AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಆಪ್ತರ ಮನೆಯಲ್ಲಿ  ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ
ವಿ ಸೆಂಥಿಲ್ ಬಾಲಾಜಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 13, 2023 | 11:22 AM

ಚೆನ್ನೈ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಮತ್ತು ಅವರ ಆಪ್ತರ ಮನೆಯಲ್ಲಿ  ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಆಪ್ತರ ಮನೆಗಳಲ್ಲಿ ಇಡಿ ಹುಡುಕಾಟ ಆರಂಭಿಸಿದೆ. ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿಗೆ ಸಂಬಂಧಿಸಿದ ಮನೆಗಳ ಮೇಲೆ ದಾಳಿ ನಡೆಸಿದ್ದರು. ಪಿಟಿಐ ಪ್ರಕಾರ, ಅಧಿಕಾರಿಗಳು, ಅಕ್ರಮ ಹಣ ವರ್ಗಾವಣೆ ಭಾಗವಾಗಿ ತಮಿಳುನಾಡು ಇಂಧನ ಸಚಿವ ವಿ ಸೆಂಥಿಲ್ ಬಾಲಾಜಿ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧದ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸೆಂಥಿಲ್ ಬಾಲಾಜಿ, ಜಾರಿ ನಿರ್ದೇಶನಾಲಯ ನಡೆಸುತ್ತಿರುವ ಶೋಧದ ಉದ್ದೇಶವೇನೆಂದು ನನಗೆ ತಿಳಿದಿಲ್ಲ, ಆ ಬಗ್ಗೆ ನಾವು ಕಾದು ನೋಡಬೇಕಾಗಿದೆ, ಆದರೆ ಈ ಬಗ್ಗೆ ನನಗೆ ಯಾವುದೇ ಪೂರ್ವ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯಕ್ಕೆ ಅಥವಾ ಆದಾಯ ತೆರಿಗೆ ಇಲಾಖೆಯಾಗೆ ಸಂಪೂರ್ಣ ಸಹಕಾರ ನೀಡಲು ನಾನು ಸಿದ್ಧನಿದ್ದೇನೆ. ಅಲ್ಲದೆ ಅವರಿಗೆ ಬೇಕಿದ್ದರೆ ವಿವರಣೆಗೆ ಬರಲು ಸಿದ್ಧನಿದ್ದೇನೆ ಎಂದು ಸೆಂಥಿಲ್ ಬಾಲಾಜಿ ಹೇಳಿದ್ದಾರೆ.

ಇದನ್ನೂ ಓದಿ: NIA Raids: ದಾಳಿಗಾಗಿ ಮೂರು ತಿಂಗಳಿನಿಂದ ತನಿಖೆ ನಡೆಸಿದ್ದ ಎನ್​ಐಎ, ಹೀಗಿದೆ ಬಂಧಿತರ ವೃತ್ತಾಂತ

ಮೇ 26 ರಂದು ತಮಿಳುನಾಡಿನಾದ್ಯಂತ ಸಚಿವ ಸೆಂಥಿಲ್ ಬಾಲಾಜಿ ಅವರ ಸಂಬಂಧಿಕರಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ಸಚಿವರ ಸಹೋದರನ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.

ಸೆಂಥಿಲ್ ಬಾಲಾಜಿ ಕರೂರಿನ ಡಿಎಂಕೆಯ ಹಿರಿಯ ನಾಯಕ. ಕ್ಷೇತ್ರದಲ್ಲಿ ಭಾರೀ ಪೈಪೋಟಿ ನಡೆಸಿರುವ ಅವರು ಮಾಜಿ ಸಾರಿಗೆ ಸಚಿವ ವಿಜಯಭಾಸ್ಕರ್ ವಿರುದ್ಧ ಗೆದಿದ್ದರು. ಸೆಂಥಿಲ್ ಬಾಲಾಜಿ ಆರಂಭದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಇದ್ದರು, ನಂತರ ಅವರು ಆ ಪಕ್ಷವನ್ನು ತೊರೆದು ಡಿಎಂಕೆಗೆ ಹೋಗಿದ್ದಾರೆ. ನಂತರ ಡಿಎಂಕೆ ಸಂಪುಟದಲ್ಲಿ ಇಂಧನ ಸಚಿವರಾಗಿ ನೇಮಕಗೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Tue, 13 June 23