ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು?

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಅನಿಲ್ ಅಂಬಾನಿ ವಿರುದ್ಧ ಇಡಿ ಕ್ರಮ ತೀವ್ರಗೊಂಡಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​ಕಾಂ) ವಿರುದ್ಧದ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ (ಇಡಿ) ಬಿಗ್ ಶಾಕ್ ಕೊಟ್ಟಿದೆ. ಅನಿಲ್ ಅಂಬಾನಿ ಸೇರಿದ ಬರೋಬ್ಬರಿ 3,716 ಮೌಲ್ಯದ ಮನೆಯನ್ನು ಇಡಿ ಜಪ್ತಿ ಮಾಡಿದೆ.

ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು?
Anil Ambani

Updated on: Feb 25, 2026 | 10:59 PM

ಮುಂಬೈ, (ಫೆಬ್ರವರಿ 25): ಕೈಗಾರಿಕೋದ್ಯಮಿ ಅನಿಲ್ ಅಂಬಾನಿ (Anil Ambani) ಅವರ ಮುಂಬೈನಲ್ಲಿರುವ 3,716 ಮೌಲ್ಯದ ‘ಅಬೋಡ್’ ನಿವಾಸವನ್ನು ಇಡಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದೆ. ಅನಿಲ್ ಅಂಬಾನಿ ಅವರ ಸಮೂಹ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​​ಕಾಂ) ವಿರುದ್ಧ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಅನಿಲ್ ಅಂಬಾನಿಗೆ ಸೇರಿದ ಬಂಗಲೆಯನ್ನು ಜಪ್ತಿ ಮಾಡಿದೆ ಎಂಬ ತಿಳಿದುಬಂದಿದೆ.

ಮುಂಬೈನ ಪಾಲಿಹಿಲ್ ಪ್ರದೇಶದಲ್ಲಿರುವ 17 ಅಂತಸ್ತಿನ, 66 ಮೀ.ಎತ್ತರದ ಐಷಾರಾಮಿ ಆಸ್ತಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ತಾತ್ಕಾಲಿಕ ಜಪ್ತಿ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಜಪ್ತಿ ಮಾಡಲಾದ ಆಸ್ತಿಯ ಮೌಲ್ಯ 15,700 ಕೋಟಿ ರೂಪಾಯಿಗೆ ತಲುಪಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಿಲ್ ಅಂಬಾನಿಗೆ ಇನ್ನಷ್ಟು ಕುಣಿಕೆ ಬಿಗಿದ ಇಡಿ; 3,000 ಕೋಟಿ ರೂ ಮೌಲ್ಯದ ವಿವಿಧ ಆಸ್ತಿಗಳು ಮುಟ್ಟುಗೋಲು

ಈ ಜಪ್ತಿ ಆರ್‌ಕಾಮ್‌ನಿಂದ ಹಣಕಾಸು ಅಕ್ರಮಗಳು ಮತ್ತು ಸಾಲದ ಹಣದ ದುರ್ಬಳಕೆ ಆರೋಪಗಳ ಕುರಿತು ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿದೆ. ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಕಂಪನಿಗಳಿಂದ ವಂಚನೆ, ಲಂಚ ಮತ್ತು ಬ್ಯಾಂಕ್ ಸಾಲಗಳ ದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿಕೊಂಡಿರುವ ಎರಡು ಎಫ್‌ಐಆರ್‌ಗಳ ಆಧಾರದಲ್ಲಿ ಇಡಿ ತನಿಖೆ ನಡೆಸುತ್ತಿದೆ.

ಇನ್ನು ಮೂಲಗಳ ಪ್ರಕಾರ,  ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಅವರನ್ನು ಇಡಿ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಅವರನ್ನು ಈ ಹಿಂದೆ ಆಗಸ್ಟ್ 2025 ರಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಆ ವೇಳೆ ಪಿಎಂಎಲ್‌ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗಿತ್ತು. ಈಗ ಮತ್ತೊಮ್ಮೆ ವಿಚಾರಣೆಗೆ ಒಳಪಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 pm, Wed, 25 February 26

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us