ಹೈದರಾಬಾದ್: ಹೈ ಟೆನ್ಷನ್ ತಂತಿ(High Tension Wire) ತಗುಲಿ ಆಟೋ ಹೊತ್ತಿ ಉರಿದಿದ್ದು 8 ಮಂದಿ ಸಜೀವ ದಹನ ಆಗಿರುವ ದುರ್ಘಟನೆ ಆಂಧ್ರದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಧರ್ಮಾವರಂ ಕಡೆ ಕೂಲಿಗೆ ತೆರಳುತಿದ್ದ 8 ಮಂದಿ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗುಡಂಪಲ್ಲಿ ಗ್ರಾಮದ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿ, ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ಪರಿಣಾಮ ಸ್ಥಳದಲ್ಲಿಯೇ ಎಂಟು ಮಂದಿ ಸಜೀವ ದಹನಗೊಂಡಿದ್ದಾರೆ. ತಾಡಿಮುರ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು ಕೆಲ ಗಾಯಾಳುಗಳನ್ನು ಆಸ್ಪತ್ರೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಇನ್ನು ಮೃತರಿಗೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸದಾ ಹಸಿವಿನ ಅನುಭವವಾಗುತ್ತದೆಯೇ? ನಿಮಗೆ ಈ ಕಾಯಿಲೆ ಇರಬಹುದು
ಹಲವು ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರಿಚಂದನ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ರಾಜ್ಯಪಾಲರು ಜಿಲ್ಲಾಡಳಿತಕ್ಕೆ ಸೂಚಿಸಿದ್ರು.
శ్రీ సత్యసాయి జిల్లా తాడిమర్రి మండలం చిల్లకొండయ్యపల్లి వద్ద విద్యుత్ వైర్లు తాకి ఆటో ప్రమాదానికి గురైన ఘటనలో ప్రాణాలు కోల్పోవడంపై ముఖ్యమంత్రి శ్రీ వైయస్.జగన్ తీవ్ర దిగ్భ్రాంతి వ్యక్తంచేశారు. మరణించిన వారి కుటుంబాలకు రూ.10లక్షల చొప్పున పరిహారం చెల్లించాలని ఆదేశించారు.
— CMO Andhra Pradesh (@AndhraPradeshCM) June 30, 2022
Published On - 4:10 pm, Thu, 30 June 22