Hawala Transactions: ಅಕ್ರಮ ಹಣ ವರ್ಗಾವಣೆ: ಸಚಿವ ಸತ್ಯೇಂದ್ರ ಜೈನ್ ನಿವಾಸ ಸೇರಿ 7 ಕಡೆ ಇಡಿ ದಾಳಿ

Hawala transactions :ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸಿ ಸೇರಿ ಒಟ್ಟು 7 ಕಡೆ ದಾಳಿ ನಡೆಸಿದೆ.

Hawala Transactions: ಅಕ್ರಮ ಹಣ ವರ್ಗಾವಣೆ: ಸಚಿವ ಸತ್ಯೇಂದ್ರ ಜೈನ್ ನಿವಾಸ ಸೇರಿ 7 ಕಡೆ ಇಡಿ ದಾಳಿ
Satyendar Jain
Follow us
TV9 Web
| Updated By: ನಯನಾ ರಾಜೀವ್

Updated on: Jun 06, 2022 | 12:27 PM

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸಿ ಸೇರಿ ಒಟ್ಟು 7 ಕಡೆ ದಾಳಿ ನಡೆಸಿದೆ.

ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ ಇಡಿ ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.

ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆನ್ನಲಾಗಿದೆ.

4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‌ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ಸತ್ಯೇಂದ್ರ ಜೈನ್ ವಿರುದ್ಧ ಇರುವ ಆರೋಪವೇನು? ಸತ್ಯೇಂದ್ರ ಜೈನ್ ದೆಹಲಿಯಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಸತ್ಯೇಂದ್ರ ಜೈನ್ ಅವರು ಷೇರುದಾರರಾಗಿರುವ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ಇಲ್ಲಿಯವರೆಗೂ ಬಹಿರಂಗಪಡಿಸಿಲ್ಲ. ಅವರು ಕೋಲ್ಕತ್ತಾದ ಮೂವರು ಹವಾಲಾ ಆಪರೇಟರ್‌ಗಳ 54 ಶೆಲ್ ಕಂಪನಿಗಳ ಮೂಲಕ 16.39 ಕೋಟಿ ರೂಪಾಯಿ ಮೌಲ್ಯದ ಕಪ್ಪು ಹಣವನ್ನು ಬಿಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಆರೋಗ್ಯ, ಗೃಹ ಮತ್ತು ಇತರ ಖಾತೆಗಳನ್ನು ಹೊಂದಿರುವ ಜೈನ್ ಅವರ ಬಂಧನವು ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಹೊಸ ಯುದ್ಧವನ್ನು ಹುಟ್ಟುಹಾಕಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಳ್ಳು ಎಂದು ಸಮರ್ಥಿಸಿಕೊಂಡಿದ್ದಾರೆ.

ಸತ್ಯೇಂದ್ರ ಜೈನ್ ಪತ್ನಿ ಪೂನಂ ಜೈನ್ ವಿರುದ್ಧ ಪ್ರಕರಣ

ಸತ್ಯೇಂದ್ರ ಜೈನ್ ಪತ್ನಿ ಪೂನಂ ಜೈನ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಕಳೆದ ಏಪ್ರಿಲ್‌ನಲ್ಲಿ ಜಾರಿ ನಿರ್ದೇಶನಾಲಯವು ಅಕಿಂಚನ್ ಡೆವಲಪರ್ಸ್ ಪ್ರೈವೇಟ್ ಕಂಪನಿ ಒಡೆತನದ 4.81 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿತ್ತು. ಲಿಮಿಟೆಡ್, ಇಂಡೋ ಮೆಟಲ್ ಇಂಪೆಕ್ಸ್ ಪ್ರೈವೇಟ್ ಲಿಮಿಟೆಡ್, ಮತ್ತು ಇತರರು ಅಕ್ರಮ ಆಸ್ತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್, ಅವರ ಪತ್ನಿ ಪೂನಂ ಜೈನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸತ್ಯೇಂದ್ರ ಜೈನ್ ಜೂನ್ 9 ರವರೆಗೆ ಕಸ್ಟಡಿಗೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 9ರವರೆಗೆ ಕಸ್ಟಡಿಗೆ ನೀಡಲಾಗಿದೆ.

ದೇಶದ ಇತರೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ