2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾಕೆ ಚುನಾವಣೆ ನಡೆದಿಲ್ಲ? ಕಾರಣ ವಿವರಿಸಿದ ಚುನಾವಣಾ ಆಯೋಗ

ಐದು ವರ್ಷಗಳ ಹಿಂದೆ, ಆಗಿನ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಏಪ್ರಿಲ್ ಮತ್ತು ಮೇ 2019 ರಲ್ಲಿ ಸಂಸತ್ತಿನ ಚುನಾವಣೆಗಳೊಂದಿಗೆ ವಿಧಾನಸಭೆ ಚುನಾವಣೆಗಳನ್ನು ನಡೆಸದಿರಲು ಇದೇ ಕಾರಣಗಳನ್ನು ಉಲ್ಲೇಖಿಸಿದ್ದರು. ಇದೇ ಕಾರಣವನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪುನರಾವರ್ತಿಸಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾಕೆ ಚುನಾವಣೆ ನಡೆದಿಲ್ಲ? ಕಾರಣ ವಿವರಿಸಿದ ಚುನಾವಣಾ ಆಯೋಗ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Mar 16, 2024 | 9:01 PM

ಶ್ರೀನಗರ ಮಾರ್ಚ್ 16: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಲೋಕಸಭೆ ಚುನಾವಣೆಯೊಂದಿಗೆ (Lok Sabha Election) ವಿಧಾನಸಭೆ ಚುನಾವಣೆ ನಡೆಸಲು ಸಾಧ್ಯವಾಗದೇ ಇರುವುದಕ್ಕೆ ಭದ್ರತಾ ಕಳವಳವೇ ಕಾರಣ ಎಂದು ಚುನಾವಣಾ ಆಯೋಗ (poll panel) ಹೇಳಿದೆ. 2019 ರಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದಾಗ ಚುನಾವಣಾ ಸಮಿತಿ ಏನು ಹೇಳಿತ್ತೋ ಅದನ್ನೇ ಇವತ್ತು (ಶನಿವಾರ) ಪುನರಾವರ್ತಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿದಾನಸಭಾ ಚುನಾವಣೆ ನಡೆದಿತ್ತು. ಸುಮಾರು ಆರು ವರ್ಷಗಳಿಂದ ಈ ಪ್ರದೇಶವು ಚುನಾಯಿತ ಸರ್ಕಾರವಿಲ್ಲದೆ ಇದೆ.

ಲೋಕಸಭಾ ಚುನಾವಣೆ ಜತೆ ಆಂಧ್ರ ಪ್ರದೇಷ, ಒಡಿಶಾ, ಅರುಣಾಚಲ ಮತ್ತು ಸಿಕ್ಕಿಂ ಈ ನಾಲ್ಕು ರಾಜ್ಯಗಳಲ್ಲಿ  ವಿಧಾನಸಭಾ ಚುನಾವಣೆಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳು ಬಾಕಿ ಇವೆ. ಆದರೆ ಲೋಕಸಭಾ ಚುನಾವಣೆಯೊಂದಿಗೆ ಅವುಗಳನ್ನು ನಡೆಸದಿರಲು ಭದ್ರತಾ ಕಾರಣಗಳನ್ನು ಉಲ್ಲೇಖಿಸಿದ್ದಾರೆ.

ಭದ್ರತಾ ಕಾರಣದಿಂದಾಗಿ ಇಡೀ ಜಮ್ಮು ಮತ್ತು ಕಾಶ್ಮೀರ ಆಡಳಿತವು ಏಕಕಾಲದಲ್ಲಿ ಚುನಾವಣೆ ನಡೆಸಲು ನಿರಾಕರಿಸಿದೆ ಎಂದು ಉನ್ನತ ಚುನಾವಣಾ ಅಧಿಕಾರಿ ಹೇಳಿದ್ದಾರೆ. ಆದಾಗ್ಯೂ, ಲೋಕಸಭಾ ಚುನಾವಣೆಗಳು ಮುಗಿದ ಕೂಡಲೇ ವಿಧಾನಸಭಾ ಚುನಾವಣೆಗಳನ್ನು ನಡೆಸುವುದು ನಮ್ಮ ಬದ್ಧತೆಯಾಗಿದೆ. ಸಾಕಷ್ಟು ಭದ್ರತಾ ಪಡೆಗಳ ಲಭ್ಯತೆ ಇದೆ ಎಂದು ಅವರು ಹೇಳಿದರು.

ಐದು ವರ್ಷಗಳ ಹಿಂದೆ, ಆಗಿನ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಏಪ್ರಿಲ್ ಮತ್ತು ಮೇ 2019 ರಲ್ಲಿ ಸಂಸತ್ತಿನ ಚುನಾವಣೆಗಳೊಂದಿಗೆ ವಿಧಾನಸಭೆ ಚುನಾವಣೆಗಳನ್ನು ನಡೆಸದಿರಲು ಇದೇ ಕಾರಣಗಳನ್ನು ಉಲ್ಲೇಖಿಸಿದ್ದರು.

ತಿಂಗಳುಗಳ ನಂತರ, ಚುನಾವಣೆಯ ಬದಲಿಗೆ, ಕೇಂದ್ರವು ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿದ್ದು ಆಗಸ್ಟ್ 2019 ರಲ್ಲಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು.

ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ವಿವಾದಾತ್ಮಕ ಡಿಲಿಮಿಟೇಶನ್ ಪ್ರಕ್ರಿಯೆಗೊಳಗಾಗಿ 90 ವಿಧಾನಸಭಾ ಸ್ಥಾನಗಳ ಗಡಿಗಳನ್ನು ಮರುಹೊಂದಿಸಿದೆ. ಇದರ ನಂತರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯಲ್ಲಿ ತಿದ್ದುಪಡಿ ಮಾಡಲಾಗಿದ್ದು, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿಗೆ ಐದು ಸದಸ್ಯರನ್ನು ನಾಮನಿರ್ದೇಶನ ಮಾಡಲು ಅಧಿಕಾರವನ್ನು ನೀಡಲಾಯಿತು, ಇದು ನಾಮನಿರ್ದೇಶಿತ ಸದಸ್ಯರು ಮತದಾನದ ಹಕ್ಕನ್ನು ಹೊಂದಿರುವುದರಿಂದ ಅಸೆಂಬ್ಲಿಯಲ್ಲಿ ಮತ್ತಷ್ಟು ಆದೇಶವನ್ನು ಬದಲಾಯಿಸಬಹುದು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ 544 ಸ್ಥಾನಗಳಿಗೆ ಮತದಾನ? ಏನಿದು ಲೆಕ್ಕಾಚಾರ?

ಡಿಸೆಂಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯಲ್ಲಿ ತಿದ್ದುಪಡಿಯನ್ನು ಉಲ್ಲೇಖಿಸಿದ ಶ ಕುಮಾರ್, ಮೂರು ತಿಂಗಳ ಹಿಂದೆ ಮರುಸಂಘಟನೆ ಕಾಯಿದೆಗೆ ತಿದ್ದುಪಡಿ ಮಾಡಿದಾಗ ಚುನಾವಣೆಗಳನ್ನು ನಡೆಸುವ ಕೆಲಸ ಪ್ರಾರಂಭವಾಯಿತು ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Sat, 16 March 24

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?