AAP: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷ ಮಾನ್ಯತೆ ಕೋರಿ ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಬಗ್ಗೆ ನಿರ್ಧರಿಸಲು ಚುನಾವಣೆ ಆಯೋಗಕ್ಕೆ ಗಡುವು ನೀಡಿತ್ತು. ಇದರ ಬೆನ್ನಲ್ಲೇ ಆಪ್​ಗೆ ರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ.

AAP: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ
ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ
Follow us
Rakesh Nayak Manchi
|

Updated on:Apr 10, 2023 | 8:40 PM

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ (Aam Aadmi Party) ರಾಷ್ಟ್ರೀಯ ಪಕ್ಷ ಮಾನ್ಯತೆ ನೀಡಿ ಕೇಂದ್ರ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ. ಇದೇ ವೇಳೆ ತೃಣ ಮೂಲ ಕಾಂಗ್ರೆಸ್ (TMC) ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ರಾಷ್ಟ್ರೀಯ ಪಕ್ಷಗಳು ಅಲ್ಲ ಎಂದು ಹೇಳಿದೆ. ದೆಹಲಿ, ಪಂಜಾಬ್ ನಂತರ ಗುಜರಾತ್​ ರಾಜ್ಯದಲ್ಲೂ ಕೆಲವೊಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರೀಯ ಸ್ಥಾನಮಾನ ಪಡೆಯುವ ಅರ್ಹತೆಯನ್ನು ಗಿಟ್ಟಿಸಿಕೊಂಡಿತ್ತು. ಸದ್ಯ ಚುನಾವಣಾ ಆಯೋಗವು ಆಪ್ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡಿದೆ. ಅದರಂತೆ ಕೇವಲ 10 ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ.

ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ಸಿಕ್ಕಿದ ಬಗ್ಗೆ ಟ್ವೀಟ್ ಮಾಡಿದ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷವೇ? ಇದು ಪವಾಡಕ್ಕಿಂತ ಕಡಿಮೆಯಿಲ್ಲ. ಎಲ್ಲರಿಗೂ ಅಭಿನಂದನೆಗಳು, ದೇಶದ ಲಕ್ಷಾಂತರ ಜನರು ನಮ್ಮನ್ನು ಈ ಸ್ಥಾನಕ್ಕೆ ತಂದಿದ್ದಾರೆ. ಜನರು ನಮ್ಮಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಇಂದು ಜನರು ನಮಗೆ ಈ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಜವಾಬ್ದಾರಿಯನ್ನು ಚೆನ್ನಾಗಿ ಪೂರೈಸಲು ನಮ್ಮನ್ನು ಆಶೀರ್ವದಿಸಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Kevin Pietersen: ಕರ್ನಾಟಕಕ್ಕೆ ಮೋದಿ ಭೇಟಿ, ಕಾಡು ಪ್ರಾಣಿಗಳನ್ನು ಆರಾಧಿಸುವ ವಿಶ್ವ ನಾಯಕ ಎಂದ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ

10 ವರ್ಷಗಳ ಹಿಂದೆ ಎಎಪಿ ರಚನೆಯಾಗಿ ಭರ್ಜರಿ ಉಚಿತ ಕೊಡುಗೆಗಳ ಘೋಷಣೆಗಳೊಂದಿಗೆ ದೆಹಲಿಯಲ್ಲಿ ಅಧಿಕಾರಕ್ಕೇರಿದ್ದ ಆಪ್ ಪಕ್ಷ, ನಂತರ ಮತ್ತೊಮ್ಮೆ ಅಧಿಕಾರ ಹಿಡಿಯಿತು. ಕಾಂಗ್ರೆಸ್ ಆಡಳಿತವಿದ್ದ ಪಂಜಾಬ್ ರಾಜ್ಯದಲ್ಲಿ ಪ್ರಚಂಡ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿತ್ತು. ನಂತರ ಗೋವಾ ಟಾರ್ಗೆಟ್ ಮಾಡಿದ್ದ ಆಪ್, ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಬಳಿಕ ಗುಜರಾತ್​ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷವು ಐದು ಸ್ಥಾನಗಳನ್ನು ಗೆದ್ದುಗೊಳ್ಳುವಲ್ಲಿ ಯಶಸ್ವಿಯಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ವಾರಗಳು ಬಾಕಿ ಇರುವಾಗ, ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪಕ್ಷದಿಂದ ಪದೇ ಪದೇ ವಿನಂತಿ ಮತ್ತು ಪ್ರಾತಿನಿಧ್ಯಗಳ ಹೊರತಾಗಿಯೂ ಇಸಿಐ ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ವಿಳಂಬ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಆಮ್ ಆದ್ಮಿ ಪಕ್ಷದ ಮನವಿ ಪರಿಶೀಲಿಸಿ ಏ.13ರೊಳಗೆ ಈ ಬಗ್ಗೆ ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು.

ರಾಷ್ಟ್ರೀಯ ಪಕ್ಷವಾಗಲು ಅಗತ್ಯ ಅರ್ಹತೆಗಳೇನು?

ಯಾವುದೇ ಒಂದು ಪಕ್ಷ ರಾಷ್ಟ್ರೀಯ ಪಕ್ಷವಾಗಲು ಮೂರು ಷರತ್ತುಗಳನ್ನು ಚುನಾವಣಾ ಆಯೋಗ ಮುಂದಿಡುತ್ತದೆ.  ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಗಳಿಸಲು, ಒಂದು ರಾಜಕೀಯ ಪಕ್ಷವು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಗುರುತಿಸಲ್ಪಡಬೇಕು. ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ಕನಿಷ್ಠ ಎರಡು ಸ್ಥಾನಗಳನ್ನು ಮತ್ತು ಶೇ. 6 ರಷ್ಟು ಮತಗಳನ್ನು ಆಯಾ ಪಕ್ಷವು ಪಡೆಯಬೇಕು.  ಶೇ. 3ರಷ್ಟು ವಿಧಾನಸಭಾ ಸ್ಥಾನಗಳನ್ನು ಅಥವಾ 3 ವಿಧಾನಸಭಾ ಸ್ಥಾನಗಳಲ್ಲಿ ಯಾವುದು ಹೆಚ್ಚೋ ಅದನ್ನು ಗೆಲ್ಲಬೇಕು. ಮಾತ್ರವಲ್ಲದೆ, ಶೇ. 8ಕ್ಕಿಂತ ಹೆಚ್ಚಿನ ಮತಗಳನ್ನು ಪಡೆಯಬೇಕು. ಆಗ ಮಾತ್ರ ಪಕ್ಷವೊಂದು ರಾಷ್ಟ್ರೀಯ ಸ್ಥಾನಮಾನವನ್ನು ಪಡೆಯಬಹುದು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Mon, 10 April 23