Breaking News: ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯವು (ಇಡಿ) ನ್ಯಾಷನಲ್ ಹೆರಾಲ್ಡ್ನ ಅಧಿಕೃತ ಕಟ್ಟಡದಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದೆ.
ದೆಹಲಿ: ನ್ಯಾಷನಲ್ ಹೆರಾಲ್ಡ್ (National Herald) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದೆಹಲಿಯ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದೆ. ಕಳೆದ ತಿಂಗಳು ಇಡಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಮತ್ತು ಸೋನಿಯಾ ಗಾಂಧಿ (Sonia Gandhi) ಅವರನ್ನು ವಿಚಾರಣೆಗೊಳಪಡಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ತನಿಖಾ ಸಂಸ್ಥೆಯು ಇಂದು ದೆಹಲಿಯಲ್ಲಿರುವ ಪತ್ರಿಕೆಯ ಕಚೇರಿಗಳು ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಗೆ ಸಂಬಂಧಿಸಿದ ಹಲವಾರು ಸಂಸ್ಥೆ ಸೇರಿದಂತೆ ಸುಮಾರು 12 ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ . ಶೋಧ ನಂತರ ತನಿಖಾ ಸಂಸ್ಥೆ ಈ ಆಸ್ತಿಗಳನ್ನು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಬಗ್ಗೆ ಪಿಎಂಎಲ್ಎ ಅಡಿಯಲ್ಲಿ 9 ತಿಂಗಳ ಹಿಂದೆ ಪ್ರಕರಣ ದಾಖಲಾಗಿದ್ದು, 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ನೀಡಿದ ದೂರು ಆಧರಿಸಿ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿತ್ತು.
Enforcement Directorate today carried out searches at multiple locations in Delhi and other places in the alleged National Herald money laundering case pic.twitter.com/WOOEwzkml7
— ANI (@ANI) August 2, 2022
ಏನಿದು ಪ್ರಕರಣ?: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿತ್ತು. ಇದು 1937ರಲ್ಲಿ 5,000 ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಅದರ ಷೇರುದಾರರಾಗಿ ಸ್ಥಾಪಿಸಿತು. ಈ ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ. 2010ರಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 1,057 ಷೇರುದಾರರನ್ನು ಹೊಂದಿತ್ತು. ಇದು ತೀವ್ರ ನಷ್ಟವನ್ನು ಅನುಭವಿಸಿತು. ಹೀಗಾಗಿ, ಅದರ ಹಿಡುವಳಿಗಳನ್ನು 2011ರಲ್ಲಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (YIL)ಗೆ ವರ್ಗಾಯಿಸಲಾಯಿತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅದರ ನಿರ್ದೇಶಕರ ಮಂಡಳಿಯಲ್ಲಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಾಗ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರು ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. 2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲ ಸುಬ್ರಮಣಿಯನ್ ಸ್ವಾಮಿ ಅವರು ಯಂಗ್ ಇಂಡಿಯನ್ ಲಿಮಿಟೆಡ್ (ವೈಐಎಲ್) ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಕೆಲವು ಕಾಂಗ್ರೆಸ್ ನಾಯಕರು ವಂಚನೆ ಮತ್ತು ನಂಬಿಕೆಯ ಉಲ್ಲಂಘನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ವಿಚಾರಣಾ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದರು. ವೈಐಎಲ್ ನ್ಯಾಷನಲ್ ಹೆರಾಲ್ಡ್ ಆಸ್ತಿಯನ್ನು ‘ದುರುದ್ದೇಶಪೂರಿತ’ ರೀತಿಯಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾಧೀನಪಡಿಸಿಕೊಳ್ಳುವ ಸಲುವಾಗಿ ಗಾಂಧಿ ಕುಟುಂಬದವರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಪತ್ರಿಕೆಯ ಹಿಂದಿನ ಪ್ರಕಾಶಕರಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ (ವೈಐ) ಎಂಬ ಸಂಸ್ಥೆಯ ಮೂಲಕ ಖರೀದಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಒಡೆತನದ ಆಸ್ತಿಯನ್ನು ಗಾಂಧಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.
Published On - 12:20 pm, Tue, 2 August 22