AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಚುನಾವಣಾ ಆಯೋಗ ಹೇಳಿದೆ. . ಪ್ರಧಾನಿ ಮೋದಿ ಅವರನ್ನು ಅವಮಾನಿಸಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ದಾಖಲಿಸಿತ್ತು.

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್
Congress Chief Mallikarjun KhargeImage Credit source: PTI
ಸುಷ್ಮಾ ಚಕ್ರೆ
|

Updated on:Apr 22, 2026 | 7:25 PM

Share

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ.

ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ನಿನ್ನೆ ದೂರು ನೀಡಿತ್ತು. ಅದರ ಬೆನ್ನಲ್ಲೇ ಇಂದು ಆಯೋಗ ಖರ್ಗೆಗೆ ನೋಟಿಸ್ ನೀಡಿದೆ. ಇಂದು ಚುನಾವಣಾ ಆಯೋಗ ಖರ್ಗೆ ಅವರಿಗೆ ಕಠಿಣ ಎಚ್ಚರಿಕೆ ನೀಡಿದ್ದು, 24 ಗಂಟೆಗಳ ಒಳಗೆ ಅವರ ನಿಲುವನ್ನು ವಿವರಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮೂವರು ಕೇಂದ್ರ ಸಚಿವರನ್ನು ಒಳಗೊಂಡ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಸಂಪರ್ಕಿಸಿ, ಪ್ರಧಾನಿ ಮೋದಿ ಅವರ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು.

ಮಂಗಳವಾರ ಚುನಾವಣೆ ನಡೆಯಲಿರುವ ತಮಿಳುನಾಡಿನ ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಯನ್ನು “ಭಯೋತ್ಪಾದಕ” ಎಂದು ಕರೆದ ನಂತರ ಈ ವಿವಾದ ಭುಗಿಲೆದ್ದಿತು. ಅವರ ಹೇಳಿಕೆಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಸಚಿವರು ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

“ಪೆರಿಯಾರ್, ಡಾ. ಅಂಬೇಡ್ಕರ್, ಅಣ್ಣಾದೊರೈ, ಕಮಲರಾಜ್ ಮತ್ತು ಕಲೈಗ್ನಾರ್ ಈ ಜನರು ಮಹಿಳಾ ಮೀಸಲಾತಿ, ನ್ಯಾಯ, ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಹೋರಾಡಿದವರು. ಪ್ರಧಾನಿ ಮೋದಿ ಈ ತತ್ವಗಳಿಗೆ ಬದ್ಧರಲ್ಲ. ಪೆರಿಯಾರ್ ಅವರನ್ನು ಪೂಜಿಸಲು ಎಐಎಡಿಎಂಕೆ ಮೋದಿಯೊಂದಿಗೆ ಹೇಗೆ ಕೈ ಜೋಡಿಸಿದರು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಮೋದಿ ಒಬ್ಬ ಭಯೋತ್ಪಾದಕ. ಅವರು ಹಾಗೂ ಅವರ ಪಕ್ಷ ಸಮಾನತೆ ಮತ್ತು ನ್ಯಾಯವನ್ನು ನಂಬುವುದಿಲ್ಲ” ಎಂದು ಖರ್ಗೆ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:24 pm, Wed, 22 April 26

Follow Us