ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ‘ಮನ್ ಕಿ ಬಾತ್’ (Mann Ki Baat)ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಂ ಹೇಳಿದ್ದಾರೆ.2023ರಲ್ಲಿ ಸಾರ್ ಗ್ರಂಥ್ ಎಂಬ ಪುಸ್ತಕವನ್ನು ಪ್ರಕಟಿಸುವುದಾಗಿಯೂ ಅದನ್ನು ರಾಷ್ಟ್ರಪತಿಗಳು ಬಿಡುಗಡೆ ಮಾಡುವುದಾಗಿಯೂ ಪ್ರಕಟಣೆಯಲ್ಲಿ ಹೇಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರು ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ.ಇದಕ್ಕಾಗಿ ಅವರು ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಹಣ ಕೇಳುತ್ತಿದ್ದಾರೆ ಎಂದು ಕದಂ ಹೇಳಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮನ್ ಕಿ ಬಾತ್ ಮಾಸಿಕ ರೇಡಿಯೋ ಪ್ರಸಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್‌ನಲ್ಲಿ ರಾಷ್ಟ್ರದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ