ದೆಹಲಿ, ಡಿ.23: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಇಡಿ ನೀಡಿದೆ.
2004 ಮತ್ತು 2009 ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಆಡಳಿತದಲ್ಲಿ ತೇಜಸ್ವಿ ಯಾದವ್ ಅವರ ತಂದೆ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಭೂ ಹಗರಣ ನಡೆದಿತ್ತು. ರೈಲ್ವೆಯಲ್ಲಿ ಅನಿಯಮಿತ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಆರೋಪಿಸಿತ್ತು. ಲಾಲು ಪ್ರಸಾದ್ ಯಾದವ್ ಅವರು ತನ್ನ ಆಪ್ತರ ನೇಮಕಾತಿಗಾಗಿ ಭಾರತೀಯ ರೈಲ್ವೇಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು.
ತನ್ನ ಸಂಬಂಧಿಕರಿಗೆ ರೈಲ್ವೆ ಉದ್ಯೋಗದ ಬದಲು ಭೂಮಿ ನೀಡಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ. ಇದರ ಜತೆಗೆ ಈ ಭೂಮಿಯನ್ನು ರಿಯಾಯಿತಿ ದರದಲ್ಲಿ ನೀಡಲಾಗಿದೆ ಎಂದು ಅಧಿಕಾರಿಗಳು ತನಿಖಾ ವರದಿಯಲ್ಲಿ ತಿಳಿಸಿದ್ದಾರೆ. ಆದರೆ ಇದರಲ್ಲಿ ನನ್ನ ತಪ್ಪು ಇಲ್ಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ