Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತನ ವಯಸ್ಸಿಗೆ ತಕ್ಕಂತೆ ಮಾತನಾಡಲಿ; ಆದಿತ್ಯ ಠಾಕ್ರೆ ವಿರುದ್ಧ ಸಿಎಂ ಏಕನಾಥ್ ಶಿಂಧೆ ವಾಗ್ದಾಳಿ

ಆದಿತ್ಯ ಠಾಕ್ರೆ ತಮ್ಮ ವಯಸ್ಸನ್ನು ಅರಿತು ಮಾತನಾಡಬೇಕು. ಅವರು ಮತ್ತು ಇತರರು ಅಧಿಕಾರಕ್ಕಾಗಿ ಬಾಳಾಸಾಹೇಬರ ಚಿಂತನೆಯಿಂದ ದೂರ ಸರಿದರು. ಅದೇ ನಮ್ಮನ್ನು ಬಂಡಾಯವೆದ್ದು, ಈ ದಿಟ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ಆತನ ವಯಸ್ಸಿಗೆ ತಕ್ಕಂತೆ ಮಾತನಾಡಲಿ; ಆದಿತ್ಯ ಠಾಕ್ರೆ ವಿರುದ್ಧ ಸಿಎಂ ಏಕನಾಥ್ ಶಿಂಧೆ ವಾಗ್ದಾಳಿ
ಆದಿತ್ಯ ಠಾಕ್ರೆ - ಏಕನಾಥ್ ಶಿಂಧೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 07, 2022 | 12:00 PM

ನವದೆಹಲಿ: ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ (Uddhav Thackeray) ಅವರ ಪುತ್ರ ಆದಿತ್ಯ ಠಾಕ್ರೆ (Adithya Thackeray) ವಿರುದ್ಧ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದ್ದು, ಆದಿತ್ಯ ಠಾಕ್ರೆ ತನ್ನ ವಯಸ್ಸನ್ನು ಅರಿತುಕೊಂಡು, ಅದಕ್ಕೆ ತಕ್ಕಂತೆ ಮಾತನಾಡಬೇಕು ಎಂದು ಹೇಳಿದ್ದಾರೆ. ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದ ಪತನಕ್ಕೆ ಕಾರಣವಾದ ಶಿವಸೇನೆಯ 39 ಶಾಸಕರೊಂದಿಗಿನ ಬಂಡಾಯದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆದಿತ್ಯ ಠಾಕ್ರೆ ಸಿಎಂ ಏಕನಾಥ್ ಶಿಂಧೆ (Eknath Shinde) ಅವರ ವಿರುದ್ಧ ಹಲವಾರು ಸಂದರ್ಭಗಳಲ್ಲಿ ದಾಳಿ ಮಾಡಿದ್ದರು. ಉದ್ಧವ್ ಮತ್ತು ಆದಿತ್ಯ ಠಾಕ್ರೆ ಶಿವಸೇನೆ ಬಂಡುಕೋರರನ್ನು ದೇಶದ್ರೋಹಿಗಳು ಎಂದು ಕರೆದಿದ್ದರು.

ಆದಿತ್ಯ ಠಾಕ್ರೆ ತಮ್ಮ ವಯಸ್ಸನ್ನು ಅರಿತು ಮಾತನಾಡಬೇಕು. ಅವರು ಮತ್ತು ಇತರರು ಅಧಿಕಾರಕ್ಕಾಗಿ ಬಾಳಾಸಾಹೇಬರ ಚಿಂತನೆಯಿಂದ ದೂರ ಸರಿದರು. ಅದೇ ನಮ್ಮನ್ನು ಬಂಡಾಯವೆದ್ದು, ಈ ದಿಟ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಬಂಡಾಯ ಶಾಸಕರ ವಿರುದ್ಧ ಆದಿತ್ಯ ಠಾಕ್ರೆ ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Maharashtra Crisis: ಏಕನಾಥ್ ಶಿಂಧೆ ಸರ್ಕಾರಕ್ಕೆ ರಿಲೀಫ್; ಶಾಸಕರ ಅನರ್ಹತೆ ತೀರ್ಮಾನ ಮುಂದೂಡಲು ಸ್ಪೀಕರ್​ಗೆ ಸುಪ್ರೀಂಕೋರ್ಟ್​ ಸೂಚನೆ​

“ಆದಿತ್ಯ ಅವರು ಜಿದ್ದಾಜಿದ್ದಿಯಲ್ಲಿದ್ದಾಗ ನಾನು ಶಿವಸೇನೆಯಲ್ಲಿ ಸಕ್ರಿಯನಾಗಿದ್ದೆ. ಅವರಿಗೆ ಈಗ ಕೇವಲ 32 ವರ್ಷ. ನಮ್ಮನ್ನು ಟೀಕಿಸಲು ಅವರಿಗೆ ಏನು ಹಕ್ಕಿದೆ? ಅವರು ಯಾರು? ಅವರು ದಿವಂಗತ ಬಾಳಾಸಾಹೇಬ್ ಅಥವಾ ಉದ್ಧವ್ ಠಾಕ್ರೆಯವರ ಆಸ್ತಿಗೆ ವಾರಸುದಾರರಾಗಬಹುದು. ಆದರೆ ಅವರು ಶಿವಸೇನೆ ಪಕ್ಷದ ಪರಂಪರೆಯನ್ನು ಪಡೆಯಲು ಸಾಧ್ಯವಿಲ್ಲ. ನಾವು 35 ವರ್ಷಗಳಿಂದ ಕೇಸರಿ ಬಾವುಟವನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದೇವೆ. ಆದರೆ ಈಗ ಅವರು ನಮ್ಮನ್ನು ಟೀಕಿಸುತ್ತಿದ್ದಾರೆ ಎಂದು ಏಕನಾಥ್ ಶಿಂಧೆ ಬಣದ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ