Land For Jobs Case: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆ ಮೇಲೆ ಇ.ಡಿ ದಾಳಿ

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ.

Land For Jobs Case: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆ ಮೇಲೆ ಇ.ಡಿ ದಾಳಿ
ತೇಜಸ್ವಿ ಯಾದವ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 10, 2023 | 12:08 PM

ದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣಕ್ಕೆ (Land For Jobs Case) ಸಂಬಂಧಿಸಿದಂತೆ ಇಂದು (ಮಾ.10) ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejaswi Yadav) ಅವರ ದೆಹಲಿಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಈ ಹಿಂದೆ ಕೇಂದ್ರ ತನಿಖಾ ದಳ ತೇಜಸ್ವಿ ಯಾದವ್ ಅವರ ತಾಯಿ ರಾಬ್ರಿ ದೇವಿ ಮತ್ತು ಅವರ ತಂದೆ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ಸತತ ಎರಡು ದಿನಗಳ ಕಾಲ ಪ್ರಶ್ನಿಸಿತ್ತು. ಇದೀಗ ಇಂದು (ಮಾ.10) ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿಯಲ್ಲಿರುವ ಮನೆಯ ಮೇಲೆ ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಶೋಧ ಕಾರ್ಯವನ್ನು ಆರಂಭಿಸಿದೆ. ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪದ ಮೇಳೆ ಜಾರಿ ನಿರ್ದೇಶನಾಲಯವು 15 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಸಿಬಿಐ ಮಾರ್ಚ್ 7 ರಂದು ಮಾಜಿ ಕೇಂದ್ರ ರೈಲ್ವೇ ಸಚಿವ ಲಾಲು ಯಾದವ್ ಅವರನ್ನು ದೆಹಲಿಯಲ್ಲಿರುವ ಅವರ ಮಗಳು ಮಿಸಾ ಭಾರ್ತಿ ಅವರ ಮನೆಯಲ್ಲಿ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿತು. ಲಾಲು ಪ್ರಸಾದ್ ಯಾದವ್ ಪ್ರಸ್ತುತ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯನ್ನು ಪಡೆದು ವಿಶ್ರಾಂತಿಯಲ್ಲಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆ ಮಾಡುವ ಮೊದಲು ಅವರ ಪತ್ನಿ ರಾಬ್ರಿ ದೇವಿ ಅವರನ್ನು ಸಿಬಿಐ ಪಾಟ್ನಾ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಯಾದವ್ ದಂಪತಿಗಳು ಮತ್ತು ಅವರ ಪುತ್ರಿಯರಾದ ಮಿಸಾ ಮತ್ತು ಹೇಮಾ ಅವರನ್ನು ಕೂಡ ಈ ಪ್ರಕರಣದಲ್ಲಿ ಸಿಬಿಐ ಹೆಸರಿಸಿದೆ. ಲಾಲು ಪ್ರಸಾದ್ ಯಾದವ್ 2004 ರಿಂದ 2009 ರ ವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗದ ಬದಲಾಗಿ ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ ಅಗ್ಗದ ದರದಲ್ಲಿ ಭೂಮಿ ಖರೀದಿಸಿದ್ದಾರೆ ಎಂಬ ಆರೋಪವನ್ನು ಆಧರಿಸಿ ಸಿಬಿಐ ದಾಳಿ ನಡೆಸಿತ್ತು. ಇದೀಗ ಇ.ಡಿ ತೇಜ್ವಸಿ ಯಾದವ್ ಮೇಲೆ ದಾಳಿ ನಡೆಸಿದೆ.

ಇದನ್ನೂ ಓದಿ: Land For Jobs Case: ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ

ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದವರನ್ನು ಮಾತ್ರವಲ್ಲದೆ ಮೇ 2022ರಲ್ಲಿ ನೋಂದಾಯಿಸಲಾದ ಎಫ್‌ಐಆರ್ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಹೆಸರಿಸಿದೆ. ಕಳೆದ ವರ್ಷ ಜುಲೈನಲ್ಲಿ, ಲಾಲು ಅವರ ಸಹಾಯಕ ಮತ್ತು ವಿಶೇಷ ಕರ್ತವ್ಯದ ಮಾಜಿ ಅಧಿಕಾರಿ (OSD) ಭೋಲಾ ಯಾದವ್ ಅವರನ್ನು ಈ ಪ್ರಕರಣದಲ್ಲಿ ಸಿಬಿಐ ಬಂಧಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ 16 ಜನರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಮಾರ್ಚ್ 15 ರಂದು ಅವರೆಲ್ಲರಿಗೂ ನ್ಯಾಯಾಲಯ ಸಮನ್ಸ್ ನೀಡಿದೆ. ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವಾಗಲೇ ಈ ದಾಳಿಗಳು ನಡೆದಿವೆ.

ಬಿಜೆಪಿಯು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಎಂಟು ಪ್ರತಿಪಕ್ಷಗಳು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದವು. ಈ ಪತ್ರದಲ್ಲಿ ತೇಜಸ್ವಿ ಯಾದವ್ ಅವರ ಸಹಿ ಕೂಡ ಇದೆ. ಕೇಂದ್ರ ತನಿಖಾ ಸಂಸ್ಥೆಗಳ ವಿಚಾರಣೆಗೆ ಗುರಿಯಾಗಿರುವ ವಿರೋಧ ಪಕ್ಷದ ನಾಯಕರಲ್ಲಿ ಲಾಲು ಯಾದವ್ ಅವರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ವಿರೋಧ ಪಕ್ಷಗಳನ್ನು ನಿಯಂತ್ರಣ ಮಾಡಲು ಮಾಡುತ್ತಿರುವ ಕೆಲಸ ಎಂದು ಹೇಳಿದೆ.

Published On - 11:18 am, Fri, 10 March 23

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ