AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

ಚುನಾವಣಾ ಆಯೋಗವು ಮೇ 30ರಿಂದ 3ನೇ ಹಂತದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಆರಂಭಿಸಲಿದೆ. ಇದರ ಅನ್ವಯ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆಮನೆಗೆ ಭೇಟಿ ನೀಡಿ ಮತದಾರರ ಪರಿಶೀಲನೆ ನಡೆಯಲಿದೆ. ಮೊದಲ ಎರಡು ಹಂತಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 13 ಕಡೆ SIR ಪೂರ್ಣಗೊಂಡಿದ್ದು, ಸುಮಾರು 5.18 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು.

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ
ಮೇ 30ರಿಂದ 3ನೇ ಹಂತದ SIR
ಪ್ರಸನ್ನ ಹೆಗಡೆ
|

Updated on:May 14, 2026 | 3:39 PM

Share

ನವದೆಹಲಿ, ಮೇ 14: ಕರ್ನಾಟಕ ಸೇರಿದಂತೆ 16 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮೇ 30ರಿಂದ ಆರಂಭವಾಗಲಿದ್ದು, ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಸಹಾಯದಿಂದ 36.73 ಕೋಟಿ ಮತದಾರರನ್ನು ಮನೆಮನೆಗೆ ತೆರಳಿ ಪರಿಶೀಲಿಸುವ ಕಾರ್ಯ ನಡೆಯಲಿದೆ.

ಮುಖ್ಯಾಂಶಗಳು

  • 3ನೇ ಹಂತದ SIRಗೆ ಮುಂದಾದ ಚುನಾವಣಾ ಆಯೋಗ
  • ಕರ್ನಾಟಕ ಸೇರಿ ಹಲವೆಡೆ ಮತದಾರರ ಪಟ್ಟಿ ಪರಿಷ್ಕರಣೆ
  • ಮೇ 30ರಿಂದ ಪ್ರಕ್ರಿಯೆ ಆರಂಭದ ಬಗ್ಗೆ ಆಯೋಗ ಮಾಹಿತಿ

ಯಾವೆಲ್ಲ ರಾಜ್ಯಗಳಲ್ಲಿ ಪರಿಷ್ಕರಣೆ?

ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ದಾದ್ರಾ ನಗರ ಹವೆಲಿ ಮತ್ತು ದಮನ್ ದಿಯು, ಉತ್ತರಾಖಂಡ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಕರ್ನಾಟಕ, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಸೇರಿದಂತೆ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ SIR ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ!

ಕರ್ನಾಟಕದಲ್ಲಿ ಯಾವಾಗ?

ಕರ್ನಾಟಕಕ್ಕೆ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ. ಜೂನ್ 20ರಿಂದ 29ರವರೆಗೆ ನಮೂನೆಗಳ ಸಿದ್ಧತೆ, ತರಬೇತಿ ಮತ್ತು ಮುದ್ರಣ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ BLOಗಳು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಆಗಸ್ಟ್ 5ರಿಂದ ಸೆಪ್ಟೆಂಬರ್ 3ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಇವುಗಳ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 3ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ.

ಮೊದಲ ಎರಡು ಹಂತಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 13 ಕಡೆ SIR ಪೂರ್ಣಗೊಂಡಿದ್ದು, ಸುಮಾರು 5.18 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಇದಕ್ಕೆ ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜದ ಸಂಘಟನೆಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಈ ಪ್ರಕ್ರಿಯೆ ಮತದಾರರನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ್ದವು. ಕಾನೂನು ಸಂಬಂಧಿತ ಸಮಸ್ಯೆಗಳ ಕಾರಣ ಅಸ್ಸಾಂನಲ್ಲಿ SIR ನಡೆಸಲಾಗಿಲ್ಲ ಎಂಬುದಿಲ್ಲಿ ಗಮನಾರ್ಹ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:32 pm, Thu, 14 May 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ