AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಯಾದವ್​​​ಗೆ ಮತ್ತೆ ಸಮನ್ಸ್ ನೀಡಿದ ಇಡಿ, ಜ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ತೇಜಸ್ವಿ ಯಾದವ್​​​ಗೆ ಮತ್ತೆ ಸಮನ್ಸ್ ನೀಡಿದ ಇಡಿ, ಜ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ತೇಜಸ್ವಿ ಯಾದವ್
ಅಕ್ಷಯ್​ ಪಲ್ಲಮಜಲು​​
|

Updated on: Dec 23, 2023 | 1:10 PM

Share

ದೆಹಲಿ, ಡಿ.23: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಇಡಿ ನೀಡಿದೆ.

2004 ಮತ್ತು 2009 ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಆಡಳಿತದಲ್ಲಿ ತೇಜಸ್ವಿ ಯಾದವ್ ಅವರ ತಂದೆ ಲಾಲು ಪ್ರಸಾದ್​​​ ಯಾದವ್ ರೈಲ್ವೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಭೂ ಹಗರಣ ನಡೆದಿತ್ತು. ರೈಲ್ವೆಯಲ್ಲಿ ಅನಿಯಮಿತ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಆರೋಪಿಸಿತ್ತು. ಲಾಲು ಪ್ರಸಾದ್​​​ ಯಾದವ್ ಅವರು ತನ್ನ ಆಪ್ತರ ನೇಮಕಾತಿಗಾಗಿ ಭಾರತೀಯ ರೈಲ್ವೇಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು.

ತನ್ನ ಸಂಬಂಧಿಕರಿಗೆ ರೈಲ್ವೆ ಉದ್ಯೋಗದ ಬದಲು ಭೂಮಿ ನೀಡಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ. ಇದರ ಜತೆಗೆ ಈ ಭೂಮಿಯನ್ನು ರಿಯಾಯಿತಿ ದರದಲ್ಲಿ ನೀಡಲಾಗಿದೆ ಎಂದು ಅಧಿಕಾರಿಗಳು ತನಿಖಾ ವರದಿಯಲ್ಲಿ ತಿಳಿಸಿದ್ದಾರೆ. ಆದರೆ ಇದರಲ್ಲಿ ನನ್ನ ತಪ್ಪು ಇಲ್ಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’