ಎಸ್‌ಐಆರ್ ವಿವಾದದ ಬೆನ್ನಲ್ಲೇ 17 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್​ಎಸ್​ಆರ್​​ ಘೋಷಿಸಿದ ಚುನಾವಣಾ ಆಯೋಗ

ಎಸ್​ಐಆರ್ ಪ್ರಕ್ರಿಯೆ ಮುಕ್ತಾಯಗೊಂಡಿರುವ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆಗಾಗಿ (ಎಸ್​ಎಸ್​ಆರ್​) ಭಾರತೀಯ ಚುನಾವಣಾ ಆಯೋಗ ಅಧಿಕೃತ ನಿರ್ದೇಶನ ನೀಡಿದೆ. 2027ರ ಜನವರಿ 1ಕ್ಕೆ 18 ವರ್ಷ ತುಂಬುವ ಯುವಕರು ಹಾಗೂ ಹೊಸ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲು ಈ ವಿಶೇಷ ಪರಿಷ್ಕರಣೆ ಸಹಕಾರಿಯಾಗಲಿದೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪಾವ್‌, ಗೋವಾ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಅಸ್ಸಾಂ, ಪುದುಚೇರಿ, ಲಕ್ಷದ್ವೀಪ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಈ ಪಟ್ಟಿಯಲ್ಲಿವೆ.

ಎಸ್‌ಐಆರ್ ವಿವಾದದ ಬೆನ್ನಲ್ಲೇ 17 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್​ಎಸ್​ಆರ್​​ ಘೋಷಿಸಿದ ಚುನಾವಣಾ ಆಯೋಗ
ಚುನಾವಣಾ ಆಯೋಗ
Image Credit source: PTI

Updated on: Oct 15, 2026 | 10:54 PM

ನವದೆಹಲಿ, ಅಕ್ಟೋಬರ್ 15: ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್) ಕುರಿತು ಭಾರಿ ವಿವಾದ ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು 1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 21ರ ಅಡಿಯಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ’ (SSR) ನಡೆಸುವಂತೆ ಇಂದು ನಿರ್ದೇಶನ ನೀಡಿದೆ. ಅರ್ಹ ಮತದಾರರನ್ನು, ಅದರಲ್ಲೂ ವಿಶೇಷವಾಗಿ ಯುವಕರು ಹಾಗೂ ಚೊಚ್ಚಲ ಮತದಾರರನ್ನು ಪಟ್ಟಿಗೆ ಸೇರಿಸುವುದು, ದೋಷಗಳನ್ನು ಸರಿಪಡಿಸುವುದು ಮತ್ತು ಮತದಾರರ ಪಟ್ಟಿಯ ನಿಖರತೆಯನ್ನು ಹೆಚ್ಚಿಸುವುದು ಈ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಮಣಿಪುರ, ಪುದುಚೇರಿ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳನ್ನು ಈ ಪರಿಷ್ಕರಣೆಯು ಒಳಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಸ್ತುತ ನಡೆಯುತ್ತಿರುವ ಅಥವಾ ಇತ್ತೀಚೆಗೆ ಪೂರ್ಣಗೊಂಡಿರುವ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಎಸ್‌ಎಸ್‌ಆರ್ (SSR) ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಸಿಇಸಿ ಜ್ಞಾನೇಶ್ ಕುಮಾರ್ ಮತ್ತು ಎಸ್​ಐಆರ್​ ಅಕ್ರಮಗಳ ವಿರುದ್ಧ ಇಂದು ಸುಪ್ರೀಂ ವಿಚಾರಣೆ: ಸಿಜೆಐ ಪೀಠದ ಮುಂದೆ ರಾಹುಲ್, ಖರ್ಗೆ ಜಂಟಿ ಅರ್ಜಿ

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಮುಖ್ಯ ಚುನಾವಣಾಧಿಕಾರಿ (ಸಿಇಒ), ಜಿಲ್ಲಾ ಚುನಾವಣಾಧಿಕಾರಿ (ಡಿಇಒ), ಮತದಾರರ ನೋಂದಣಾಧಿಕಾರಿ (ಇಆರ್​ಒ), ಸಹಾಯಕ ಮತದಾರರ ನೋಂದಣಾಧಿಕಾರಿ, ಬಿಎಲ್‌ಒ ಸೂಪರ್‌ವೈಸರ್‌ಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್​ಒ) ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಸಂಪನ್ಮೂಲಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಆಯೋಗವು ಎಲ್ಲಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.


ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಯಾವುದೇ ಅನರ್ಹ ವ್ಯಕ್ತಿಗಳು ಪಟ್ಟಿಗೆ ಸೇರದಂತೆ ನೋಡಿಕೊಳ್ಳುವುದು ಆಯಾ ವಿಧಾನಸಭಾ ಕ್ಷೇತ್ರದ ಇಆರ್‌ಒ ಜವಾಬ್ದಾರಿಯಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಎಸ್‌ಐಆರ್ ಅಕ್ರಮ; ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ

ಜನವರಿ 4ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ:

ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ನವೆಂಬರ್ 2ರಂದು ಮತಗಟ್ಟೆಗಳ ಮರುಸಂಘಟನೆ ಪೂರ್ಣಗೊಳ್ಳಲಿದೆ. ನವೆಂಬರ್ 12ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ನವೆಂಬರ್ 12 ರಿಂದ ಡಿಸೆಂಬರ್ 11ರವರೆಗೆ ಕರಡು ಪಟ್ಟಿಗೆ ಸಂಬಂಧಿಸಿದಂತೆ ದೂರುಗಳು, ಆಕ್ಷೇಪಣೆಗಳು ಮತ್ತು ಹಕ್ಕುಗಳ ಸಲ್ಲಿಕೆಗೆ ಮತದಾರರಿಗೆ ಕಾಲಾವಕಾಶ ನೀಡಲಾಗುವುದು. 2027ರ ಡಿಸೆಂಬರ್ 28ರಂದು ಸಲ್ಲಿಕೆಯಾದ ಆಕ್ಷೇಪಣೆಗಳು ಹಾಗೂ ಹಕ್ಕುಗಳ ವಿಲೇವಾರಿ ಪೂರ್ಣಗೊಳ್ಳಲಿದೆ. 2027ರ ಜನವರಿ 4ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.

ಯಾವ ರಾಜ್ಯಗಳಲ್ಲಿ ಎಸ್​ಎಸ್​ಆರ್​?:

ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ರಾಜ್ಯಗಳೂ ಈ 17 ರಾಜ್ಯಗಳ ಪಟ್ಟಿಯಲ್ಲಿವೆ. 403 ಸದಸ್ಯಬಲದ ಉತ್ತರ ಪ್ರದೇಶ ವಿಧಾನಸಭೆಯ ಅವಧಿಯು ಮುಂದಿನ ವರ್ಷ ಮೇ 22ಕ್ಕೆ ಮುಕ್ತಾಯಗೊಳ್ಳಲಿದ್ದು, ಮಣಿಪುರ (60), ಗೋವಾ (40), ಪಂಜಾಬ್ (117) ಮತ್ತು ಉತ್ತರಾಖಂಡ (70) ವಿಧಾನಸಭೆಗಳ ಅವಧಿಯು 2027ರ ಮಾರ್ಚ್‌ನಲ್ಲಿ ಬೇರೆ ಬೇರೆ ದಿನಾಂಕಗಳಂದು ಮುಕ್ತಾಯಗೊಳ್ಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us