AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗ್ರಾಮ ಸೇರಿದಂತೆ 5 ವಿಧಾನಸಭಾ ಕ್ಷೇತ್ರ, 1 ಲೋಕಸಭಾ ಸ್ಥಾನಕ್ಕೆ ಉಪಚುನಾವಣೆ ಘೋಷಣೆ; ಅ. 6ಕ್ಕೆ ಮತದಾನ

ಭಾರತೀಯ ಚುನಾವಣಾ ಆಯೋಗವು ಇಂದು ಪ್ರಮುಖ ಉಪಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ನೌಗಾಂವ್ ಲೋಕಸಭಾ ಕ್ಷೇತ್ರಕ್ಕೆ ಅಕ್ಟೋಬರ್ 6ರಂದು ಮತದಾನ ನಡೆಯಲಿದೆ. ಅಕ್ಟೋಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. ಸೆಪ್ಟೆಂಬರ್ 9 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಸೆಪ್ಟೆಂಬರ್ 16 ನಾಮಪತ್ರ ಪರಿಶೀಲನೆ ನಡೆಯಲಿದೆ. ಸೆಪ್ಟೆಂಬರ್ 17ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ನಂದಿಗ್ರಾಮ ಸೇರಿದಂತೆ 5 ವಿಧಾನಸಭಾ ಕ್ಷೇತ್ರ, 1 ಲೋಕಸಭಾ ಸ್ಥಾನಕ್ಕೆ ಉಪಚುನಾವಣೆ ಘೋಷಣೆ; ಅ. 6ಕ್ಕೆ ಮತದಾನ
ಭಾರತೀಯ ಚುನಾವಣಾ ಆಯೋಗImage Credit source: TV9
ಸುಷ್ಮಾ ಚಕ್ರೆ
|

Updated on:Sep 07, 2026 | 8:31 PM

Share

ನವದೆಹಲಿ, ಸೆಪ್ಟೆಂಬರ್ 7: ಕೇಂದ್ರ ಚುನಾವಣಾ ಆಯೋಗವು ಇಂದು ಭಾರತದ 3 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ 1 ಲೋಕಸಭಾ ಕ್ಷೇತ್ರ ಸೇರಿದಂತೆ ಒಟ್ಟು 6 ಕ್ಷೇತ್ರಗಳಿಗೆ ಉಪಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ಮತ್ತು ಅಸ್ಸಾಂನಲ್ಲಿ ತೆರವಾಗಿರುವ ಈ ಕ್ಷೇತ್ರಗಳಿಗೆ ಅಕ್ಟೋಬರ್ 6ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಮತಎಣಿಕೆ ಮತ್ತು ಫಲಿತಾಂಶ ಹೊರಬೀಳಲಿದೆ. ನಿಯಮಗಳಂತೆ ಚುನಾವಣೆಗೆ ಸಂಬಂಧಿಸಿದ ಜಿಲ್ಲೆಗಳಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ನಂದಿಗ್ರಾಮ (ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧಿನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಭವಾನಿಪುರವನ್ನು ಉಳಿಸಿಕೊಂಡು ನಂದಿಗ್ರಾಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರ ಖಾಲಿಯಾಗಿದೆ.

ರೇಜಿನಗರ (ಪಶ್ಚಿಮ ಬಂಗಾಳ): ಆಮ್ ಜನತಾ ಉನ್ನಯನ್ ಪಾರ್ಟಿ (ಎಜೆಯುಪಿ) ಸಂಸ್ಥಾಪಕ ಹುಮಾಯೂನ್ ಕಬೀರ್ ತಾವು ಗೆದ್ದಿದ್ದ ರೇಜಿನಗರ ಮತ್ತು ನೌಡಾ ಕ್ಷೇತ್ರಗಳ ಪೈಕಿ ನೌಡಾವನ್ನು ಉಳಿಸಿಕೊಂಡು ರೇಜಿನಗರಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಬಂಕಿಪುರ ಉಪಚುನಾವಣೆ : ಪ್ರಶಾಂತ್ ಕಿಶೋರ್ ಕುಟುಂಬದ ಒಟ್ಟು ಆಸ್ತಿ 198 ಕೋಟಿ ರೂ.ಗೂ ಅಧಿಕ!

ಮಧುರಾಂತಕಂ ಮತ್ತು ಧರಾಪುರಂ (ತಮಿಳುನಾಡು): ಎಐಎಡಿಎಂಕೆಯಿಂದ ಗೆದ್ದಿದ್ದ ಮರಗತಂ ಕುಮಾರವೇಲ್ (ಮಧುರಾಂತಕಂ) ಮತ್ತು ಪಿ. ಸತ್ಯಭಾಮ (ಧರಾಪುರಂ) ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ತಟ್ಟಂಚಾವಡಿ (ಪುದುಚೇರಿ): ಮುಖ್ಯಮಂತ್ರಿ ಎನ್. ರಂಗಸಾಮಿ ತಟ್ಟಂಚಾವಡಿ ಮತ್ತು ಮಂಗಳಂ ಎರಡೂ ಕ್ಷೇತ್ರಗಳಲ್ಲಿ ಗೆದ್ದು, ಮಂಗಳಂ ಕ್ಷೇತ್ರವನ್ನು ಉಳಿಸಿಕೊಂಡು ತಟ್ಟಂಚಾವಡಿ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.

ನೌಗಾಂವ್ ಲೋಕಸಭಾ ಕ್ಷೇತ್ರ (ಅಸ್ಸಾಂ): ಕಾಂಗ್ರೆಸ್‌ನಿಂದ ಲೋಕಸಭಾ ಸದಸ್ಯರಾಗಿದ್ದ ಪ್ರದ್ಯುತ್ ಬೋರ್ಡೊಲೊಯ್, ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಲೋಕಸಭೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿ ಡಿಸ್ಪುರ್ ಶಾಸಕರಾಗಿ ಗೆಲುವು ಸಾಧಿಸಿದ್ದರಿಂದ ಈ ಲೋಕಸಭಾ ಕ್ಷೇತ್ರ ತೆರವಾಗಿದೆ.

ಇದನ್ನೂ ಓದಿ: ಬಿಹಾರದ ಬಂಕಿಪುರ ಉಪಚುನಾವಣೆ; ಅಭಿಷೇಕ್ ಸಿನ್ಹಾ ಬದಲು ಬಿಜೆಪಿಯಿಂದ ನೀರಜ್ ಕುಮಾರ್ ಸಿನ್ಹಾ ಕಣಕ್ಕೆ

ಚುನಾವಣಾ ವೇಳಾಪಟ್ಟಿ:

ಅಧಿಸೂಚನೆ ಹೊರಡಿಸುವ ದಿನಾಂಕ: ಸೆಪ್ಟೆಂಬರ್ 9

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 16

ನಾಮಪತ್ರ ಪರಿಶೀಲನೆ: ಸೆಪ್ಟೆಂಬರ್ 17

ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಸೆಪ್ಟೆಂಬರ್ 19

ಮತದಾನ: ಅಕ್ಟೋಬರ್ 6

ಮತಎಣಿಕೆ ಹಾಗೂ ಫಲಿತಾಂಶ: ಅಕ್ಟೋಬರ್ 9

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Mon, 7 September 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ