Lok Sabha Election: ಮಾರ್ಚ್ 9ರ ಬಳಿಕ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ
ಭಾರತೀಯ ಚುನಾವಣಾ ಆಯೋಗದ (ಇಸಿಐ) ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ರಾಜ್ಯಗಳಿಗೆ ತೆರಳುತ್ತಿದ್ದು, ಚುನಾವಣಾ ಸಮಿತಿಯು ಮಾರ್ಚ್ 9 ರ ನಂತರ ಲೋಕಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ 18 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದೆ.
ಭಾರತೀಯ ಚುನಾವಣಾ ಆಯೋಗ(Election Commission of India)ವು ಮಾರ್ಚ್ 9ರ ಬಳಿಕ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಭಾರತೀಯ ಚುನಾವಣಾ ಆಯೋಗದ (ಇಸಿಐ) ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ರಾಜ್ಯಗಳಿಗೆ ತೆರಳುತ್ತಿದ್ದು, ಚುನಾವಣಾ ಸಮಿತಿಯು ಮಾರ್ಚ್ 9 ರ ನಂತರ ಲೋಕಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ನ್ಯೂಸ್18 ವರದಿ ಮಾಡಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭಾರತದಲ್ಲಿ 18 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ 2024 ಮತ್ತು ಕೆಲವು ರಾಜ್ಯಗಳಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಮುಂದುವರೆಸುತ್ತಾ, ಭಾರತೀಯ ಚುನಾವಣಾ ಅಧಿಕಾರಿಗಳ ತಂಡವು ಈ ದಿನಗಳಲ್ಲಿ ರಾಜ್ಯಗಳಿಗೆ ಬ್ಯಾಕ್ ಟು ಬ್ಯಾಕ್ ಭೇಟಿಗಳನ್ನು ಕೈಗೊಳ್ಳುತ್ತಿದೆ. ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಭದ್ರತಾ ಪರಿಸ್ಥಿತಿ ಮತ್ತು ಪಡೆಗಳ ಲಭ್ಯತೆಯ ಬಗ್ಗೆ ಕೇಳಲು ಅಧಿಕಾರಿಗಳು ಮಾರ್ಚ್ 8-9 ರ ನಡುವೆ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.
2019 ರಲ್ಲಿ, ಲೋಕಸಭೆ ಚುನಾವಣೆಯನ್ನು ಮಾರ್ಚ್ 10 ರಂದು ಘೋಷಿಸಲಾಯಿತು. ಏಪ್ರಿಲ್ 11 ಮತ್ತು ಮೇ 19 ರ ನಡುವೆ ಏಳು ಹಂತಗಳಲ್ಲಿ ಮತದಾನವನ್ನು ನಡೆಸಲಾಯಿತು ಮತ್ತು ಮತಗಳ ಎಣಿಕೆಯು ಮೇ 23 ರಂದು ನಡೆಯಿತು. ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿ ಯಾತ್ರೆಗಳನ್ನು ನಡೆಸುತ್ತಿವೆ.
ಮತ್ತಷ್ಟು ಓದಿ:ಬಿಹಾರ: ಜನ ವಿಶ್ವಾಸ ಯಾತ್ರೆಗೆ ಚಾಲನೆ ನೀಡಲಿದ್ದಾರೆ ತೇಜಸ್ವಿ ಯಾದವ್
ಇನ್ನೊಂದೆಡೆ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳೆಲ್ಲಾ ಸೇರಿ ಇಂಡಿಯಾ ಮೈತ್ರಿ ಕೂಟವನ್ನು ರಚಿಸಿತ್ತು, ಆದರೆ ಚುನಾವಣೆಗೂ ಮುನ್ನವೇ ಅದರಿಂದ ಒಂದೊಂದೇ ಪಕ್ಷಗಳು ಹೊರಬಂದು ಕೆಲವು ಸ್ವತಂತ್ರವಾಗಿ ಇನ್ನೂ ಕೆಲವು ಬಿಜೆಪಿ ಜತೆಗೆ ಸೇರಿ ಚುನಾವಣಾ ಪ್ರಚಾರದಲ್ಲಿ ತೊಗಿವೆ.
ನಿತೀಶ್ ಕುಮಾರ್ ಬಿಜೆಪಿಗೆ ಸೇರಿ ಬಿಹಾರದಲ್ಲಿ ಸರ್ಕಾರ ರಚಿಸಿದ್ದಾರೆ, ಪಂಜಾಬ್ನಲ್ಲಿ ಭಗವಂತ್ ಮಾನ್ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ, ಆರ್ಎಲ್ಡಿ ಬಿಜೆಪಿ ಜತೆಗೆ ಸೇರಿಕೊಂಡಿದೆ. ಪಂಜಾಬ್ನಲ್ಲಿ ಮಮತಾ ಬ್ಯಾನರ್ಜಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಇನ್ನು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ಗೆ ಒಂದು ಸ್ಥಾನವನ್ನು ಅವರಿಗೆ ಅರ್ಹತೆ ಇಲ್ಲದಿದ್ದರೂ ಬಿಟ್ಟುಕೊಡುವುದಾಗಿ ಹೇಳಿದೆ. ಇದೀಗ ಬಿಎಸ್ ಮುಖ್ಯಸ್ಥೆ ಮಾಯಾವತಿ ಕೂಡ ತಾವು ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಅಖಿಲೇಶ್ ಯಾದವ್ ಕೂಡ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮಗೊಂಡರೆ ಮಾತ್ರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:20 am, Tue, 20 February 24