West Bengal By-Election Results ಚುನಾವಣಾ ಫಲಿತಾಂಶದ ನಂತರ ಸಂಭ್ರಮಾಚರಣೆ ಬೇಡ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

Election Commission: ಪಶ್ಚಿಮ ಬಂಗಾಳದಲ್ಲಿ ಮೂರು ಮತ್ತು ಒಡಿಶಾದಲ್ಲಿ ಒಂದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು ಪ್ರಸ್ತುತ ನಡೆಯುತ್ತಿದೆ.

West Bengal By-Election Results ಚುನಾವಣಾ ಫಲಿತಾಂಶದ ನಂತರ ಸಂಭ್ರಮಾಚರಣೆ ಬೇಡ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ
ಟಿಎಂಸಿ ಸಂಭ್ರಮಾಚರಣೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Oct 03, 2021 | 2:06 PM

ಪಶ್ಚಿಮ ಬಂಗಾಳ: ಭವಾನಿಪುರ (Bhabanipur) ಉಪಚುನಾವಣೆಯ ಮತ ಎಣಿಕೆಯ ಸಮಯದಲ್ಲಿ ಅಥವಾ ನಂತರ ಯಾವುದೇ ವಿಜಯೋತ್ಸವ, ಮೆರವಣಿಗೆ ನಡೆಯದಂತೆ ನೋಡಿಕೊಳ್ಳುವಂತೆ ಚುನಾವಣಾ ಆಯೋಗ  (Election Commission) ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚುನಾವಣೋತ್ತರ ಹಿಂಸಾಚಾರ ಸಂಭವಿಸದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಯೋಗ ಬಂಗಾಳ ಸರ್ಕಾರಕ್ಕೆ ಹೇಳಿದೆ. ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಭವಾನಿಪುರದಲ್ಲಿ ಗೆಲ್ಲಲೇಬೇಕು, ಹಾಗಾಗಿ ಎಲ್ಲರ ದೃಷ್ಟಿ ಪಶ್ಚಿಮ ಬಂಗಾಳದ ಭವಾನಿಪುರದ ಮೇಲೆ ಕೇಂದ್ರೀಕೃತವಾಗಿವೆ.

ಪಶ್ಚಿಮ ಬಂಗಾಳದಲ್ಲಿ ಮೂರು ಮತ್ತು ಒಡಿಶಾದಲ್ಲಿ ಒಂದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು ಪ್ರಸ್ತುತ ನಡೆಯುತ್ತಿದೆ. ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳು ಭವಾನಿಪುರ, ಜಂಗೀಪುರ ಮತ್ತು ಸಂಸರ್‌ಗಂಜ್, ಒಡಿಶಾದಲ್ಲಿ ಪಿಪಿಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಪಶ್ಚಿಮ ಬಂಗಾಳ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸುವೇಂದು ಅಧಿಕಾರಿಯ ವಿರುದ್ಧ ನಂದಿಗ್ರಾಮದಲ್ಲಿ ಪರಾಭವಗೊಂಡಿದ್ದರು. ಚುನಾವಣೆ ಗೆಲ್ಲದೇ ಇದ್ದರೂ ಮುಖ್ಯಮಂತ್ರಿಯಾಗಿರುವ ಮಮತಾ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಭವಾನಿಪುರದಲ್ಲಿ ಗೆಲ್ಲಲೇ ಬೇಕಿದೆ. ಪ್ರತಿಷ್ಠೆಯ ಕಣವಾಗಿರುವ ಇಲ್ಲಿ ಬಿಜೆಪಿ ಪ್ರಿಯಾಂಕಾ ಟಿಬರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಮಮತಾ ಬ್ಯಾನರ್ಜಿಯ ನಿವಾಸಕ್ಕೆ ಅಭಿಷೇಕ್ ಬ್ಯಾನರ್ಜಿ ಆಗಮನ ಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಗೆಲುವಿನತ್ತ ದಾಪುಗಾಲು ಹಾಕಿದ ತಕ್ಷಣ ಅವರ ನಿವಾಸವನ್ನು ತಲುಪಿದರು. 11 ಸುತ್ತುಗಳ ಎಣಿಕೆ ಮುಗಿದಿದ್ದು, ಮಮತಾ 31,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಅಖಿಲೇಶ್ ಯಾದವ್ ಅಭಿನಂದನೆ ಸಲ್ಲಿಕೆ

ಮಮತಾ ಮುಖರ್ಜಿ ಮುನ್ನಡೆ

13 ಸುತ್ತಿನ ಮತ ಎಣಿಕೆಯ ನಂತರ ಮಮತಾ ಬ್ಯಾನರ್ಜಿ  36,457 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: West Bengal By-Election Results: ಪಶ್ಚಿಮ ಬಂಗಾಳದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

Published On - 2:03 pm, Sun, 3 October 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ