ED Raid: ಮಹಾರಾಷ್ಟ್ರದ ಹಲವೆಡೆ ಇ.ಡಿ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶ

ಮಹಾರಾಷ್ಟ್ರದ ನಾಗ್ಪುರ, ಮುಂಬೈ ಸೇರಿದಂತೆ 15 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೋಮವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ED Raid: ಮಹಾರಾಷ್ಟ್ರದ ಹಲವೆಡೆ ಇ.ಡಿ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶ
ಪ್ರಾತಿನಿಧಿಕ ಚಿತ್ರImage Credit source: siasat.com
Follow us
Ganapathi Sharma
|

Updated on:Mar 06, 2023 | 5:46 PM

ಮುಂಬೈ: ಮಹಾರಾಷ್ಟ್ರದ (Maharashtra) ನಾಗ್ಪುರ, ಮುಂಬೈ ಸೇರಿದಂತೆ 15 ಕಡೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸೋಮವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪಂಕಜ್ ಮೆಹಾದಿಯಾ, ಲೋಕೇಶ್, ಕಾತಿಕ್ ಜೈನ್‌ ವಿರುದ್ಧದ ಹಣಕಾಸು ಅವ್ಯವಹಾರ ಆರೋಪದ (ಹಣಕಾಸು ಅವ್ಯವಹಾರ ತಡೆ ಕಾಯ್ದೆ, 2002) ತನಿಖೆಯ ಅಂಗವಾಗಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ವೇಳೆ, 5.51 ಕೋಟಿ ರೂ. ಮೌಲ್ಯದ ಚಿನ್ನ, ವಜ್ರಾಭರಣ, 1.21 ಕೋಟಿ ನಗದು ಜಪ್ತಿ ಮಾಡಲಾಗಿದೆ.

ಸಿತಾಬುಲ್ದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್​ಐಆರ್ ಆಧಾರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಪಂಕಜ್ ಮೆಹಾದಿಯಾ, ಲೋಕೇಶ್, ಕಾತಿಕ್ ಜೈನ್‌ ಹಾಗೂ ಇತರರ ವಿರುದ್ಧ ಎಫ್​ಐಆಎರ್ ದಾಖಲಾಗಿತ್ತು. ಆರೋಪಿಗಳ ಹಣಕಾಸು ಅವ್ಯವಹಾರದಿಂದಾಗಿ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಇದನ್ನೂ ಓದಿ: Foxconn: ತೆಲಂಗಾಣದಲ್ಲೇ ಫಾಕ್ಸ್​​ಕಾನ್ ಉತ್ಪಾದನಾ ಘಟಕ; ಕಂಪನಿಯ ಅಧ್ಯಕ್ಷ ಯಾಂಗ್ ಲಿಯು ಸ್ಪಷ್ಟನೆ

ಆರೋಪಿಗಳು 2004 ರಿಂದ 2017 ರವರೆಗೆ ಮಾಡಿದ ಹೂಡಿಕೆಗಳ ಮೇಲೆ ಟಿಡಿಎಸ್ (ಮೂಲದಲ್ಲಿ ಕಡಿತಗೊಳಿಸುವ ತೆರಿಗೆ) ಕಡಿತಗೊಳಿಸಿದ ನಂತರ ಶೇ 12ರಷ್ಟು ಲಾಭವನ್ನು ನೀಡುವುದಾಗಿ ಭರವಸೆ ನೀಡುವ ಆಮಿಷವೊಡ್ಡಿ ವಂಚನೆ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ.

ಈ ವಿಚಾರವಾಗಿ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಜಾರಿ ನಿರ್ದೇಶನಾಲಯ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Mon, 6 March 23

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್