ಏಕನಾಥ್ ಶಿಂಧೆ ಯುಗಾಂತ್ಯ, ಇನ್ನೆಂದೂ ಅವರು ಸಿಎಂ ಆಗಲು ಅಸಾಧ್ಯ; ಸಂಜಯ್ ರಾವತ್

ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಇಂದು ಸಿಎಂ ದೇವೇಂದ್ರ ಫಡ್ನವಿಸ್ ಅವರ ಪ್ರಮಾಣವಚನಕ್ಕೂ ಮೊದಲು ಮಾಜಿ ಸಿಎಂ ಏಕನಾಥ್ ಶಿಂಧೆ ಕುರಿತು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯ ಯುಗ ಮುಗಿದಿದೆ. ಏಕನಾಥ್ ಶಿಂಧೆ ಅವರನ್ನು ಬಿಜೆಪಿ ಬಳಸಿಕೊಂಡಿದೆ. ಇದೀಗ ಅವರನ್ನು ತಿರಸ್ಕರಿಸುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ. ಹಾಗೇ, ಏಕನಾಥ್ ಶಿಂಧೆ ಮತ್ತೆ ಸಿಎಂ ಸ್ಥಾನಕ್ಕೆ ಮರಳುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ

ಏಕನಾಥ್ ಶಿಂಧೆ ಯುಗಾಂತ್ಯ, ಇನ್ನೆಂದೂ ಅವರು ಸಿಎಂ ಆಗಲು ಅಸಾಧ್ಯ; ಸಂಜಯ್ ರಾವತ್
ಸಂಜಯ್ ರಾವತ್

Updated on: Dec 05, 2024 | 3:48 PM

ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಇಂದು ಏಕನಾಥ್ ಶಿಂಧೆ ಅವರ ಆಡಳಿತದ ಯುಗ ಮುಗಿದಿದೆ ಎಂದು ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಇನ್ನು ಮುಂದೆ ಮಹಾರಾಷ್ಟ್ರ ರಾಜ್ಯದ ಸಿಎಂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಬಿಜೆಪಿ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ಇದೀಗ ಪಕ್ಕಕ್ಕೆ ಎಸೆದಿದೆ ಎಂದು ಆರೋಪಿಸಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ಏಕನಾಥ್ ಶಿಂಧೆ ಯುಗ ಮುಗಿದಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. 2 ವರ್ಷಗಳ ಕಾಲ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡ ಬಿಜೆಪಿ ಇದೀಗ ತಿರಸ್ಕರಿಸಿದೆ ಎಂದು ಹೇಳಿದ್ದಾರೆ. ಅವರು ಮತ್ತೆ ಈ ರಾಜ್ಯದ ಸಿಎಂ ಆಗುವುದಿಲ್ಲ ಎಂದು ರಾವತ್ ಹೇಳಿದ್ದಾರೆ. ತಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪಕ್ಷಗಳನ್ನು ದುರ್ಬಲಗೊಳಿಸಲು ಮತ್ತು ಕಿತ್ತೊಗೆಯಲು ಬಿಜೆಪಿ ತನ್ನ ರಾಜಕೀಯ ತಂತ್ರವನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಎಂ ಆಗಲಿರುವ ದೇವೇಂದ್ರ ಫಡ್ನವಿಸ್ ಕುರಿತ ಅಚ್ಚರಿಯ ವಿಷಯಗಳಿವು

ಹಾಗೇ, ಆಡಳಿತಾರೂಢ ಮೈತ್ರಿಕೂಟವಾದ ಮಹಾಯುತಿಯಲ್ಲಿ ಬಿರುಕು ಮೂಡುವ ಸಾಧ್ಯತೆಯಿದೆ ಎಂದು ಸಂಜಯ್ ರಾವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂದಿನಿಂದ ದೇವೇಂದ್ರ ಫಡ್ನವೀಸ್ ರಾಜ್ಯದ ಸಿಎಂ ಆಗಲಿದ್ದಾರೆ. ಅವರಿಗೆ ಬಹುಮತವಿದೆ. ಆದರೂ ಬಿಜೆಪಿಗೆ 15 ದಿನಗಳ ಕಾಲ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಅಂದರೆ ಅವರ ಪಕ್ಷ ಅಥವಾ ಮಹಾಯುತಿಯಲ್ಲಿ ಏನೋ ತಪ್ಪಾಗಿದೆ ಎಂದು ಸಂಜಯ್ ರಾವತ್ ಅನುಮಾನ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ