ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಷೇಧಿಸಿದ ಚುನಾವಣಾ ಆಯೋಗ

ಕರ್ನಾಟಕ ಸರ್ಕಾರವು ಕಳೆದ ಕೆಲವು ದಿನಗಳಿಂದ ತೆಲಂಗಾಣದ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್, ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಮುಖಂಡರಾದ ಸುಧಾಂಶು ತ್ರಿವೇದಿ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಷೇಧಿಸಿದ ಚುನಾವಣಾ ಆಯೋಗ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Nov 27, 2023 | 9:17 PM

ಹೈದರಾಬಾದ್​ ನ.27: ತೆಲಂಗಾಣದಲ್ಲಿ (Telangana) ಕರ್ನಾಟಕ ಸರ್ಕಾರದ (Karnataka Government) ಜಾಹೀರಾತುಗಳನ್ನು ಕೇಂದ್ರ ಚುನಾವಣಾ ಆಯೋಗ (Election Commission) ನಿಷೇಧಿಸಿದೆ. ಕರ್ನಾಟಕ ಸರ್ಕಾರವು ಕಳೆದ ಕೆಲವು ದಿನಗಳಿಂದ ತೆಲಂಗಾಣದಲ್ಲಿ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ. ಈ ಮೂಲಕ ಕಾಂಗ್ರೆಸ್​ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್, ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಮುಖಂಡರಾದ ಸುಧಾಂಶು ತ್ರಿವೇದಿ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ (BJP) ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಿಜೆಪಿ ದೂರಿನ ಬಳಿಕ ಚುನಾವಣಾ ಆಯೋಗ ಇದೀಗ ಕರ್ನಾಟಕ ಸರ್ಕಾರದ ಜಾಹಿರಾತುಗಳನ್ನು ತೆಲಂಗಾಣದಲ್ಲಿ ನಿಷೇಧಿಸಿದೆ.

ಕರ್ನಾಟಕ ಸರ್ಕಾರವು ಕಳೆದ ಕೆಲವು ದಿನಗಳಿಂದ ತೆಲಂಗಾಣದ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಭೂಪೇಂದರ್ ಯಾದವ್ ಆರೋಪಿಸಿದ್ದರು.

ಇದನ್ನೂ ಓದಿ: ಕೆಸಿಆರ್ ಬಿಜೆಪಿ ಜೊತೆ ಸ್ನೇಹ ಬೆಳೆಸಲು ಪ್ರಯತ್ನ ನಡೆಸುತ್ತಿದ್ದರು: ತೆಲಂಗಾಣದಲ್ಲಿ ಪ್ರಧಾನಿ ಮೋದಿ

ಕಾಂಗ್ರೆಸ್​ ಚುನಾವಣಾ ನಿಯಮಗಳು ಮತ್ತು ನಿಬಂಧನೆಗಳನ್ನು ಗಾಳಿಗೆ ತೂರಿದೆ.  ಇದು ಚುನಾವಣೆಗಳ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ “ಭ್ರಷ್ಟ ಅಭ್ಯಾಸ” ವನ್ನು ರೂಢಿಸಿಕೊಳ್ಳುತ್ತಿದೆ.  ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತ್ತು ಕಾಂಗ್ರೆಸ್‌ನ ಇತರ ಸಂಬಂಧಿತ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:58 pm, Mon, 27 November 23