ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ಗೆ ಕೊರೊನಾ ಸೋಂಕು
ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ರಮೇಶ್ ಪೋಖ್ರಿಯಾಲ್ ಅವರು, ವಿವಿಧ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳೊಂದಿಗೆ ವರ್ಚ್ಯುವಲ್ ಸಂವಾದ ನಡೆಸಿದ್ದಾರೆ.
ದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಟ್ವೀಟ್ ಮೂಲಕ ತಮಗೆ ಸೋಂಕು ದೃಢಪಟ್ಟಿದ್ದನ್ನು ತಿಳಿಸಿರುವ ರಮೇಶ್ ಪೋಖ್ರಿಯಾಲ್, ಕೊರೊನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್ 19 ತಪಾಸಣೆಗೆ ಒಳಗಾಗಿ ಎಂದು ಹೇಳಿದ್ದಾರೆ. ಇನ್ನು ತಮ್ಮ ಇಲಾಖೆಗೆ ಸಂಬಂಧಪಟ್ಟ ಎಲ್ಲ ಕೆಲಸಗಳನ್ನು, ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ರಮೇಶ್ ಪೋಖ್ರಿಯಾಲ್ ಅವರು, ವಿವಿಧ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳೊಂದಿಗೆ ವರ್ಚ್ಯುವಲ್ ಸಂವಾದ ನಡೆಸಿದ್ದಾರೆ. ಅಲ್ಲದೆ, ಇತ್ತೀಚೆಗಷ್ಟೇ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳು, ಸಿಬಿಎಸ್ಇ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಹ ಉನ್ನತ ಮಟ್ಟದ ಸಭೆ ನಡೆಸಿದ್ದರು. ಅದಾದ ಬಳಿಕ 10 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದಾಗಿತ್ತು, 12ನೇ ತರಗತಿ ಪರೀಕ್ಷೆ ಮುಂದೂಡಲ್ಪಟ್ಟಿತ್ತು.
ದೇಶದಲ್ಲಿ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದು ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಕೂಡ ಕೊರೊನಾ ದೃಢಪಟ್ಟಿದೆ.
ಇದನ್ನೂ ಓದಿ: ‘ಸಲಾರ್’ ಚಿತ್ರದ ಸೆಟ್‌ನಿಂದ ನಟ ಪ್ರಭಾಸ್ ಫೋಟೋ ವೈರಲ್ ಆಗಿದೆ…!
Roberrt Movie: ಅಮೇಜಾನ್ ಪ್ರೈಮ್ನಲ್ಲಿ ರಾಬರ್ಟ್; ಯಾವತ್ತಿನಿಂದ ಪ್ರಸಾರ ಶುರು?
Education Minister Ramesh Pokhriyal Tested Corona virus Positive