ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಕೆನರಾ ಬ್ಯಾಂಕ್​​ನ 538 ಕೋಟಿ ರೂ. ವಂಚನೆ ಪ್ರಕರಣ ಸಮಬಂಧ ಜಾರಿ ನಿರ್ದೇಶನಾಲಯವು (ಇಡಿ) ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿದೆ. ಶನಿವಾರ ಸತತ ಏಳು ಗಂಟೆಗಳ ಕಾಲ ಮುಂಬೈನಲ್ಲಿ ವಿಚಾರಣೆ ನಡೆಸಿದ ನಂತರ ನರೇಶ್ ಗೋಯಲ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ
ಜೆಟ್ ಏರ್​ವೇಸ್ ಸಂಸ್ಥಾಪಕ ನರೇಶ್ ಗೋಯಲ್
Rakesh Nayak Manchi

Updated on: Sep 02, 2023 | 6:46 AM

ಮುಂಬೈ, ಸೆ.2: ಕೆನರಾ ಬ್ಯಾಂಕ್​​ನ 538 ಕೋಟಿ ರೂ. ವಂಚನೆ ಪ್ರಕರಣ ಸಮಬಂಧ ಜಾರಿ ನಿರ್ದೇಶನಾಲಯವು (Enforcement Directorate) ಜೆಟ್ ಏರ್‌ವೇಸ್ (Jet Airways) ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿದೆ. ಪಿಎಂಎಲ್​ಎ ಕಾಯ್ದೆಯಡಿ ನರೇಶ್ ಗೋಯಲ್ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು, ಶನಿವಾರ ಸತತ ಏಳು ಗಂಟೆಗಳ ಕಾಲ ಮುಂಬೈನಲ್ಲಿ ವಿಚಾರಣೆ ನಡೆಸಿದ ನಂತರ ಬಂಧಿಸಿದ್ದಾರೆ.

ಸದ್ಯ, 74 ವರ್ಷದ ನರೇಶ್ ಗೋಯಲ್ ಅವರನ್ನು ಇ.ಡಿ. ಅಧಿಕಾರಿಗಳು ಪಿಎಂಎಲ್​ಎ ವಿಶೇಷ ಕೋರ್ಟ್​​ಗೆ ಇಂದು (ಸೆಪ್ಟೆಂಬರ್ 2) ಹಾಜರುಪಡಿಸಿ ತಮ್ಮ ವಶಕ್ಕೆ ನೀಡುವಂತೆ ಕೋರಲಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್​ಗೆ ವರ್ಗಾಯಿಸಿದ ಸುಪ್ರೀಂ

ಕೆನರಾ ಬ್ಯಾಂಕ್​ನಿಂದ ಪಡೆದ ಸಾಲವನ್ನು ಸಂಪೂರ್ಣವಾಗಿ ಪವಾತಿಸದ ಜೆಟ್ ಏರ್​ವೇಸ್ ಸಂಸ್ಥಾಪಕ ಗೋಯಲ್ ವಿರುದ್ಧದ ಸಿಬಿಐ ಮೇ 3 ರಂದು ವಂಚನೆ ಪ್ರಕರಣ ದಾಖಲಿಸಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮತ್ತು ದೆಹಲಿಯಲ್ಲಿ ಗೋಯಲ್ ಅವರಿಗೆ ಸೇರಿದ ಎಂಟು ಸ್ಥಳಗಳ ಮೇಲೆ ಜುಲೈನಲ್ಲಿ ದಾಳಿ ನಡೆಸಿತ್ತು.

ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್ 2005 ರಿಂದ ಕೆನರಾ ಬ್ಯಾಂಕ್‌ನೊಂದಿಗೆ ವ್ಯವಹರಿಸುತ್ತಿದೆ ಮತ್ತು ಕಂಪನಿಗೆ ಎಲ್ಲಾ ಮಾನ್ಯತೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟದ ವ್ಯವಸ್ಥೆಯಲ್ಲಿದೆ.

ಕೆನರಾ ಬ್ಯಾಂಕ್​ನಿಂದ ಜೆಟ್ ಏರ್​ವೇಸ್ ಸಂಸ್ಥೆಯು 848 ಕೋಟಿ ರೂ. ಸಾಲ ಪಡೆದಿತ್ತು. ಈ ಸಾಲದ ಮೊತ್ತದ ಪೈಕಿ 538 ಕೋಟಿ ರೂ.ಗಳನ್ನು ಮರುಪಾವತಿಸದೆ ಬಾಕಿ ಉಳಿಸಲಾಗಿತ್ತು. ಈ ಪ್ರಕರಣವನ್ನು 2011ರ ಜುಲೈ 29 ರಂದು ವಂಚನೆ ಪ್ರಕರಣವೆಂದು ಘೋಷಿಸಿ ಪ್ರಕರಣ ದಾಖಲಿಸಿಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sat, 2 September 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us