ಇಡಿ ಕಳುಹಿಸಿದ್ದು ಲವ್ ಲೆಟರ್, ಡೆತ್ ವಾರೆಂಟ್ ಅಲ್ಲ: ಸಂಜಯ್ ರಾವುತ್

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧ ದಾಖಲಾಗಿರುವ ಅಕ್ರಮ ಪ್ರಕರಣದಲ್ಲಿ ಇಡಿ ಮಂಗಳವಾರ ಪರಬ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇಡಿ ಕಳುಹಿಸಿದ್ದು ಲವ್ ಲೆಟರ್, ಡೆತ್ ವಾರೆಂಟ್ ಅಲ್ಲ: ಸಂಜಯ್ ರಾವುತ್
ಸಂಜಯ್ ರಾವುತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 30, 2021 | 2:50 PM

ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ನೋಟಿಸ್ “ಡೆತ್ ವಾರಂಟ್” ಅಲ್ಲ, ರಾಜಕೀಯ ಕಾರ್ಯಕರ್ತರಿಗೆ ನೀಡಿರುವ”ಲವ್ ಲೆಟರ್” ಎಂದು ಹೇಳಿದ್ದಾರೆ. ಅನಿಲ್ ಪರಬ್​​ಗೆ ಇಡಿ ನೋಟಿಸ್ ನೀಡಿರುವ ಬಗ್ಗೆ ರಾವುತ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ. “ಬಲವಾದ ಮತ್ತು ಅಜೇಯವಾದ ಮಹಾ ವಿಕಾಸ ಅಘಾಡಿ (MVA) ಯ ಗೋಡೆಯನ್ನು ಒಡೆಯುವ ವಿಫಲ ಪ್ರಯತ್ನಗಳ ನಂತರ ಇಂತಹ ಪ್ರೇಮ ಪತ್ರಗಳು ಹೆಚ್ಚಾಗಿದೆ ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಪರಬ್ ಅವರನ್ನು ಬಿಜೆಪಿ ನಾಯಕರು ಗುರಿಯಾಗಿಸಿಕೊಂಡಿದ್ದಾರೆ ಎಂದು ರಾವುತ್ ಹೇಳಿದ್ದಾರೆ. ಅವರು ನೋಟಿಸ್‌ಗೆ ಪ್ರತಿಕ್ರಿಯಿಸುತ್ತಾರೆ ಮತ್ತು ಇಡಿಗೆ ಸಹಕರಿಸುತ್ತಾರೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧ ದಾಖಲಾಗಿರುವ ಅಕ್ರಮ ಪ್ರಕರಣದಲ್ಲಿ ಇಡಿ ಮಂಗಳವಾರ ಪರಬ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

“ಒಬ್ಬ ಬಿಜೆಪಿ ವ್ಯಕ್ತಿ ಇಡಿಯಲ್ಲಿ ಡೆಸ್ಕ್ ಆಫೀಸರ್ ಆಗಿರಬಹುದು ಅಥವಾ ಇಡಿ ಅಧಿಕಾರಿ ಬಿಜೆಪಿಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ರಾವುತ್ ಹೇಳಿದರು.

ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಶಿವಸೇನೆ ಮಹಾರಾಷ್ಟ್ರದಲ್ಲಿ ಎನ್​​ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಂಡಿದೆ. ಕೊವಿಡ್ -19 ನಿರ್ಬಂಧಗಳಿಂದಾಗಿ ಮಹಾರಾಷ್ಟ್ರದಲ್ಲಿ ದೇವಾಲಯಗಳನ್ನು ಪುನಃ ತೆರೆಯಲು ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಶಿವಸೇನೆ ಮಹಾರಾಷ್ಟ್ರದಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಂಡಿದೆ.

ಕೊವಿಡ್ -19 ನಿರ್ಬಂಧಗಳಿಂದಾಗಿ ಮಹಾರಾಷ್ಟ್ರದಲ್ಲಿ ದೇವಾಲಯಗಳನ್ನು ಪುನಃ ತೆರೆಯಲು ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. “ಮಹಾರಾಷ್ಟ್ರ ಸರ್ಕಾರವು ಕೇಂದ್ರದ ನಿರ್ದೇಶನಗಳನ್ನು ಅನುಸರಿಸುತ್ತಿದೆ, ಇದು ಮುಂಬರುವ ಹಬ್ಬಗಳು ಮತ್ತು ಕೊರೊನಾವೈರಸ್ ಸೋಂಕು ಹರಡುವ ಭಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ರಾಜ್ಯಗಳನ್ನು ಕೇಳಿದೆ. ಕೇಂದ್ರ ಸರ್ಕಾರವು ‘ಹಿಂದುತ್ವವಾದಿ’ (ಹಿಂದೂ ಪರ) ಎಂದು ನಾವು ನಂಬುತ್ತೇವೆ ಎಂದು ಅವರು ಹೇಳಿದರು. ಹರ್ಯಾಣ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಪ್ರಶ್ನಿಸಿದ ರಾವುತ್, ರೈತರು ಚೆಲ್ಲಿದ ರಕ್ತಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

ಹರ್ಯಾಣದ ಸ್ಥಳೀಯ ಎಸ್‌ಡಿಎಂ ಪ್ರತಿಭಟನಾ ನಿರತ ರೈತರ ತಲೆ ಒಡೆಯುವವರೆಗೂ ಲಾಠಿಚಾರ್ಜ್ ಮಾಡಲು ಪೊಲೀಸರಿಗೆ ಆದೇಶ ನೀಡಿತು ಎಂದು ಹೇಳಿದ್ದಾರೆ.

ಕರ್ನಾಲ್‌ನಲ್ಲಿ ರೈತರ ಪ್ರತಿಭಟನೆಯ ಸಮಯದಲ್ಲಿ ಕರ್ತವ್ಯದ ಮ್ಯಾಜಿಸ್ಟ್ರೇಟ್ ಆಗಿ ನಿಯೋಜನೆಗೊಂಡ ಅಧಿಕಾರಿ, ರೈತರ ತಲೆಗೆ ಒಡೆಯಲು ಪೊಲೀಸರಸ್ಸಿ ಕೇಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ವೈರಲ್ ಆಗಿದ್ದು, ವಿವಿಧ ರಾಜಕೀಯ ಪಕ್ಷಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧನ್ಖರ್ ಮತ್ತು ಭಾರತೀಯ ಜನತಾ ಪಕ್ಷದ ಸಭೆಯನ್ನು ವಿರೋಧಿಸಿ ಕರ್ನಾಲ್ ಕಡೆಗೆ ಹೋಗುವಾಗ ಹರ್ಯಾಣದ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ರೈತರ ಗುಂಪಿನ ಮೇಲೆ ಪೊಲೀಸರು ಲಾಠಿ  ಪ್ರಹಾರ ಮಾಡಿದ್ದು ಇದರಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ:  ಶಾಲೆ ಯಾವಾಗ ಆರಂಭ ಮಾಡುತ್ತೀರಾ? ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ಗೆ ಬಾಲಕನ ಪ್ರಶ್ನೆ; ವಿಡಿಯೋ ವೈರಲ್

ಇದನ್ನೂ ಓದಿ:  ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ

(ED is not a death warrant but a love letter for political workers says Shiv Sena MP Sanjay Raut)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್