AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ

ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ
ರಾಜ್ಯಸಭೆImage Credit source: Manorama Yearbook
ನಯನಾ ರಾಜೀವ್
|

Updated on: Feb 18, 2026 | 11:13 AM

Share

ನವದೆಹಲಿ, ಫೆಬ್ರವರಿ 18: ಹತ್ತು ರಾಜ್ಯಗಳ 37 ರಾಜ್ಯಸಭಾ(Rajya Sabha) ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

ಮಾರ್ಚ್​ 16ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್​ 16ರಂದು ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರದ 7, ತಮಿಳುನಾಡಿನ 6 ಹಾಗೂ ಬಿಹಾರದ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಅಸ್ಸಾಂ, ಹರಿಯಾಣ, ಛತ್ತೀಸ್​ಗಢ ಮತ್ತು ತೆಲಂಗಾಣದಲ್ಲೂ ತೆರವಾಗಲಿರುವ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ. ಮಾರ್ಚ್ 20ರ ಒಳಗೆ ಇಡೀ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗದ ಗಡುವು ನೀಡಿದೆ. ಮತಪತ್ರದಲ್ಲಿ ಆದ್ಯತೆ ಗುರುತಿಸಲು ಚುನಾವಣಾಧಿಕಾರಿ ನೀಡುವ ವಿಶೇಷ ವೈಲೆಟ್ ಪೆನ್ ಬಳಕೆ ಕಡ್ಡಾಯವಾಗಿರಲಿದೆ. 37 ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್ 2026 ರಲ್ಲಿ ಮುಕ್ತಾಯಗೊಳ್ಳಲಿದ್ದು, ಚುನಾವಣೆ ಅನಿವಾರ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ