ಪ್ರಧಾನಿ ಮೋದಿ ವಿರುದ್ಧ ಟೀಕೆ; ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

|

Updated on: Nov 23, 2023 | 6:18 PM

“ಪ್ರಧಾನಿ ಬಗ್ಗೆ ಆಕ್ಷೇಪಾರ್ಹ ಪದವನ್ನು ಬಳಸುವುದು ರಾಷ್ಟ್ರೀಯ ರಾಜಕೀಯ ಪಕ್ಷದ ಅತ್ಯಂತ ಹಿರಿಯ ನಾಯಕನಿಗೆ ತಕ್ಕುದಲ್ಲ ಎಂದು ಆರೋಪಿಸಲಾಗಿದೆ. ಇದಲ್ಲದೆ, ಕಳೆದ ಒಂಬತ್ತು ವರ್ಷಗಳಿಂದ ₹ 14,00,000 ಕೋಟಿ ಮನ್ನಾ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು ಇದು ಸತ್ಯದ ಆಧಾರದ ಮೇಲೆ ಸಮರ್ಥಿಸಲ್ಪಟ್ಟಿಲ್ಲ ಎಂದು ಚುನಾವಣಾ ಸಮಿತಿಯು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ವಿರುದ್ಧ ಟೀಕೆ; ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ರಾಹುಲ್ ಗಾಂಧಿ
Follow us on

ದೆಹಲಿ ನವೆಂಬರ್ 23: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಆಕ್ಷೇಪಾರ್ಹ ಪದ ಬಳಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಚುನಾವಣಾ ಆಯೋಗ (Election Commission) ಗುರುವಾರ ಶೋಕಾಸ್ ನೋಟಿಸ್ ನೀಡಿದೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾಡಿದ ಹೇಳಿಕೆಗಳ ಕುರಿತು ಕಾಂಗ್ರೆಸ್ ನಾಯಕನ ವಿರುದ್ಧ ಬಿಜೆಪಿಯಿಂದ ದೂರು ಸ್ವೀಕರಿಸಲಾಗಿದೆ ಎಂದು ಚುನಾವಣಾ ಸಮಿತಿ ತಿಳಿಸಿದೆ.

“ಪ್ರಧಾನಿ ಬಗ್ಗೆ ಆಕ್ಷೇಪಾರ್ಹ ಪದವನ್ನು ಬಳಸುವುದು ರಾಷ್ಟ್ರೀಯ ರಾಜಕೀಯ ಪಕ್ಷದ ಅತ್ಯಂತ ಹಿರಿಯ ನಾಯಕನಿಗೆ ತಕ್ಕುದಲ್ಲ ಎಂದು ಆರೋಪಿಸಲಾಗಿದೆ. ಇದಲ್ಲದೆ, ಕಳೆದ ಒಂಬತ್ತು ವರ್ಷಗಳಿಂದ ₹ 14,00,000 ಕೋಟಿ ಮನ್ನಾ ಮಾಡಲಾಗಿದೆ ಎಂದು ರಾಹುಲ್ ಆರೋಪಿಸಿದ್ದು ಇದು ಸತ್ಯದ ಆಧಾರದ ಮೇಲೆ ಸಮರ್ಥಿಸಲ್ಪಟ್ಟಿಲ್ಲ ಎಂದು ಚುನಾವಣಾ ಸಮಿತಿಯು ಹೇಳಿಕೆಯಲ್ಲಿ ತಿಳಿಸಿದೆ. ನವೆಂಬರ್ 25ರ ಮುನ್ನ ಚುನಾವಣಾ ಆಯೋಗದ ಮುಂದೆ ಹಾಜರಾಗುವಂತೆ ರಾಹುಲ್ ಗೆ ಹೇಳಲಾಗಿದೆ.

ಚುನಾವಣಾ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಮಾಡಿದ ಹೇಳಿಕೆಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗದ ಮೊರೆ ಹೋಗಿತ್ತು. “ಜೇಬುಗಳ್ಳ ಒಬ್ಬಂಟಿಯಾಗಿ ಬರುವುದಿಲ್ಲ, ಮೂರು ಜನರಿದ್ದಾರೆ. ಎದುರಿನಿಂದ ಒಬ್ಬರು, ಹಿಂದಿನಿಂದ ಒಬ್ಬರು ಮತ್ತು ದೂರದಿಂದ ಒಬ್ಬರು. ನಿಮ್ಮ ಗಮನವನ್ನು ಬೇರೆಡೆ ಸೆಳೆಯುವುದೇ ಪ್ರಧಾನಿ ನರೇಂದ್ರ ಮೋದಿಯವರ ಕೆಲಸ. ಅವರು ಎದುರಿನಿಂದ ಟಿವಿಯಲ್ಲಿ ಬಂದು ಹಿಂದೂ-ಮುಸ್ಲಿಂ, ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿಷಯಗಳ ಮೂಲಕ ಸಾರ್ವಜನಿಕರ ಗಮನವನ್ನು ಸೆಳೆಯುತ್ತಾರೆ. ಅಷ್ಟರಲ್ಲಿ ಅದಾನಿ ಹಿಂದಿನಿಂದ ಬಂದು ಹಣ ತೆಗೆದುಕೊಂಡು ಹೋಗುತ್ತಾರೆ ಎಂದು ಗಾಂಧಿ ಹೇಳಿದ್ದರು.

ಇದನ್ನೂ ಓದಿ: ಮೂರ್ಖರ ಸರದಾರ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ತನ್ನ ದೂರಿನಲ್ಲಿ, ಯಾವುದೇ ವ್ಯಕ್ತಿಯನ್ನು ಈ ರೀತಿ ಎಂದು ಕರೆಯುವುದು ಕೆಟ್ಟ ನಿಂದನೆ ಮತ್ತು ವೈಯಕ್ತಿಕ ದಾಳಿ ಮಾತ್ರವಲ್ಲದೆ, ಅವರ ಪ್ರತಿಷ್ಠೆಗೆ ಹಾನಿ ಮಾಡುವ ಸ್ಪಷ್ಟ ಉದ್ದೇಶದಿಂದ ಇಂತಹ ಹೇಳಿಕೆ ನೀಡಲಾದ ವ್ಯಕ್ತಿಯ ಚಾರಿತ್ರ್ಯ ಹತ್ಯೆ ಮಾಡುವುದು ಮಾತ್ರವಲ್ಲದೆ ಸಾರ್ವಜನಿಕರನ್ನು ದಾರಿ ತಪ್ಪಿಸುವಂತದ್ದು ಎಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ