಧಿಸಿರುವುದರಿಂದ ಪಿಣರಾಯಿ ಸರ್ಕಾರಕ್ಕೆ ಜನ ಬೆಂಬಲ ಸಿಗಲಿದೆ ಎಂಬುದು ಸಿಪಿಎಂ ಹೇಳಿದೆ.ಇತ್ತ ಬಿಜೆಪಿ ಎಡ-ಬಲ ಪಕ್ಷಗಳ ಜಗಳದ ನಡುವೆ ಸೀಟು ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಲೇ ಇದೆ. ಮೆಟ್ರೊಮ್ಯಾನ್ ಇ.ಶ್ರೀಧರನ್ ಅವರು ಬಿಜೆಪಿ ಸೇರಿದ್ದು, ಖ್ಯಾತನಾಮರನ್ನು ಪಕ್ಷಕ್ಕೆ ಸೇರಿಸಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಭದ್ರತಾ ಪಡೆ ಈ ವಾರ ನಿಯೋಜನೆಗೊಳ್ಳಲಿದೆ. ಫೆಬ್ರವರಿ 25ರ ವರದಿ ಪ್ರಕಾರ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಈವರೆಗೆ 125 ಭದ್ರತಾ ತುಕಡಿ ನಿಯೋಜನೆ ಮಾಡಲಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ ಸಿಆರ್​ಪಿಎಫ್​​ನ 30 ,ಸಶಸ್ತ್ರ ಸೀಮಾ ಬಲ್ (ಎಸ್​ಎಸ್​ಬಿ)- 30, ಗಡಿ ಭದ್ರತಾ ಪಡೆ (ಬಿಎಸ್​ಎಫ್​) -25, ಸಿಐಎಸ್​ಎಫ್ ಮತ್ತು ಇಂಡೊ ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಯ 25 ತುಕಡಿಗಳು ಚುನಾವಣೆ ಕರ್ತವ್ಯದಲ್ಲಿರಲಿವೆ.

ಇದನ್ನೂ ಓದಿ: Political Analysis | ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಬಿಜೆಪಿಯ ಮುಂದಿನ ನಡೆ ಏನು?

Published On - 2:39 pm, Fri, 26 February 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ