AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿಯಿಂದ ಪರೀಕ್ಷಾ ಸಂಸ್ಥೆಗೆ ಶಸ್ತ್ರಚಿಕಿತ್ಸೆ; ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಆದೇಶ

Education Minister Pralhad Joshi orders for overhaul of examination system: ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಕಾರಣವಾದ ಪರೀಕ್ಷಾ ಅಕ್ರಮಗಳನ್ನು ತಡೆಯಲು ಸರ್ಕಾರ ಗಂಭೀರ ಪ್ರಯತ್ನಗಳನ್ನು ನಡೆಸುತ್ತಿದೆ. ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಎನ್​ಟಿಎ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಹೊರಟಿದ್ದಾರೆ.

ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿಯಿಂದ ಪರೀಕ್ಷಾ ಸಂಸ್ಥೆಗೆ ಶಸ್ತ್ರಚಿಕಿತ್ಸೆ; ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಆದೇಶ
ಪ್ರಲ್ಹಾದ್ ಜೋಶಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 17, 2026 | 5:17 PM

Share

ನವದೆಹಲಿ, ಆಗಸ್ಟ್ 17: ಯುಜಿಸಿ ನೆಟ್ (UGC NET) ಪರೀಕ್ಷೆಯಲ್ಲಿನ ಅವ್ಯವಹಾರಗಳ ಹಿನ್ನೆಲೆಯಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (NTA) ಸರ್ಕಾರ ಅಮೂಲಾಗ್ರ ಬದಲಾವಣೆ ತರುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಎನ್​ಟಿಎ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಡಿಟ್ (Audit) ನಡೆಸುವುದು, ಮತ್ತು ಪ್ರೋಟೋಕಾಲ್​ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇತ್ಯಾದಿ ಕ್ರಮಗಳಿಗೆ ಆದೇಶಿಸಿದ್ದಾರೆ. ಪ್ರಲ್ಹಾದ್ ಜೋಶಿ ಅವರು ಇಂದು ಸೋಮವಾರ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ, ಎನ್​ಟಿಎ ಮಹಾನಿರ್ದೇಶಕರು ಹಾಗು ಇತರ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ಧಾರೆ. ಈ ವೇಳೆ, ಎನ್​ಟಿಎ ತಾನು ತೆಗೆದುಕೊಂಡ ಕೆಲ ಕ್ರಮಗಳ ಕುರಿತು ಶಿಕ್ಷಣ ಸಚಿವರಿಗೆ ಮಾಹಿತಿ ನೀಡಿದೆ:

  • 50ಕ್ಕೂ ಹೆಚ್ಚು ಸಿಬ್ಬಂದಿ ವಜಾ: ಸುಧಾರಣಾ ಕ್ರಮಗಳ ಭಾಗವಾಗಿ ಎನ್‌ಟಿಎಯ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ.
  • ಹೊಸ ನೇಮಕಾತಿಗಳು: ಸಂಸ್ಥೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಿಟಿಒ (CTO), ಸಿಎಫ್ಒ (CFO), ಮತ್ತು ಮಾಹಿತಿ ಭದ್ರತಾ ಅಧಿಕಾರಿ ಸೇರಿದಂತೆ 10 ಹೊಸ ಉನ್ನತ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಖಾಸಗಿ ವಲಯದ ತಜ್ಞರನ್ನು ಸೈಬರ್ ಭದ್ರತೆ ಮತ್ತು ಪರೀಕ್ಷಾ ಪ್ರಕ್ರಿಯೆಗಳಿಗಾಗಿ ನೇಮಿಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ

ಶಿಕ್ಷಣ ಸಚಿವಾಲಯದ ಟ್ವೀಟ್

ಪ್ರಲ್ಹಾದ್ ಜೋಶಿ ನಿರ್ದೇಶನಗಳು

ಪರೀಕ್ಷಾ ಪತ್ರಿಕೆಗಳ ಗೌಪ್ಯತೆಯನ್ನು ಕಾಪಾಡಲು ‘ಕಾನ್ಫಿಡೆನ್ಷಿಯಲ್ ಆಪರೇಷನ್ಸ್’ (CONOPS) ಅನ್ನು ಸಂಪೂರ್ಣವಾಗಿ ಬದಲಾಯಿಸಲಾಗಬೇಕು. ಏರ್-ಗ್ಯಾಪ್ಡ್ ಸಿಸ್ಟಮ್‌ಗಳನ್ನು ಅಳವಡಿಸುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ನಿಯಮಗಳನ್ನು ಪಾಲಿಸಲು ಅಧಿಕಾರಿಗಳಿಗೆ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.

ಎನ್‌ಟಿಎ ನಡೆಸುವ ಎಲ್ಲಾ ಪರೀಕ್ಷಾ ಪ್ರಕ್ರಿಯೆಗಳ ಸಮಗ್ರ ಆಡಿಟ್ ನಡೆಸಲು ಮತ್ತು ಅದರಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಶಿಕ್ಷಣ ಸಚಿವರು ಈ ಸಂದರ್ಭದಲ್ಲಿ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶ: ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವುದು ಮತ್ತು ಪರೀಕ್ಷೆಗಳನ್ನು ಸುರಕ್ಷಿತವಾಗಿ ಹಾಗೂ ಸಮರ್ಥವಾಗಿ ನಡೆಸುವುದು ಈ ಸುಧಾರಣೆಗಳ ಮುಖ್ಯ ಉದ್ದೇಶವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ