ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಟೋಂಕ್ ಬಳಿ ಅಪಘಾತ, ಟ್ರಕ್‌ಗೆ ವಾಹನ ಡಿಕ್ಕಿ: 8 ಜನರ ದುರ್ಮರಣ
ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಮೃತಪಟ್ಟಿದ್ದು ನಾಲ್ವರಿಗೆ ಗಾಯಗಳಾದ ಘಟನೆ ರಾಜಸ್ಥಾನದ ಟೋಂಕ್ ಪ್ರದೇಶದಲ್ಲಿ ನಡೆದಿದೆ.
ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಮೃತಪಟ್ಟಿದ್ದು ನಾಲ್ವರಿಗೆ ಗಾಯಗಳಾದ ಘಟನೆ ರಾಜಸ್ಥಾನದ ಟೋಂಕ್ ಪ್ರದೇಶದಲ್ಲಿ ನಡೆದಿದೆ. ಪ್ರಯಾಣಿಕರೆಲ್ಲರೂ ರಾಜಸ್ಥಾನದ ಖತುಶ್ಯಾಮ್ಜಿ ದೇವಸ್ಥಾನದಿಂದ ಮಧ್ಯ ಪ್ರದೇಶದಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಕೆಲ ಮೂಲಗಳು ತಿಳಿಸಿವೆ.
ಇನ್ನು ಅಪಘಾತದಲ್ಲಿ ಗಾಯಗೊಂಡವರನ್ನು ಜೈಪುರದ ಸ್ಥಳೀಯ ಆಸ್ಪತ್ರೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Rajasthan: Eight dead and four injured after the vehicle they were travelling in rammed into a truck in Tonk, earlier today.
"Injured have been referred to Jaipur. Drivers of both the vehicles are absconding", says DGP Tonk. pic.twitter.com/ZxSIxCdbo9
— ANI (@ANI) January 27, 2021
ದುರಂತದ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ವಿಷಯ ತಿಳಿದು ಮನಸ್ಸಿಗೆ ದುಃಖವಾಗಿದೆ. ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ರು.
Sad to know that eight people have lost lives in a road accident in Tonk, while returning from Khatushyam ji to their town in MP. My heartfelt condolences to the bereaved family members. May they remain strong in this difficult time & prayers for speedy recovery of those injured.
— Ashok Gehlot (@ashokgehlot51) January 27, 2021
ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ