ಪ್ರಚಾರದ ವೇಳೆ ಆರೋಗ್ಯ ಸರಿಯಾಗಿತ್ತಾ?; ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಗೆ ಇಡಿ ಆಕ್ಷೇಪ

|

Updated on: May 30, 2024 | 6:40 PM

ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಜಾಮೀನಿನ ಮೇಲೆ ಹೊರಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂನ್ 2ರಂದು ತಿಹಾರ್ ಜೈಲಿಗೆ ಹಿಂತಿರುಗಬೇಕಾಗಿದೆ. ದೆಹಲಿ ಸಿಎಂ ಕೇಜ್ರಿವಾಲ್ ಮೇ 10ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿಂದ ಮಧ್ಯಂತರ ಜಾಮೀನು ಪಡೆದಿದ್ದರು.

ಪ್ರಚಾರದ ವೇಳೆ ಆರೋಗ್ಯ ಸರಿಯಾಗಿತ್ತಾ?; ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಗೆ ಇಡಿ ಆಕ್ಷೇಪ
ಅರವಿಂದ್ ಕೇಜ್ರಿವಾಲ್
Follow us on

ನವದೆಹಲಿ: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಇನ್ನೆರಡು ದಿನದಲ್ಲಿ ಜೈಲಿಗೆ ವಾಪಾಸ್ ತೆರಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಜಾಮೀನು ವಿಸ್ತರಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾರಿ ನಿರ್ದೇಶನಾಲಯ (ED) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದೆ. ಅನಾರೋಗ್ಯದಿಂದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಅರ್ಜಿ ಸಲ್ಲಿಸುವುದಕ್ಕೆ ನಮ್ಮ ಆಕ್ಷೇಪವಿದೆ. ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಇಡೀ ದಿನ ಭಾಗವಹಿಸಲು ಕೇಜ್ರಿವಾಲ್ ಅವರಿಗೆ ಪ್ರಯಾಸವಾಗಲಿಲ್ಲ. ಅದಕ್ಕೆ ಆರೋಗ್ಯ ಸಮಸ್ಯೆ ಉಂಟಾಗಲಿಲ್ಲವೇ? ಎಂದು ಪ್ರಶ್ನಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಮತ್ತು ನಿಯಮಿತ ಜಾಮೀನು ಎರಡಕ್ಕೂ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯಲ್ಲಿ ಇಡಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಗಳ ಕುರಿತು ರೋಸ್ ಅವೆನ್ಯೂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕಾನೂನು ತಂಡದ ಮೂಲಕ ಸಂಬಂಧಪಟ್ಟ ನ್ಯಾಯಾಲಯಕ್ಕೆ ಎರಡು ವಿಭಿನ್ನ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಅವರ ಕಾನೂನು ತಂಡವು ಮೊದಲ ಜಾಮೀನು ಅರ್ಜಿಯು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ನಿಯಮಿತ ಜಾಮೀನು ಮತ್ತು ಎರಡನೆಯದು ವೈದ್ಯಕೀಯ ಕಾರಣಗಳಿಗಾಗಿ 7 ದಿನಗಳ ಮಧ್ಯಂತರ ಜಾಮೀನು ವಿಸ್ತರಣೆಯನ್ನು ಕೋರಿ ಮಧ್ಯಂತರ ಜಾಮೀನು ಅರ್ಜಿಯಾಗಿದೆ ಎಂದು ಹೇಳುತ್ತದೆ. ಎರಡೂ ಅರ್ಜಿಗಳನ್ನು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ವಿಚಾರಣೆ ನಡೆಸಲಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೇ 10ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಜೂನ್ 2ರಂದು ಅವರನ್ನು ತಿಹಾರ್ ಜೈಲಿಗೆ ಶರಣಾಗುವಂತೆ ಕೇಳಲಾಯಿತು. ಮೇ 28ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಸಲ್ಲಿಸಲಾದ ಇಡಿ ಪೂರಕ ಆರೋಪಪಟ್ಟಿ (ಪ್ರಾಸಿಕ್ಯೂಷನ್ ದೂರು) ಮೇಲಿನ ಕಾಗ್ನಿಜೆನ್ಸ್ ಪಾಯಿಂಟ್‌ನ ಆದೇಶವನ್ನು ರೂಸ್ ಅವೆನ್ಯೂ ಕೋರ್ಟ್ ಕಾಯ್ದಿರಿಸಿದೆ.

ಇದನ್ನೂ ಓದಿ: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಮೇ 10ರಂದು ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಇಡಿ ದಾಖಲಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೂನ್ 1ರವರೆಗೆ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಅವರು ಮುಖ್ಯಮಂತ್ರಿ ಕಚೇರಿ ಮತ್ತು ದೆಹಲಿ ಸಚಿವಾಲಯಕ್ಕೆ ಭೇಟಿ ನೀಡದಂತೆ ಆದೇಶ ನೀಡಿದೆ. ಜೂನ್ 2ರಂದು ಶರಣಾಗುವಂತೆ ಕೇಜ್ರಿವಾಲ್‌ಗೆ ಪೀಠ ಹೇಳಿತ್ತು.

ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಅದು ಇಡಿಯಿಂದ ಬಂಧನ ಮತ್ತು ಅಬಕಾರಿ ನೀತಿ ಪ್ರಕರಣದಲ್ಲಿ ಅವರ ನಂತರದ ಬಂಧನದ ವಿರುದ್ಧದ ಅವರ ಮನವಿಯನ್ನು ವಜಾಗೊಳಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ