AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ವಿರೋಧಕ್ಕೆ ಮಣಿದ ಚುನಾವಣಾ ಆಯೋಗ: ಹೊಸ ಮತದಾರರ ನೋಂದಣಿಗೆ ತಂದಿದ್ದ ವಿವಾದಾತ್ಮಕ ಫಾರಂ-6 ಹೆಚ್ಚುವರಿ ಷರತ್ತು ವಾಪಸ್

ಕೇಂದ್ರ ಚುನಾವಣಾ ಆಯೋಗವು ಫಾರಂ 6ರ ಹೆಚ್ಚುವರಿ ಎಸ್‌ಐಆರ್ ಘೋಷಣಾಪತ್ರವನ್ನು ಹಿಂಪಡೆದಿದೆ. ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ರಾಜ್ಯಗಳಲ್ಲಿ ಈ ಹೆಚ್ಚುವರಿ ಷರತ್ತು ರದ್ದಾಗಿದೆ. ಹೊಸ ಮತದಾರರ ನೋಂದಣಿಗೆ ಇದ್ದ ಈ ವಿವಾದಾತ್ಮಕ ಅಗತ್ಯತೆ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿತ್ತು, ಆಯುಕ್ತರಿಂದಲೂ ಅಸಮಾಧಾನ ಕೇಳಿಬಂದಿತ್ತು. ಈ ನಿರ್ಧಾರದಿಂದ ನೋಂದಣಿ ಪ್ರಕ್ರಿಯೆ ಸುಲಭವಾಗಲಿದೆ.

ತೀವ್ರ ವಿರೋಧಕ್ಕೆ ಮಣಿದ ಚುನಾವಣಾ ಆಯೋಗ: ಹೊಸ ಮತದಾರರ ನೋಂದಣಿಗೆ ತಂದಿದ್ದ ವಿವಾದಾತ್ಮಕ ಫಾರಂ-6 ಹೆಚ್ಚುವರಿ ಷರತ್ತು ವಾಪಸ್
ಪ್ರತಿಭಟನೆ Image Credit source: PTI
ನಯನಾ ರಾಜೀವ್
|

Updated on:Sep 30, 2026 | 2:40 PM

Share

ನವದೆಹಲಿ, ಸೆಪ್ಟೆಂಬರ್ 30: ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ಫಾರಂ 6ರ ಹೆಚ್ಚುವರಿ ಎಸ್‌ಐಆರ್ ಘೋಷಣಾಪತ್ರವನ್ನು ಹಿಂಪಡೆದಿದೆ. ಈ ಕ್ರಮವು ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ರಾಜ್ಯಗಳಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಗಣನೀಯವಾಗಿ ಸರಳಗೊಳಿಸಲಿದೆ. ವಿವಾದಕ್ಕೆ ಕಾರಣವಾಗಿದ್ದ ಈ ಷರತ್ತಿನ ರದ್ದತಿಯು ಸಾರ್ವಜನಿಕರ ಹಾಗೂ ಇತರೆ ಚುನಾವಣಾ ಆಯುಕ್ತರ ಆಕ್ಷೇಪಗಳಿಗೆ ಚುನಾವಣಾ ಆಯೋಗದ ಪ್ರತಿಕ್ರಿಯೆಯಾಗಿದೆ.

ಫಾರಂ 6 ಎಂದರೇನು ಮತ್ತು ವಿವಾದಕ್ಕೆ ಕಾರಣವೇನು?

ಫಾರಂ 6 ಎನ್ನುವುದು ಭಾರತೀಯ ಚುನಾವಣಾ ಆಯೋಗವು ನಿರ್ದಿಷ್ಟಪಡಿಸಿದ ಅಧಿಕೃತ ಅರ್ಜಿಯಾಗಿದೆ. 18 ವರ್ಷ ತುಂಬಿದ ಅಥವಾ ತುಂಬುತ್ತಿರುವ ಯಾವುದೇ ಅರ್ಹ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಈ ನಮೂನೆಯನ್ನು ಭರ್ತಿ ಮಾಡುವುದು ಕಡ್ಡಾಯವಾಗಿದೆ. ಈ ಅರ್ಜಿಯ ಮೂಲಕ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಅವಕಾಶವಿದೆ. ಆದರೆ, ಈಸಿಐ ನೆಟ್ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದ ಆನ್‌ಲೈನ್ ಫಾರಂ 6ನಲ್ಲಿ ಚುನಾವಣಾ ಆಯೋಗವು ಹೊಸದೊಂದು ಘೋಷಣಾ ವಿಭಾಗವನ್ನು ಸೇರಿಸಿತ್ತು.

ಈ ವಿಭಾಗದ ಅನ್ವಯ, ಹೊಸದಾಗಿ ನೋಂದಾಯಿಸಿಕೊಳ್ಳುವ ಯುವ ಮತದಾರರು ತಮ್ಮ ಪೋಷಕರು ಅಥವಾ ಅಜ್ಜ ಅಜ್ಜಿಯಂದಿರ ಹೆಸರುಗಳು ಹಿಂದಿನ ಕರಡು ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿವೆಯೇ ಇಲ್ಲವೇ ಎಂಬುದರ ಬಗ್ಗೆ ವಿವರಗಳನ್ನು ನೀಡಬೇಕಾಗಿತ್ತು. ಈ ಪ್ರಶ್ನೆಯು ಕಡ್ಡಾಯವಲ್ಲ ಎಂದು ನಮೂದಿಸಿದ್ದರೂ, ಆನ್‌ಲೈನ್‌ನಲ್ಲಿ ಆ ಪ್ರಶ್ನೆಗೆ ಉತ್ತರ ನೀಡದೆ ಇದ್ದರೆ ಅರ್ಜಿ ಪ್ರಕ್ರಿಯೆಯು ಮುಂದಕ್ಕೆ ಸಾಗುತ್ತಿರಲಿಲ್ಲ. ವಾಸ್ತವವಾಗಿ ಇದು ಕಡ್ಡಾಯದ ಸ್ವರೂಪ ಪಡೆದುಕೊಂಡಿತ್ತು. ಇದರಿಂದಾಗಿ ಅನೇಕ ಹೊಸ ಮತದಾರರು ನೋಂದಣಿ ಪ್ರಕ್ರಿಯೆಯಲ್ಲಿ ತೊಂದರೆಗಳನ್ನು ಎದುರಿಸಬೇಕಾಗಿತ್ತು, ಅಸಮಾಧಾನ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ:

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಶಿಕಾರಿಪುರದಿಂದ ಶುರು, 84 ಕ್ಷೇತ್ರಗಳಲ್ಲಿ 10 ಕಿಮೀ ನಡಿಗೆ: ಹರಿಪ್ರಸಾದ್ ಘೋಷಣೆ

ಆಂತರಿಕ ಆಕ್ಷೇಪಣೆಗಳು ಮತ್ತು ಮುಖ್ಯ ಆಯುಕ್ತರ ವಿರುದ್ಧ ಟೀಕೆ

ಈ ಹೆಚ್ಚುವರಿ ಷರತ್ತಿನ ವಿರುದ್ಧ ತೀವ್ರ ಸಾರ್ವಜನಿಕ ಆಕ್ಷೇಪಗಳು ವ್ಯಕ್ತವಾಗಿದ್ದವು. ಅದಷ್ಟೇ ಅಲ್ಲದೆ, ಚುನಾವಣಾ ಆಯೋಗದೊಳಗೆ ಇಬ್ಬರು ಆಯುಕ್ತರು ಈ ನಿಯಮದ ವಿರುದ್ಧ ಧ್ವನಿಯೆತ್ತಿದ್ದರು. ಅವರು ಈ ಪ್ರಕ್ರಿಯೆಯನ್ನು “ಕಾನೂನುಬಾಹಿರ” ಎಂದು ಕರೆದಿದ್ದು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧವೂ ಆಕ್ಷೇಪಗಳು ವ್ಯಕ್ತವಾಗಿದ್ದವು. “ಈ ರೀತಿ ಎಲ್ಲಾ ಮಾಡಿಬಿಟ್ಟರೆ ಹೆಂಗಾಗುತ್ತೆ? ಏನಿದು? ಈ ಕಾರಣಾಂತರಗಳಿಂದ ಇದು ಈ ಪ್ರಕ್ರಿಯೆನೇ ಸರಿಯಾಗ್ತಾ ಇಲ್ಲ” ಎಂದು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಬಹಿರಂಗ ವಿರೋಧವು ವಿಷಯವನ್ನು ಮತ್ತಷ್ಟು ಗಂಭೀರಗೊಳಿಸಿದ್ದವು.

ವಿಡಿಯೋ

ಹಿಂಪಡೆತ ಮತ್ತು ಅದರ ಪರಿಣಾಮ

ಹಲವಾರು ಪ್ರಶ್ನೆಗಳು ಮತ್ತು ವಿರೋಧಗಳು ಎದ್ದ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ಈ ಫಾರಂ 6ರ ಎಸ್‌ಐಆರ್ ಘೋಷಣಾಪತ್ರವನ್ನು ಹಿಂಪಡೆಯುವ ನಿರ್ಧಾರವನ್ನು ಕೈಗೊಂಡಿದೆ. ಈಸಿಐ ನೆಟ್ ವೆಬ್‌ಸೈಟ್‌ನಿಂದ ಈ ಹೆಚ್ಚುವರಿ ಷರತ್ತನ್ನು ತೆಗೆದುಹಾಕಲಾಗಿದೆ. ಈ ನಿರ್ಧಾರವು ಎಸ್‌ಐಆರ್ ಪ್ರಕ್ರಿಯೆ ಮುಕ್ತಾಯಗೊಂಡ ರಾಜ್ಯಗಳಿಗೆ ಅನ್ವಯವಾಗುತ್ತದೆ. ಅಂತಹ ರಾಜ್ಯಗಳಲ್ಲಿ ಹೊಸ ಮತದಾರರು ಈ ಹೆಚ್ಚುವರಿ ಘೋಷಣಾಪತ್ರವನ್ನು ಸಲ್ಲಿಸಬೇಕಾಗಿಲ್ಲ. ಆದಾಗ್ಯೂ, ಎಸ್‌ಐಆರ್ ಪ್ರಕ್ರಿಯೆ ಚಾಲ್ತಿಯಲ್ಲಿರುವ ರಾಜ್ಯಗಳಲ್ಲಿ ಮೊದಲಿದ್ದ ಸ್ಥಿತಿಯೇ ಮುಂದುವರೆಯಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಈ ಕ್ರಮವು ಹೊಸ ಮತದಾರರ ನೋಂದಣಿಯನ್ನು ಸರಳವಾಗಿಸುವುದಲ್ಲದೆ, ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಹೆಚ್ಚಿಸುತ್ತದೆ. ಆಯೋಗವು ಸಾರ್ವಜನಿಕ ಮತ್ತು ಆಂತರಿಕ ಅಭಿಪ್ರಾಯಗಳನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಂಡಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಸಕಾರಾತ್ಮಕ ಬೆಳವಣಿಗೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:11 pm, Wed, 30 September 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?