AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಡಬ್ಲ್ಯು ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ಗುದ್ದೋಡು ಪ್ರಕರಣ ನಡೆದು ಎರಡು ದಿನಗಳ ನಂತರ ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಮಿಹಿರ್ ಶಾ ಅವರನ್ನು ಬಂಧಿಸಿದ್ದಾರೆ. ಜುಲೈ 7, ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ನಂತರ ಮಿಹಿರ್ ಶಾ ತಲೆಮರೆಸಿಕೊಂಡಿದ್ದರು.

ಬಿಎಂಡಬ್ಲ್ಯು ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
ರಾಜೇಶ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 10, 2024 | 2:23 PM

Share

ಮುಂಬೈ ಜುಲೈ 10: ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ (BMW Hit and Run Case) ಪ್ರಕರಣದ ಆರೋಪಿ ಮಿಹಿರ್ ಶಾ (Mihir Shah) ಅವರ ತಂದೆ ರಾಜೇಶ್ ಶಾ (Rajesh Shah) ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ ಉಪ ನಾಯಕ ಸ್ಥಾನದಿಂದ ಬುಧವಾರ ವಜಾಗೊಳಿಸಿದ್ದಾರೆ. 45 ವರ್ಷದ ಮಹಿಳೆ ಕಾವೇರಿ ನಖ್ವಾ ಅವರ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಆಗಿದ್ದಾರೆ ಮಿಹಿರ್ ಶಾ.

ಗುದ್ದೋಡು ಪ್ರಕರಣ ನಡೆದು ಎರಡು ದಿನಗಳ ನಂತರ ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಮಿಹಿರ್ ಶಾ ಅವರನ್ನು ಬಂಧಿಸಿದ್ದಾರೆ. ಜುಲೈ 7, ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ನಂತರ ಶಾ ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸಲು ಮುಂಬೈ ಪೊಲೀಸರು ಹದಿನಾಲ್ಕು ತಂಡಗಳನ್ನು ರಚಿಸಿದ್ದರು,

ಅಪಘಾತದ ಸಮಯದಲ್ಲಿ ಬಿಎಂಡಬ್ಲ್ಯು ಕಾರಿನಲ್ಲಿದ್ದ ರಾಜೇಶ್ ಶಾ ಮತ್ತು ಅವರ ಚಾಲಕ ರಾಜಋಷಿ ಸಿಂಗ್ ಬಿಡಾವತ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ನಂತರ ಮುಂಬೈನ ನ್ಯಾಯಾಲಯ ರಾಜೇಶ್ ಶಾಗೆ ಜಾಮೀನು ನೀಡಿತ್ತು. ಆರೋಪಿ ತಮ್ಮ ನಾಯಕನ ಮಗನಾಗಿರುವುದರಿಂದ ಶಿವಸೇನಾ ಏನೂ ಮಾಡುವುದಿಲ್ಲ ಎಂದು ಹಿಟ್ ಅಂಡ್ ರನ್ ಪ್ರಕರಣದ ಸಂತ್ರಸ್ತೆಯ ಪತಿ ಪ್ರದೀಪ್ ನಖ್ವಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಮದ್ಯ ಸೇವಿಸಿದ್ದ ಬಾರ್ ಕೆಡವಿದ ಬಿಎಂಸಿ

ಅದೇ ವೇಳೆ ಶಿವಸೇನಾ (ಯುಬಿಟಿ) ನಾಯಕ ಮತ್ತು ಸಂಸದ ಸಂಜಯ್ ರಾವುತ್ ಅವರು ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ಮೊದಲ ದಿನದಿಂದ ಪ್ರಾರಂಭವಾಗಿವೆ ಎಂದು ಆರೋಪಿಸಿದರು. ಶಿವಸೇನಾದ ಏಕನಾಥ್ ಶಿಂಧೆ ಬಣದ ಪಾಲ್ಘರ್ ಘಟಕದೊಂದಿಗೆ ಸಂಬಂಧ ಹೊಂದಿದ್ದ ಪ್ರಮುಖ ಆರೋಪಿ ಮಿಹಿರ್ ಶಾ ಅವರನ್ನು ಬಂಧಿಸಿದ ನಂತರ ಎಎನ್ಐ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಂಜಯ್ ರಾವುತ್, “ಆರೋಪಿಗಳನ್ನು ರಕ್ಷಿಸಲು ಸರ್ಕಾರವು ಪ್ರಯತ್ನಗಳನ್ನು ಮಾಡುತ್ತಿದೆ. ಇದು ಸಾಮಾನ್ಯ ಹಿಟ್ ಅಂಡ್ ರನ್ ಅಲ್ಲ,  ಪುಣೆಯಲ್ಲಿ ನಡೆದ ಘಟನೆಯಂತೆಯೇ ಇದೆ” ಎಂದು ಹೇಳಿದ್ದಾರೆ.

ಆರೋಪಿ ರಾಜೇಶ್ ಶಾ ಕ್ರಿಮಿನಲ್ ದಾಖಲೆಯನ್ನು ಪೊಲೀಸರು ಪರಿಶೀಲಿಸಬೇಕು ಎಂದು ಸಂಜಯ್ ರಾವುತ್ ಆಗ್ರಹಿಸಿದ್ದಾರೆ. ರಾಜೇಶ್ ಶಾಗೂ ಭೂಗತ ಪಾತಕಿ ಗ್ಯಾಂಗ್‌ಗೂ ಸಂಬಂಧವಿದೆ ಎಂದು ಹೇಳಿರುವ ಅವರು ಶಾ ಮುಖ್ಯಮಂತ್ರಿಗೆ ಹೇಗೆ ವಿಶೇಷ ವ್ಯಕ್ತಿಯಾದರು ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ