Eid-ul-Adha 2023: ಸಮಾಜದಲ್ಲಿ ಪರಸ್ಪರ ಸೌಹಾರ್ದತೆ ಹೆಚ್ಚಿಸಲು ಪ್ರತಿಜ್ಞೆ ಮಾಡೋಣ, ಬಕ್ರೀದ್​​ಗೆ​ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬ ಬಕ್ರೀದ್​​, ಇಂದು ಪ್ರಧಾನಿ ನರೇಂದ್ರ ಮೋದಿ, ಮತ್ತು ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯಗಳನ್ನು ತಿಳಿಸಿದ್ದಾರೆ.

Eid-ul-Adha 2023: ಸಮಾಜದಲ್ಲಿ ಪರಸ್ಪರ ಸೌಹಾರ್ದತೆ ಹೆಚ್ಚಿಸಲು ಪ್ರತಿಜ್ಞೆ ಮಾಡೋಣ, ಬಕ್ರೀದ್​​ಗೆ​ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ರಾಷ್ಟ್ರಪತಿ ಮತ್ತು ಪ್ರಧಾನಿ
Follow us
|

Updated on: Jun 29, 2023 | 9:47 AM

ದೆಹಲಿ: ಇಂದು (ಜೂನ್​​​29) ಭಾರತದಲ್ಲಿ ಈದ್ ಉಲ್ ಅಧಾ (Eid-ul-Adha) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ. ಈ ಹಬ್ಬದಂದು ದೇಶದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಅದ್ಧೂರಿಯಿಂದ ಆಚರಣೆ ಮಾಡುತ್ತಾರೆ. ಇಂದು ಇಸ್ಲಾಂ ಧರ್ಮದ ಪವಿತ್ರ ಹಬ್ಬ, ಇಂದು ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ, ಬಂಧು-ಬಳಗದವರು ಈ ಹಬ್ಬಕ್ಕೆ ಒಂದೇ ಕಡೆ ಸೇರುತ್ತಾರೆ. ಹೊಸ ಬಟ್ಟೆಗಳನ್ನು ಧರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಸ್ನೇಹಿತರು ಮತ್ತು ಕುಟುಂಬಗಳೊಂದಿಗೆ ಈ ಸಂತೋಷದ ದಿನದಂದು ಉಡುಗೊರೆಗಳು ಮತ್ತು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Eid-ul-Adha 2023: ಈದ್-ಉಲ್-ಅಧಾ ಹಬ್ಬದ ದಿನಾಂಕ ಮತ್ತು ವಿಶೇಷತೆಗಳ ಕುರಿತು ಮಾಹಿತಿ ಇಲ್ಲಿದೆ

ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಇಸ್ಲಾಂ ಸಮುದಾಯದ ಜನತೆಗೆ ಈದ್ ಉಲ್ ಅಧಾನ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇನ್ನು ದೇಶದ ರಾಷ್ಟ್ರಪತಿ ಕೂಡ ದೇಶದ ಇಸ್ಲಾಂ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ