Maharashtra Floor Test Result 2022: ವಿಶ್ವಾಸಮತಯಾಚನೆಯಲ್ಲಿ ಗೆದ್ದು ಬೀಗಿದ ಏಕನಾಥ್ ಶಿಂಧೆ; ಸಿಎಂಗೆ 164 ಶಾಸಕರ ಬೆಂಬಲ

Eknath Shinde Floor Test: ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Maharashtra Floor Test Result 2022: ವಿಶ್ವಾಸಮತಯಾಚನೆಯಲ್ಲಿ ಗೆದ್ದು ಬೀಗಿದ ಏಕನಾಥ್ ಶಿಂಧೆ; ಸಿಎಂಗೆ 164 ಶಾಸಕರ ಬೆಂಬಲ
ಏಕನಾಥ್ ಶಿಂಧೆ
Follow us
TV9 Web
| Updated By: Digi Tech Desk

Updated on:Jul 04, 2022 | 12:02 PM

ಮುಂಬೈ: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ (Maharashtra Political Crisis) ಅಂತಿಮ ಘಟ್ಟ ತಲುಪಿದ್ದು, ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ (CM Eknath Shinde) ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಳೆದ 2 ವಾರಗಳ ರಾಜಕೀಯ ಬಿಕ್ಕಟ್ಟು ಅಂತ್ಯ ಕಂಡಿದೆ. ಏಕನಾಥ್ ಶಿಂಧೆ ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ (Floor Test) ವೇಳೆ ಬಹುಮತವನ್ನು ಸಾಬೀತುಪಡಿಸಿದೆ. ಏಕನಾಥ್ ಶಿಂಧೆ 164 ಶಾಸಕರ ಬೆಂಬಲ ಪಡೆಯುವ ಮೂಲಕ ಸರ್ಕಾರ ರಚನೆಗೆ ಬೇಕಾದ ಬಹುಮತ ಪಡೆದಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಹುಮತ ಹೊಂದಿದ್ದಾರೆಯೇ ಎಂಬುದನ್ನು ನಿರ್ಧರಿಸಲು ವಿಧಾನಸಭೆಯಲ್ಲಿ ಇಂದು ವಿಶ್ವಾಸಮತಯಾಚನೆ ನಡೆಸಲಾಯಿತು. ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ವೇಳೆ ಏಕನಾಥ್ ಶಿಂಧೆ ಅವರ ಪರವಾಗಿ 164 ಮತಗಳು ಬಂದವು. ಹೀಗಾಗಿ, ಅಗತ್ಯಕ್ಕಿಂತ ಹೆಚ್ಚು ಶಾಸಕರ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಬಹುಮತ ಸಾಬೀತುಪಡಿಸಿದ್ದಾರೆ. 164 ಶಾಸಕರು ಮತ್ತು ಮತ ಎಣಿಕೆಯೊಂದಿಗೆ ಸಿಎಂ ಶಿಂಧೆ ವಿಶ್ವಾಸ ಮತದಲ್ಲಿ ವಿಜಯಶಾಲಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಎರಡು ವಾರಗಳ ರಾಜಕೀಯ ಬಿಕ್ಕಟ್ಟಿನ ನಂತರ ಬಿಜೆಪಿಯ ನೆರವಿನೊಂದಿಗೆ ಸರ್ಕಾರ ರಚನೆಯಾಗಿದೆ. ನಾಲ್ಕು ದಿನಗಳ ಹಿಂದೆ ರಚನೆಯಾದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ವಿಧಾನಸಭೆಯಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಿದೆ. ಈಗಾಗಲೇ ಬಿಜೆಪಿಯ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಬಂಡಾಯ ಬಣದಿಂದ ಹೊಸದಾಗಿ ನೇಮಕಗೊಂಡಿರುವ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೊಗಾವಾಲೆ ಇಂದು ಶಿವಸೇನೆ ಪಕ್ಷದ 16 ಶಾಸಕರನ್ನು (ಉದ್ಧವ್ ಠಾಕ್ರೆ ಬಣದ) ಅಮಾನತುಗೊಳಿಸುವಂತೆ ವಿಧಾನಸಭಾ ಸ್ಪೀಕರ್‌ಗೆ ಮನವಿ ಮಾಡಿದರು. ಏಕನಾಥ್ ಶಿಂಧೆ ಪಾಳಯದ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಉದ್ಧವ್ ಠಾಕ್ರೆ ಬಣದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿದೆ. ಬಿಜೆಪಿಯು ಪ್ರಸ್ತುತ 106 ಶಾಸಕರನ್ನು ಹೊಂದಿದೆ. ಏಕನಾಥ್ ಶಿಂಧೆ 39 ಶಿವಸೇನಾ ಬಂಡಾಯ ಶಾಸಕರು ಸೇರಿದಂತೆ 50 ಮಂದಿಯ ಬೆಂಬಲವನ್ನು ಹೊಂದಿದ್ದಾರೆಂದು ಹೇಳಿಕೊಂಡಿದ್ದರು. ಇಂದು ವಿಶ್ವಾಸಮತ ಯಾಚನೆ ವೇಳೆ ಏಕನಾಥ್ ಶಿಂಧೆ ಅವರಿಗೆ 164 ಶಾಸಕರು ಬೆಂಬಲ ಸೂಚಿಸಿದ್ದಾರೆ.

ಏಕನಾಥ್ ಶಿಂಧೆಯವರ ಬಂಡಾಯ ಜೂನ್ 20ರ ರಾತ್ರಿ ಭುಗಿಲೆದ್ದಿತು. ಇದರಿಂದ ಉದ್ಧವ್ ಠಾಕ್ರೆ ಬಣದ ಸಂಖ್ಯೆ ಕಡಿಮೆಯಾಯಿತು. ರಾಜ್ಯಪಾಲರ ಆದೇಶದಂತೆ ಸದನದಲ್ಲಿ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ ನಂತರ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರು. ಅದಾದ ಬಳಿಕ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಿದರು. ಅದೇ ದಿನ ಸಂಜೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಏಕನಾಥ್ ಶಿಂಧೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

Published On - 11:37 am, Mon, 4 July 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್