ನಾಳೆ ಕೇಂದ್ರ ಚುನಾವಣಾ ಆಯೋಗದ ಸಭೆ: 5 ರಾಜ್ಯಗಳ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಬಗ್ಗೆ ಸಮಾಲೋಚನೆ
ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ, ರಾಜ್ಯದಲ್ಲಿ ನಡೆಯಬೇಕಿದ್ದ ಬೈಎಲೆಕ್ಷನ್‌ಗೂ ನಾಳೆಯೇ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.
ದೆಹಲಿ: ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ, ರಾಜ್ಯದಲ್ಲಿ ನಡೆಯಬೇಕಿದ್ದ ಬೈಎಲೆಕ್ಷನ್‌ಗೂ ನಾಳೆಯೇ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ಕರ್ನಾಟಕದ ಮಸ್ಕಿ, ಬಸವಕಲ್ಯಾಣ, ಸಿಂದಗಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್‌ಗೆ ನಾಳೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ನಾಳೆಯೇ 4 ಕ್ಷೇತ್ರಗಳ ಬೈಎಲೆಕ್ಷನ್‌ಗೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ದರ್ಗಾದ ಹುಂಡಿಗೆ ಬೆಂಕಿ: 2000, 500, 200, 100 ರೂ. ಸೇರಿದಂತೆ ಹುಂಡಿಯಲ್ಲಿದ್ದ ನೋಟುಗಳೆಲ್ಲ ಸುಟ್ಟು ಕರಕಲು
Published On - 10:31 pm, Tue, 23 February 21