EC on President Election 2022 ಇಂದು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ಚುನಾವಣೆ ದಿನಾಂಕ ಪ್ರಕಟ
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅವಧಿ ಜುಲೈ 24 ಕ್ಕೆ ಕೊನೆಗೊಳ್ಳಲಿದ್ದು, ಆ ದಿನಕ್ಕಿಂತ ಮೊದಲು ಮುಂದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ದೆಹಲಿ: ಚುನಾವಣಾ ಆಯೋಗವು (Election Commission of India)ಇಂದು ಮಧ್ಯಾಹ್ನ 3 ಗಂಟೆಗೆ ಭಾರತದ ಮುಂದಿನ ರಾಷ್ಟ್ರಪತಿ ಚುನಾವಣೆಗೆ (Presidential Election) ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ವರದಿಗಳ ಪ್ರಕಾರ, ಆಯೋಗವು ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ (President Ram Nath Kovind) ಅವರ ಅವಧಿ ಜುಲೈ 24 ಕ್ಕೆ ಕೊನೆಗೊಳ್ಳಲಿದ್ದು, ಆ ದಿನಕ್ಕಿಂತ ಮೊದಲು ಮುಂದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುವ ಎಲೆಕ್ಟೋರಲ್ ಕಾಲೇಜಿನ ಸದಸ್ಯರು ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ.
Election Commission of India to announce the schedule for election for the next President of India at 1500 hours today.
— ANI (@ANI) June 9, 2022
ರಾಜ್ಯಸಭೆ ಮತ್ತು ಲೋಕಸಭೆ ಅಥವಾ ರಾಜ್ಯಗಳ ಶಾಸಕಾಂಗ ಸಭೆಗಳ ನಾಮನಿರ್ದೇಶಿತ ಸದಸ್ಯರು ಚುನಾವಣಾ ಕಾಲೇಜಿನಲ್ಲಿ ಸೇರ್ಪಡೆಗೊಳ್ಳಲು ಅರ್ಹರಲ್ಲ. ಹಾಗಾಗಿ ಅವರು ಚುನಾವಣೆಯಲ್ಲಿ ಭಾಗವಹಿಸಲಾಗುವುದಿಲ್ಲ. ಅದೇ ರೀತಿ ಅದೇ ರೀತಿ ವಿಧಾನ ಪರಿಷತ್ತಿನ ಸದಸ್ಯರು ಕೂಡ ರಾಷ್ಟ್ರಪತಿ ಚುನಾವಣೆಯಲ್ಲಿ ಭಾಗವಹಿಸುವಂತಿಲ್ಲ.
ಹಿಂದಿನ ರಾಷ್ಟ್ರಪತಿ ಚುನಾವಣೆ ಜುಲೈ 17, 2017 ರಂದು ನಡೆದಿತ್ತು.ಜುಲೈ 20 ರಂದು ಮತ ಎಣಿಕೆ ನಡೆದಿದ್ದು ರಾಷ್ಟ್ರಪತಿ ಕೋವಿಂದ್ ಅವರನ್ನು ಆಯ್ಕೆ ಮಾಡಲಾಯಿತು.
ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿರುವ ರಾಷ್ಟ್ರಪತಿ ಮತ್ತು ಉಪಾಧ್ಯಕ್ಷ ಚುನಾವಣೆಗೆ ಸಾಧ್ಯವಾದಷ್ಟು ಮತಗಳನ್ನು ಭದ್ರಪಡಿಸಿಕೊಳ್ಳಲು ಬಿಜೆಪಿ ಮಿತ್ರ ಪಕ್ಷಗಳನ್ನು ತಲುಪುತ್ತಿದೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 1:14 pm, Thu, 9 June 22