Breaking: ಇಡಿ ಅಧಿಕಾರಿಗಳಿಂದ ಶಿವಸೇನಾ ಸಂಸದ ಸಂಜಯ್ ರಾವತ್ ಬಂಧನ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಬಂಧಿಸಿದ್ದಾರೆ.

Breaking: ಇಡಿ ಅಧಿಕಾರಿಗಳಿಂದ ಶಿವಸೇನಾ ಸಂಸದ ಸಂಜಯ್ ರಾವತ್ ಬಂಧನ
Sanjay Raut
Edited By:

Updated on: Jul 31, 2022 | 4:53 PM

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಬಂಧಿಸಿದ್ದಾರೆ.

ಸಂಜಯ್ ರಾವತ್ ಅವರ ಪತ್ನಿ ವರ್ಷಾ ಹಾಗೂ ಸಹೋದರ ಸುನೀಲ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.
ಜುಲೈ 1 ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ದಾಖಲಿಲಾಗಿತ್ತು.

ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಪತ್ರಾಚಾವ್ಲ್​ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್ ರಾವತ್ ಅವರನ್ನು ಒಂಬತ್ತು ಗಂಟೆಗಳ ವಿಚಾರಣೆಯ ನಂತರ ಇಡಿ ಅಂತಿಮವಾಗಿ ವಶಕ್ಕೆ ಪಡೆದಿದೆ.
1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು.
ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು.

ಭಾನುವಾರ ಬೆಳಗ್ಗೆ ಮುಂಬೈನ ಬಂಡಪ್‍ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್‌ಪಿಎಫ್ ಅಧಿಕಾರಿಗಳ ಜೊತೆ ದಾಳಿ ಮಾಡಿದೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಸಿತ್ತು.

ಮುಂಬೈನ ಪತ್ರಾ ಚಾವ್ಲ್​ ಮರು-ಅಭಿವೃದ್ಧಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾವತ್‍ಗೆ ಸಮನ್ಸ್ ನೀಡಿತ್ತು. ಆದರೆ ಅವರು ಈ ಸಮನ್ಸ್ ನಿರಾಕರಿಸಿ ಇದು ರಾಜಕೀಯ ದ್ವೇಷದಿಂದಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದರು.

 

 

Published On - 4:44 pm, Sun, 31 July 22