ಮುಂದಿನ ಮೂರು ದಿನಗಳ ಕಾಲ ಯಾವುದೇ ರಾಜಕಾರಣಿಯೂ ಕೂಚ್ ಬಿಹಾರ್ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ; ಚುನಾವಣಾ ಆಯೋಗ

West Bengal Assembly Elections 2021: ವಿಧಾನಸಭಾ ಚುನಾವಣೆಯ 4ನೇ ಹಂತದ ಮತದಾನ ನಡೆದ ಇಂದು ಕೂಚ್ ಬಿಹಾರ್ ಜಿಲ್ಲೆಯಲ್ಲಿ ಹಿಂಸಾಚಾರ ಜರುಗಿ ನಾಲ್ವರು ಮೃತಪಟ್ಟಿದ್ದರು.

ಮುಂದಿನ ಮೂರು ದಿನಗಳ ಕಾಲ ಯಾವುದೇ ರಾಜಕಾರಣಿಯೂ ಕೂಚ್ ಬಿಹಾರ್ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ; ಚುನಾವಣಾ ಆಯೋಗ
ಪಶ್ಚಿಮ ಬಂಗಾಳ ವಿಧಾನಸಭೆ ಮತದಾನದ ನೋಟ
Follow us
guruganesh bhat
|

Updated on:Apr 10, 2021 | 9:43 PM

ಕೊಲ್ಕತ್ತಾ: ಮುಂದಿನ ಮೂರು ದಿನಗಳ ಕಾಲ ಯಾವುದೇ ರಾಜಕಾರಣಿಯೂ ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಚುನಾವಣಾ ಆಯೋಗ ಗಂಭೀರ ಆದೇಶ ಹೊರಡಿಸಿದೆ. ವಿಧಾನಸಭಾ ಚುನಾವಣೆಯ 4ನೇ ಹಂತದ ಮತದಾನ ನಡೆದ ಇಂದು ಕೂಚ್ ಬಿಹಾರ್ ಜಿಲ್ಲೆಯಲ್ಲಿ ಹಿಂಸಾಚಾರ ಜರುಗಿ ನಾಲ್ವರು ಮೃತಪಟ್ಟಿದ್ದರು. ಈ ಹಿಂಸಾಚಾರವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

4 ಜನ ಬಲಿಯಾಗಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರೇ ಕಾರಣ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. ಸದರಿ ಪ್ರದೇಶದಲ್ಲಿ ಉದ್ರಿಕ್ತ ಪರಿಸ್ಥಿತಿ ತಲೆದೋರಿದ್ದರಿಂದ ಚುನಾವಣಾ ಅಯೋಗವು ಮತದಾನವನ್ನು ಸ್ಥಗಿತಗೊಳಿಸಿತ್ತು.

‘ಇಂದಿನ ಘಟನೆಗೆ ಸಂಪೂರ್ಣವಾಗಿ ಗೃಹ ಸಚಿವ ಅಮಿತ್ ಶಾ ಅವರೇ ಕಾರಣ ಮತ್ತು ಖುದ್ದು ಅವರೇ ಪಿತೂರಿ ನಡೆಸಿ ಗಲಭೆ ಉಂಟಾಗುವ ಪರಿಸ್ಥಿತಿ ನಿರ್ಮಿಸಿದರು. ನಾನು ಕೇಂದ್ರದ ಭದ್ರತಾ ದಳಗಳನ್ನು ದೂಷಿಸುವುದಿಲ್ಲ ಯಾಕೆಂದರೆ ಗೃಹ ಸಚಿವರ ನೀಡುವ ಆಜ್ಞೆಯನ್ನು ಪಾಲಿಸುವುದಷ್ಟೇ ಅವರ ಕೆಲಸ. ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸುತ್ತೇವೆ,’ ಎಂದು ಹೇಳಿದ ಮಮತಾ ಬ್ಯಾನರ್ಜಿ ಅವರು, ‘ನಾಲ್ಕು ಜನರ ಸಾವು ಕೇಂದ್ರ ಭದ್ರತಾ ದಳಗಳು ನಡೆಸಿರುವ ಹತ್ಯೆ,’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗಲಭೆಯಲ್ಲಿ ಸತ್ತವರಿಗೆ ಸಂತಾಪ ಸೂಚಿಸಿದ್ದಾರೆ. ಆದರೆ ಘಟನೆಯ ನಂತರ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷವನ್ನು ತರಾಟಗೆ ತೆಗೆದುಕೊಂಡಿದ್ದಾರೆ.

‘ಕೂಚ್​ ಬಿಹಾರ್​ನಲ್ಲಿ ಇಂದು ನಡೆದಿದ್ದು ಬಹಳ ದುಖಃಕರ ಮತ್ತು ವಿಷಾದನೀಯ ಸಂಗತಿ. ಘಟನೆಯಲ್ಲಿ ಮಡಿದವರ ಕುಟುಂಬಗಳಿಗೆ ನಾನು ಸಂತಾಪಗಳನ್ನು ಸೂಚಿಸಿತ್ತೇನೆ. ಮಮತಾ ದೀದಿ ಮತ್ತು ಅಕೆಯ ಗೂಂಡಾಪಡೆ ಬಂಗಾಳದಲ್ಲಿ ಬಿಜೆಪಿ ಸಿಗುತ್ತಿರುವ ಅಭೂತಪೂರ್ವ ಬೆಂಬಲದಿಂದ ಭೀತಿಗೊಳಗಾಗಿದ್ದಾರೆ,’ ಎಂದು ಪ್ರಧಾನ ಮಂತ್ರಿ ಮೋದಿ ಹೇಳಿದ್ದಾರೆ.

ಪ್ರಧಾನಿ ಅವರ ಟೀಕೆಗೆ ಪ್ರತಿಕ್ರಿಯೆ ನೋಡಿರುವ ಮಮತಾ ಅವರು, ‘ಬಂಗಾಳದಲ್ಲಿ ತಾನು ಗೆಲ್ಲುವುದಿಲ್ಲ ಎನ್ನುವುದು ಬಿಜೆಪಿ ಖಾತ್ರಿಯಾಗಿದೆ, ಹಾಗಾಗೇ, ಅದು ಬಾಂಬ್ ಮತ್ತು ಹಿಂಸೆಯ ಮೊರೆಹೊಕ್ಕಿದೆ.’ ಎಂದಿದ್ದಾರೆ.

ಕೂಚ್ ಬೆಹರ್ ಜಿಲ್ಲೆಯಲ್ಲಿ ಶನಿವಾರ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ನಡೆದ ಹೊಡೆದಾಟದಲ್ಲಿ ನಾಲ್ವರು ಗುಂಡಿಗೆ ಬಲಿಯಾಗಿದ್ದರು. ಇನ್ನು ಮತದಾನ ಬೂತ್ ಹೊರಗೆ ಮೊದಲ ಬಾರಿಗೆ  ಮತದಾರ ಮಾಡುವ ಓರ್ವರು ಗುಂಡಿಗೆ ಬಲಿಯಾಗಿದ್ದಾರೆ ಎಂದು ವರದಿ ಆಗಿತ್ತು.  ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ, ಪ್ರಾಥಮಿಕ ವರದಿಯಂತೆ, ಹಳ್ಳಿಯೊಂದರಲ್ಲಿ ಸಿಐಎಸ್​ಎಫ್ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿದಾಗ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳೀಯರು ಸಿಐಎಸ್​ಎಫ್ ಅಧಿಕಾರಿಗಳಿಗೆ ಘೇರಾವ್ ಹಾಕಿ, ರೈಫಲ್ ಕಸಿದುಕೊಳ್ಳುವುದಕ್ಕೆ ಯತ್ನಿಸಿದಾಗ ಕೇಂದ್ರ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿವೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎನ್ನಲಾಗಿತ್ತು. ಏಕೆಂದರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಇನ್ನೂ ನಾಲ್ವರ ಸ್ಥಿತಿ ಗಂಭೀರವಾಗಿದೆ. ಸುಮಾರು 400 ಜನರಿದ್ದ ಗುಂಪು ಕೇಂದ್ರ ಪಡೆಗಳ ಮೇಲೆ ದಾಳಿ ನಡೆಸಿವೆ.

ಮೃತಪಟ್ಟ ಬರ್ಮನ್ ತಮ್ಮ ಪಕ್ಷಕ್ಕೆ ಸೇರಿದ ವ್ಯಕ್ತಿ ಎಂದು ಬಿಜೆಪಿ ಹಾಗೂ ಟಿಎಂಸಿ ಎರಡೂ ಹೇಳಿಕೊಂಡಿವೆ. ಆದರೆ ಆತನ ಕುಟುಂಬ ಸದಸ್ಯರು ಹೇಳುವಂತೆ, ಬರ್ಮನ್ ಕೇಸರಿ ಪಕ್ಷದ ಬೆಂಬಲಿಗ. “ಕೂಚ್​ಬೆಹರ್​ನ ಸೀತಾಲಕುಚಿಯಲ್ಲಿ ಮತದಾನದ ಬೂತ್ ಹೊರಗೆ ವ್ಯಕ್ತಿಯೊಬ್ಬರಿಗೆ ಗುಂಡಿಟ್ಟು ಕೊಲ್ಲಲಾಗಿದೆ ಎಂಬ ಮಾಹಿತಿ ನಮಗೆ ಬಂದಿದೆ. ಈ ಬಗ್ಗೆ ಮೈಕ್ರೋ ಅಬ್ಸರ್ವರ್​ರಿಂದ ವರದಿ ಕೇಳಿದ್ದೇವೆ,” ಎಂದು ಚುನಾವಣೆ ಆಯೋಗದ ಅಧಿಕಾರಿ ಹೇಳಿದ್ದಾರೆ. ಇನ್ನು ಕೂಚ್​ಬೆಹರ್​ನ ನಟಬರಿ, ಸೀತಾಲಕುಚಿ, ತೂಫಾನ್​ಗಂಜ್, ಮಾತಾಭಂಗ ಮತ್ತು ದಿನ್ಹಾತದಲ್ಲಿ ತಮ್ಮ ಪಕ್ಷದ ಏಜೆಂಟರಿಗೆ ಬೂತ್ ಪ್ರವೇಶಿಸಲು ಬಿಜೆಪಿ ಅವಕಾಶ ನೀಡುತ್ತಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಆದರೆ ಇದನ್ನು ಬಿಜೆಪಿ ನಿರಾಕರಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ಪಶ್ಚಿಮ ಬಂಗಾಳ ಕದನ ಕಣ; 4ನೇ ಹಂತದ ಮತದಾನದಲ್ಲಿ ಸಿಂಗೂರ್ ಕ್ಷೇತ್ರ ನಿರ್ಣಾಯಕ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ 2ನೇ ನೋಟಿಸ್ ನೀಡಿದ ಚುನಾವಣಾ ಆಯೋಗ

(Election Commission banned Politicians entry in West Bengal Cooch Behar district next 3 days after 4 people died in clashes)

Published On - 9:37 pm, Sat, 10 April 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ