ದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪರಮಾಪ್ತ ಅಹ್ಮದ್ ಪಟೇಲ್ಗೆ ED ಅಧಿಕಾರಿಗಳು ಶಾಕ್ ನೀಡಿದ್ದಾರೆ. ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬ್ಯಾಂಕ್ ವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಹ್ಮದ್ ಪಟೇಲ್ ಮನೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ದೆಹಲಿ ನಿವಾಸದಲ್ಲಿ 9,778 ಕೋಟಿ ರೂ. ಆಸ್ತಿಯನ್ನು ಜಪ್ತಿ ಮಾಡಿರುವ ಇ.ಡಿ ಅಧಿಕಾರಿಗಳು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬಹುಕೋಟಿ ಸಂದೇಸರ ಹಗರಣದಲ್ಲಿ ಸಂದೇಸರ ಕಂಪನಿಯಿಂದ ಹಣ ಪಡೆದಿರುವ ಆರೋಪ, ಆಂಧ್ರ ಬ್ಯಾಂಕ್‌ನಿಂದ 5,000 ಕೋಟಿ ಸಾಲ ಪಡೆದಿರುವ ಆರೋಪ, ಅದನ್ನು ವಿದೇಶಕ್ಕೆ ವರ್ಗಾವಣೆ ಮಾಡಿರುವ ಆರೋಪ, ಸ್ಟೆರ್ಲಿಂಗ್ ಬಯೋಟೆಕ್ ಕಂಪನಿಯಲ್ಲಿ ಅವ್ಯವಹಾರ ಆರೋಪಗಳು ಅಹ್ಮದ್ ಪಟೇಲ್ ಅವರ ವಿರುದ್ಧ ಕೇಳಿಬಂದಿವೆ.
Published On - 12:06 pm, Sat, 27 June 20