ನೂತನ ಮಹಾರಾಷ್ಟ್ರ ಸಂಪುಟದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಿಂದ ಗೃಹ ಖಾತೆಗೆ ಬೇಡಿಕೆ

ಹಲವು ದಿನಗಳ ಊಹಾಪೋಹಗಳ ನಂತರ ಶಿವಸೇನೆ (ಏಕನಾಥ್ ಶಿಂಧೆ ಬಣ) ಕೊನೆಗೂ ಗೃಹ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ಬಿಜೆಪಿ, ಎನ್​ಸಿಪಿ (ಅಜಿತ್ ಪವಾರ್ ಬಣ), ಶಿವಸೇನೆ (ಶಿಂಧೆ ಬಣ) ಪಕ್ಷಗಳು ಹೊಸ ಸಂಪುಟ ರಚನೆಯ ಬಗ್ಗೆ ಚರ್ಚೆ ನಡೆಸುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಳಂಬವಾಗಿದೆ.

ನೂತನ ಮಹಾರಾಷ್ಟ್ರ ಸಂಪುಟದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಿಂದ ಗೃಹ ಖಾತೆಗೆ ಬೇಡಿಕೆ
ಏಕನಾಥ್ ಶಿಂಧೆ
Follow us
ಸುಷ್ಮಾ ಚಕ್ರೆ
|

Updated on: Nov 30, 2024 | 5:10 PM

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಚರ್ಚೆಯ ನಡುವೆ ಶಿವಸೇನೆ ಇಂದು ಹೊಸ ಸಂಪುಟದಲ್ಲಿ ಪಕ್ಷಕ್ಕೆ ಗೃಹ ಸಚಿವಾಲಯದ ಅಧಿಕೃತ ಬೇಡಿಕೆಯನ್ನು ಇಟ್ಟಿದೆ. ಇದು ಏಕನಾಥ್ ಶಿಂಧೆ ಅವರ ಬೇಡಿಕೆ ಎಂದು ಹೇಳಿರುವ ಅವರು, ಈ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ. ಮಹಾಯುತಿ ಪಕ್ಷಗಳ ಎಲ್ಲಾ ಮೂರು ಪ್ರಮುಖ ನಾಯಕರಾದ ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಇವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಶುಕ್ರವಾರ ಬೆಳಿಗ್ಗೆ ಮುಂಬೈಗೆ ಹಿಂದಿರುಗಿದ ನಂತರ ಇತ್ತೀಚಿನ ಬೆಳವಣಿಗೆ ನಡೆದಿದೆ. ಗುರುವಾರ ರಾತ್ರಿ ರಾಜ್ಯದಲ್ಲಿ ಸರ್ಕಾರ ರಚನೆಯ ವಿಷಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ ನಡ್ಡಾ ಅವರೊಂದಿಗೆ ಉತ್ತಮ ಮತ್ತು ಪಾಸಿಟಿವ್ ಚರ್ಚೆ ನಡೆಸಿದ್ದೇನೆ ಎಂದು ಏಕನಾಥ್ ಶಿಂಧೆ ಶುಕ್ರವಾರ ಹೇಳಿದ್ದಾರೆ.

ಮುಂಬೈಗೆ ತೆರಳುವ ಮುನ್ನ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ರಾಜ್ಯ ರಾಜಧಾನಿಯಲ್ಲಿ ಮಹಾಯುತಿ ಒಕ್ಕೂಟದ ಮತ್ತೊಂದು ಸಭೆಯಲ್ಲಿ ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದ್ದರು. ನಾವು ಒಂದು ಅಥವಾ ಎರಡು ದಿನಗಳಲ್ಲಿ ಮಹಾರಾಷ್ಟ್ರದ ಸಿಎಂ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ಚರ್ಚೆ ನಡೆಸಿದ್ದೇವೆ ಮತ್ತು ಚರ್ಚೆಗಳು ಮುಂದುವರೆಯುತ್ತವೆ. ನಾವು ಅಂತಿಮ ನಿರ್ಧಾರವನ್ನು ತೆಗೆದುಕೊಂಡಾಗ ನಿಮಗೆ ತಿಳಿಯುತ್ತದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದರು.

ಇದನ್ನೂ ಓದಿ: ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಅಡ್ಡಿಯಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ಸರ್ಕಾರ ರಚನೆ ಮತ್ತು ಸಚಿವ ಸಂಪುಟದ ರಚನೆಯು ಸಮ್ಮಿಶ್ರ ಪಾಲುದಾರರಲ್ಲಿ ಚರ್ಚೆಯ ಕೇಂದ್ರವಾಗಿರುವುದರಿಂದ ಹಳೆಯ ಮತ್ತು ಹೊಸ ಮುಖಗಳ ಸಮಾನ ಮಿಶ್ರಣವನ್ನು ಹೊಂದಿರುವ 17 ಕ್ಯಾಬಿನೆಟ್ ಮಂತ್ರಿಗಳನ್ನು ಬಿಜೆಪಿ ಹೊಂದಬಹುದು ಎಂದು ವರದಿಗಳು ಸೂಚಿಸುತ್ತವೆ. ಏಕನಾಥ್ ಶಿಂಧೆ ಅವರ ಶಿವಸೇನೆ 9 ಕ್ಯಾಬಿನೆಟ್ ಸಚಿವರನ್ನು ಹೊಂದಬಹುದು ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ 7 ಕ್ಯಾಬಿನೆಟ್ ಮಂತ್ರಿಗಳನ್ನು ಹೊಂದಬಹುದು ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ