AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೇರಿ ಎಂಟು ಮಂದಿಯನ್ನು ಅರೆನಗ್ನರಾಗಿ ನಿಲ್ಲಿಸಿದ ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

ಎಲ್ಲರೂ ಪತ್ರಕರ್ತರು ಎಂದು ಹೇಳುವ ಫೋಟೋ ವೈರಲ್ ಆಗುತ್ತಿದೆ. ಅವರೆಲ್ಲರೂ ಪತ್ರಕರ್ತರಲ್ಲ, ಅವರಲ್ಲಿ ಒಬ್ಬರು ಮಾತ್ರ (ಯೂಟ್ಯೂಬರ್) ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಉಳಿದವರು ಆರೋಪಿಯ ಸ್ನೇಹಿತರು ಮತ್ತು ಸಂಬಂಧಿಕರು...

ಮಧ್ಯಪ್ರದೇಶ: ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೇರಿ ಎಂಟು ಮಂದಿಯನ್ನು ಅರೆನಗ್ನರಾಗಿ ನಿಲ್ಲಿಸಿದ ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು
ಪೊಲೀಸ್ ಠಾಣೆಯಲ್ಲಿ 8 ಮಂದಿಯನ್ನು ಅರೆ ಬೆತ್ತಲೆಯಾಗಿ ನಿಲ್ಲಿಸಿರುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Apr 08, 2022 | 2:40 PM

Share

ಸಿಧಿ: ಮಧ್ಯಪ್ರದೇಶದ (Madhya Pradesh) ಸಿಧಿ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಪತ್ರಕರ್ತರು (Journalist) ಸೇರಿದಂತೆ 8 ಮಂದಿಯನ್ನು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಚಿತ್ರವು ವೈರಲ್ ಆದ ನಂತರ “ಆತ್ಮಹತ್ಯೆಯಿಂದ ಸಾಯುವ ಯಾವುದೇ ಸಂದರ್ಭಗಳನ್ನು ತಪ್ಪಿಸಲು” ಅವರನ್ನು ಒಳ ಉಡುಪಿನಲ್ಲಿ ನಿಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರಲ್ಲಿ ಮಾತನಾಡಿದ ಎಸ್‌ಎಚ್‌ಒ ಮನೋಜ್ ಸೋನಿ, “ಎಲ್ಲರೂ ಪತ್ರಕರ್ತರು ಎಂದು ಹೇಳುವ ಫೋಟೋ ವೈರಲ್ ಆಗುತ್ತಿದೆ. ಅವರೆಲ್ಲರೂ ಪತ್ರಕರ್ತರಲ್ಲ, ಅವರಲ್ಲಿ ಒಬ್ಬರು ಮಾತ್ರ ಯೂಟ್ಯೂಬರ್ (Youtuber) ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಉಳಿದವರು ಆರೋಪಿಯ ಸ್ನೇಹಿತರು ಮತ್ತು ಸಂಬಂಧಿಕರು ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ “ಪ್ರಸಿದ್ಧ ವ್ಯಕ್ತಿಗಳು ಮತ್ತು ರಾಜಕಾರಣಿಗಳನ್ನು ನಿಂದನೆ” ಮಾಡಿದ್ದಕ್ಕಾಗಿ ನೀರಜ್ ಕುಂದರ್ ಎಂದು ಗುರುತಿಸಲಾದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು. ನಂತರ ಬಂಧನ ಖಂಡಿಸಿ ಪತ್ರಕರ್ತನೆಂದು ಹೇಳಿಕೊಂಡಿರುವ ಯೂಟ್ಯೂಬರ್ ಕನಿಷ್ಕ್ ತಿವಾರಿ ಸೇರಿದಂತೆ ಸುಮಾರು 30 ಜನರ ಗುಂಪು ಪ್ರತಿಭಟನೆ ನಡೆಸಿತು. “ಸೋಷಿಯಲ್ ಮೀಡಿಯಾದಲ್ಲಿ ನಕಲಿ ಐಡಿಯಿಂದ ಖ್ಯಾತನಾಮರನ್ನು, ರಾಜಕೀಯ ವ್ಯಕ್ತಿಗಳನ್ನು ಮತ್ತು ಮಹಿಳೆಯರನ್ನು ನಿಂದನೆ ಮಾಡಿದ್ದ ನೀರಜ್ ಕುಂದರ್ ವಿರುದ್ಧ ಕೆಲವು ದಿನಗಳ ಹಿಂದೆ ಎಫ್‌ಐಆರ್ ದಾಖಲಿಸಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಮತ್ತು ಜೈಲಿಗೆ ಕಳುಹಿಸಲಾಗಿದೆ. ಇದನ್ನು ವಿರೋಧಿಸಿ, ಅವರ ಸ್ನೇಹಿತರು ಮತ್ತು ಕುಟುಂಬದವರು ಸುಮಾರು 30 ಸಂಖ್ಯೆಯಲ್ಲಿ ‘ಧರಣಿ’ ಕುಳಿತು ಅವರ ಬಂಧನದ ವಿರುದ್ಧ ಪ್ರತಿಭಟಿಸಿದ್ದರು ಎಂದು ಎಸ್ಎಚ್ಒ ಹೇಳಿದ್ದಾರೆ.

ಯೂಟ್ಯೂಬರ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಅವರು ಪೊಲೀಸರು ಮತ್ತು ಆಡಳಿತದ ವಿರುದ್ಧ ಪ್ರತಿಭಟಿಸಲು ಜನರನ್ನು ಪ್ರಚೋದಿಸುತ್ತಿದ್ದರು ಎಂದಿದ್ದಾರೆ ಸೋನಿ. ವೈರಲ್ ಚಿತ್ರದ ಬಗ್ಗೆ ಕೇಳಿದಾಗ, ಪೊಲೀಸ್ ಅಧಿಕಾರಿಗಳು ಪತ್ರಕರ್ತರನ್ನು ವಿವಸ್ತ್ರಗೊಳಿಸಿದ್ದಾರೆ ಎಂಬ ಮಾಹಿತಿಯು ಸುಳ್ಳು. ಒಳಉಡುಪಿನಲ್ಲಿ ಅವರನ್ನು ನಿಲ್ಲಿಸಲಾಗಿದೆ. ಬಟ್ಟೆಯಿದ್ದರೆ ಅವರು ಅದನ್ನುಪಯೋಗಿಸಿ ಆತ್ಮಹತ್ಯೆ ಮಾಡಿಕೊಂಡರೆ? ಈ ನಿಟ್ಟಿನಲ್ಲಿ ಅವರನ್ನು ಅರೆಬೆತ್ತಲೆ ಮಾಡಲಾಗಿದೆ ಎಂದಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸೇರಿದಂತೆ ಎಂಟು ಮಂದಿ ತಮ್ಮ ಉಡುಪುಗಳನ್ನು ಕಳಚಿ ಒಳ ಉಡುಪಿನಲ್ಲಿ ನಿಂತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶ ಪೊಲೀಸರು ಗುರುವಾರ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ.

“ಉಪವಿಭಾಗೀಯ ಪೊಲೀಸ್ ಅಧಿಕಾರಿ ಗಾಯತ್ರಿ ತಿವಾರಿ ಅವರು ಈ ವಿಷಯದ ಬಗ್ಗೆ ವಿಚಾರಣೆ ನಡೆಸುತ್ತಾರೆ ಮತ್ತು ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಪರಾಧಿಗಳು ಮಾಡಿದ ಅಪರಾಧವನ್ನು ಲೆಕ್ಕಿಸದೆಯೇ, ಅಂತಹ ಕ್ರಮ (ವಿವಸ್ತ್ರಗೊಳಿಸುವಿಕೆ) ಸ್ವೀಕಾರಾರ್ಹವಲ್ಲ” ಎಂದು ಸಿದ್ಧಿ ಎಸ್ಪಿ ಮುಖೇಶ್ ಶ್ರೀವಾಸ್ತವ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಈ ಫೋಟೊ ಏಪ್ರಿಲ್ 2 ರಂದು ಕ್ಲಿಕ್ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ “ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ವಿರುದ್ಧ ವರದಿ ಮಾಡಿದ್ದಕ್ಕಾಗಿ ಯೂಟ್ಯೂಬ್ ಪತ್ರಕರ್ತರನ್ನು ಪೊಲೀಸ್ ಠಾಣೆಯಲ್ಲಿ ವಿವಸ್ತ್ರಗೊಳಿಸಲಾಯಿತು ಎಂಬ ಬರಹದೊಂದಿದೆ ಇದನ್ನು ಶೇರ್ ಮಾಡಲಾಗಿದೆ.

ಬಿಜೆಪಿ ಶಾಸಕ ಮತ್ತು ಅವರ ಕುಟುಂಬಕ್ಕೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ರಂಗಭೂಮಿ ಕಲಾವಿದ ನೀರಜ್ ಕುಂದರ್ ಅವರನ್ನು ಕೊತ್ವಾಲಿ ಪೊಲೀಸರು ಏಪ್ರಿಲ್ 2 ರಂದು ಬಂಧಿಸಿದ್ದಾರೆ ಎಂದು ಎಸ್ಪಿ ಶ್ರೀವಾಸ್ತವ ಹೇಳಿದ್ದಾರೆ. ಬಿಜೆಪಿ ಶಾಸಕರೊಬ್ಬರು ಮಾರ್ಚ್ 16 ರಂದು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ಸಮಯದಲ್ಲಿ, ಪೊಲೀಸರು ಪೋಸ್ಟ್‌ಗಳು ಮತ್ತು ಐಪಿ ವಿಳಾಸದ ಕುರಿತು ಫೇಸ್‌ಬುಕ್‌ನಿಂದ ವಿವರಗಳನ್ನು ಕೇಳಿದರು. ತನಿಖೆಯ ನಂತರ ನೀರಜ್ ಕುಂದರ್ ಜೊತೆ ನಂಟು ಇರುವುದು ಕಂಡು ಬಂದಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಠಾಣೆಯೊಳಗೆ 8 ಮಂದಿಯನ್ನು ಒಳ ಉಡುಪಿನಲ್ಲಿ ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಪ್ರಭಾರಿ ಕೊತ್ವಾಲಿ ಸಿಧಿ ಮತ್ತು ಸಬ್ ಇನ್ಸ್‌ಪೆಕ್ಟರ್​​ನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ಮಹಿಳೆಯರನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ ಸ್ವಾಮೀಜಿ; ಚಪ್ಪಾಳೆ ತಟ್ಟಿ ಜೈಶ್ರೀರಾಮ್ ಕೂಗಿದ ಜನ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ