ಆರೋಪಿಗಳ ಗುಂಡಿನ ದಾಳಿ, 8 ಪೊಲೀಸರು ಹುತಾತ್ಮ!
ಕಾನ್ಪುರ: ಆರೋಪಿಗಳ ಗುಂಡಿನ ದಾಳಿಯಲ್ಲಿ 8 ಪೊಲೀಸರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಗ್ಯಾಂಗ್‌ಸ್ಟರ್ ವಿಕಾಸ್‌ದುಬೆ ಬಂಧಿಸಲು ಪೊಲೀಸರು ತೆರಳಿದ್ದರು ಈ ವೇಳೆ ಆರೋಪಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಡಿವೈಎಸ್ಪಿ ದೇವೇಂದ್ರ ಮಿಶ್ರಾ ಸೇರಿದಂತೆ ಎಂಟು ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. 12 ಪೊಲೀಸರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಉನ್ನತಮಟ್ಟದ ತನಿಖೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ವಿಕಾಸ್ ದುಬೆ […]
ಕಾನ್ಪುರ: ಆರೋಪಿಗಳ ಗುಂಡಿನ ದಾಳಿಯಲ್ಲಿ 8 ಪೊಲೀಸರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಗ್ಯಾಂಗ್‌ಸ್ಟರ್ ವಿಕಾಸ್‌ದುಬೆ ಬಂಧಿಸಲು ಪೊಲೀಸರು ತೆರಳಿದ್ದರು ಈ ವೇಳೆ ಆರೋಪಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಡಿವೈಎಸ್ಪಿ ದೇವೇಂದ್ರ ಮಿಶ್ರಾ ಸೇರಿದಂತೆ ಎಂಟು ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. 12 ಪೊಲೀಸರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಉನ್ನತಮಟ್ಟದ ತನಿಖೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ವಿಕಾಸ್ ದುಬೆ ವಿರುದ್ಧ 60ಕ್ಕೂ ಹೆಚ್ಚು ಪ್ರಕರಣಗಳಿವೆ. ಆರೋಪಿ ವಿಕಾಸ್ ದುಬೆಗಾಗಿ ಪೊಲೀಸರಿಂದ ತೀವ್ರ ಶೋಧ ಶುರುವಾಗಿದೆ.
Published On - 6:49 am, Fri, 3 July 20