ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್
ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಭೂಪೇಶ್ ಬಘೇಲ್‌ಗೆ ಒಟ್ಟು 508 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಲಾಯ ತನಿಖೆ ವೇಳೆ ಗೊತ್ತಾಗಿತ್ತು. ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಭೂಪೇಶ್ ಬಘೇಲ್‌ಗೆ ಹಣವನ್ನು ಕಳುಹಿಸಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಪ್ರತಿಪಾದಿಸಲಾಗಿದೆ.
ನವದೆಹಲಿ, ಜನವರಿ 6: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ (Mahadev Betting App Case) ಸಂಬಂಧಿಸಿದ ಪ್ರಮುಖ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯವು (ED) ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಅವರ ಹೆಸರನ್ನು ಒಳಗೊಂಡಂತೆ 6 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇತರ ಐವರು ಆರೋಪಿಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದ್ದು, ವಿವಾದಾತ್ಮಕ ಬೆಟ್ಟಿಂಗ್ ಆ್ಯಪ್ ಹಗರಣದ ಮೇಲೆ ಬೆಳಕು ಚೆಲ್ಲಿದೆ.
ದೋಷಾರೋಪಪಟ್ಟಿಯಲ್ಲಿ ಬಘೇಲ್ ಜತೆಗೆ ಶುಭಂ ಸೋನಿ, ಅಮಿತ್ ಕುಮಾರ್ ಅಗರ್ವಾಲ್, ರೋಹಿತ್ ಗುಲಾಟಿ, ಭೀಮ್ ಸಿಂಗ್ ಮತ್ತು ಅಸೀಮ್ ದಾಸ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ಕೊರಿಯರ್ ಆಗಿ ಕೆಲಸ ಮಾಡುತ್ತಿದ್ದ ಅಸೀಮ್ ದಾಸ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿದ್ದು, ಅವರ ನಿವೇಶನದಿಂದ ಸುಮಾರು 5.39 ಕೋಟಿ ರೂ. ವಶಪಡಿಸಿಕೊಂಡಿರುವ ಬಗ್ಗೆ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ವಶಪಡಿಸಿಕೊಂಡ ಹಣವನ್ನು ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್‌ಗೆ ಕಳುಹಿಸಲಾಗಿದೆ ಎಂದು ಅಸೀಮ್ ದಾಸ್ ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಈ ವಹಿವಾಟು ನಡೆದಿದೆ ಎನ್ನಲಾಗಿದೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಭೂಪೇಶ್ ಬಘೇಲ್‌ಗೆ ಒಟ್ಟು 508 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಲಾಯ ತನಿಖೆ ವೇಳೆ ಗೊತ್ತಾಗಿತ್ತು. ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಭೂಪೇಶ್ ಬಘೇಲ್‌ಗೆ ಹಣವನ್ನು ಕಳುಹಿಸಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಪ್ರತಿಪಾದಿಸಲಾಗಿದೆ.
ಇದನ್ನೂ ಓದಿ: ಬೆಟ್ಟಿಂಗ್ ಆ್ಯಪ್ ಪ್ರವರ್ತಕರಿಂದ 508 ಕೋಟಿ ಪಡೆದ ಭೂಪೇಶ್ ಬಘೇಲ್: ಇ.ಡಿ
ಏನಿದು ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣ?
ಮಹದೇವ್ ಆನ್‌ಲೈನ್ ಆ್ಯಪ್ ಪ್ರವರ್ತಕರು 5,000 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ. ಆ್ಯಪ್ ಸ್ಕಿಲ್ ಗೇಮ್‌ಗಳ ಹೆಸರಿನಲ್ಲಿ ಭಾರತದಲ್ಲಿ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ನಡೆಸುತ್ತಿದೆ. ಆ್ಯಪ್ ಕಂಪನಿಯು ವೆಬ್‌ಸೈಟ್‌ಗಳಲ್ಲಿ ಸಂಪರ್ಕ ಸಂಖ್ಯೆಯ ಜಾಹೀರಾತು ನೀಡಿ, ಹಣ ಠೇವಣಿ ಮಾಡಲು laser247.com ನಂತಹ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವಂತೆ ಬಳಕೆದಾರರಿಗೆ ಸೂಚಿಸುತ್ತದೆ. ಈ ಆ್ಯಪ್‌ನ ಪ್ರವರ್ತಕರು ಛತ್ತೀಸ್ಗಢ ಮಾಜಿ ಸಿಎಂಗೆ ಹಣ ಕಳುಹಿಸಿಕೊಟ್ಟಿರುವುದನ್ನು ಜಾರಿ ನಿರ್ದೇಶನಾಲಯ ಬಯಲಿಗೆಳೆದಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ