AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಶಿಕ್ಷಕರ ನೇಮಕಾತಿ ಹಗರಣ: ಇಡಿ ಅಧಿಕಾರಿಗಳಿಂದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಂಬಂಧ ಹೊಂದಿರುವ ಆರೋಪದ ಮೇಲೆ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

Big News: ಶಿಕ್ಷಕರ ನೇಮಕಾತಿ ಹಗರಣ: ಇಡಿ ಅಧಿಕಾರಿಗಳಿಂದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ
ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 11, 2022 | 9:19 AM

ಕೊಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ (West Bengal teachers recruitment scam) ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ (Manik Bhattacharya) ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ರಾತ್ರಿಯವರೆಗೂ ನಡೆದ ವಿಚಾರಣೆ ಬಳಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನೇಮಕಾತಿ ಹಗರಣದಲ್ಲಿ ಪಾರ್ಥ ಚಟರ್ಜಿ ಬಳಿಕ ಬಂಧನಕ್ಕೊಳಗಾದ ಎರಡನೇ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ. ಇದು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ದೊಡ್ಡ ಶಾಕ್ ನೀಡಿದೆ.

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಂಬಂಧ ಹೊಂದಿರುವ ಆರೋಪದ ಮೇಲೆ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಈ ಹಿಂದೆ ಮಾಣಿಕ್ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ನೇಮಕಾತಿ ಹಗರಣ ನಡೆದಿದೆ ಎಂದು ಇಡಿ ಮೂಲಗಳು ಹೇಳಿವೆ.

ಇದನ್ನೂ ಓದಿ: Madrasas Ban: ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಂತೆ ಕರ್ನಾಟಕದಲ್ಲೂ ಮದರಸಗಳ ಬ್ಯಾನ್​ಗೆ ಮನವಿ

ಕೊಲ್ಕತ್ತಾ ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ನ್ಯಾಯಾಲಯದ ಆದೇಶದ ನಂತರ ಭಟ್ಟಾಚಾರ್ಯ ಅವರನ್ನು ಶಿಕ್ಷಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಯಿತು. ನಿವೃತ್ತ ನ್ಯಾಯಮೂರ್ತಿ ರಂಜಿತ್ ಕುಮಾರ್ ಬಾಗ್ ನೇತೃತ್ವದ ಪ್ರಕರಣದ ಮೊದಲ ಸ್ವತಂತ್ರ ತನಿಖಾ ಸಮಿತಿ- ಬ್ಯಾಗ್ ಸಮಿತಿಯು ವರದಿಯನ್ನು ಸಲ್ಲಿಸಿತ್ತು. ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗಾಗಿ ಕೋಲ್ಕತ್ತಾ ಹೈಕೋರ್ಟ್ ಇದನ್ನು ರಚಿಸಿತ್ತು.

ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಿದ ನಂತರ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಮೊದಲು ಇಡಿ ಸಮನ್ಸ್ ನೀಡಿತ್ತು. ಭಟ್ಟಾಚಾರ್ಯ ಅವರ ನಿವಾಸದಲ್ಲಿ ನಡೆಸಿದ ದಾಳಿಯಿಂದ ಇಡಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ನಿರ್ಣಾಯಕ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

ಇದನ್ನೂ ಓದಿ: Breaking News: ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿಗೆ ಸೇರಿದ ₹48.22 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ (ಡಬ್ಲ್ಯುಬಿಎಸ್‌ಎಸ್‌ಸಿ) ನೇಮಕಾತಿ ಹಗರಣದಲ್ಲಿ ಆಗಿನ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರನ್ನು ಇಡಿ ಈಗಾಗಲೇ ಬಂಧಿಸಿದೆ. ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಬಂಧನದ ನಂತರ ಇಡಿ ಮಾಣಿಕ್ ಭಟ್ಟಾಚಾರ್ಯ ಅವರನ್ನು ವಿಚಾರಣೆಗೆ ಕರೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು