ಚುನಾವಣೆ ನಡೆಯಲಿರುವ ರಾಜ್ಯಗಳು ಕೊವಿಡ್-19 ವ್ಯಾಕ್ಸಿನೇಷನ್‌ನ ವೇಗ ಹೆಚ್ಚಿಸಲು ಚುನಾವಣಾ ಆಯೋಗ ನಿರ್ದೇಶನ

ಕಳೆದ ವಾರ ಲಖನೌನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಯೋಗವು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಲಸಿಕೆ ನೀಡಿಕೆ ವೇಗಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ನಂತರ ಈ ನಿರ್ದೇಶನ ಬಂದಿದೆ ಎಂದು ಚುನಾವಣಾ ಆಯೋಗದ  ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣೆ ನಡೆಯಲಿರುವ ರಾಜ್ಯಗಳು ಕೊವಿಡ್-19 ವ್ಯಾಕ್ಸಿನೇಷನ್‌ನ ವೇಗ ಹೆಚ್ಚಿಸಲು ಚುನಾವಣಾ ಆಯೋಗ ನಿರ್ದೇಶನ
ಚುನಾವಣಾ ಆಯೋಗ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 03, 2022 | 4:10 PM

ದೆಹಲಿ:ಕೊವಿಡ್-19 (Covid 19) ವ್ಯಾಕ್ಸಿನೇಷನ್‌ನ (vaccination)ವೇಗವನ್ನು ಹೆಚ್ಚಿಸುವಂತೆ ಭಾರತದ ಚುನಾವಣಾ ಆಯೋಗವು ಚುನಾವಣೆಗೆ ಒಳಪಡುವ ಐದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಮಣಿಪುರದಲ್ಲಿ(Manipur) ಮೊದಲ ಡೋಸ್ ವ್ಯಾಪ್ತಿಯ ಕಡಿಮೆ ಶೇಕಡಾವಾರು ಬಗ್ಗೆ ಚುನಾವಣಾ ಸಮಿತಿಯು ಕಳವಳ ವ್ಯಕ್ತಪಡಿಸಿದೆ. ಕಳೆದ ವಾರ ಲಖನೌನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಯೋಗವು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಲಸಿಕೆ ನೀಡಿಕೆ ವೇಗಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ನಂತರ ಈ ನಿರ್ದೇಶನ ಬಂದಿದೆ ಎಂದು ಚುನಾವಣಾ ಆಯೋಗದ  ಅಧಿಕಾರಿಗಳು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು, ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಚುನಾವಣಾ ಆಯೋಗ ರಾಜ್ಯಗಳನ್ನು ಕೇಳಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರು ಪ್ರಧಾನಿ ನರೇಂದ್ರ ಮೋದಿಯವರನ್ನು “ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಒತ್ತಾಯಿಸಿದರು. ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಸಂಭವನೀಯ ಮೂರನೇ ಅಲೆಯ ದೃಷ್ಟಿಯಿಂದ ರ್ಯಾಲಿಗಳು, ಸಭೆಗಳು ಮತ್ತು ಚುನಾವಣೆಗಳನ್ನು “ನಿಲ್ಲಿಸುವುದು ಮತ್ತು ಮುಂದೂಡುವುದನ್ನು” ಪರಿಗಣಿಸುವಂತೆ ಒತ್ತಾಯಿಸಿದರು.

ಆದಾಗ್ಯೂ, ಚುನಾವಣಾ ಆಯೋಗವು ಉತ್ತರ ಪ್ರದೇಶದ ಎಲ್ಲಾ ಪಕ್ಷಗಳು ವೇಳಾಪಟ್ಟಿಯಂತೆ ವಿಧಾನಸಭೆ ಚುನಾವಣೆಗಳನ್ನು ನಡೆಸಬೇಕೆಂದು ಬಯಸುತ್ತವೆ ಎಂದು ಹೇಳಿದರು. “ಎಲ್ಲಾ ರಾಜಕೀಯ ಪಕ್ಷಗಳು, ಯಾವುದೇ ಭಿನ್ನಾಭಿಪ್ರಾಯವಿಲ್ಲದೆ, ಕೊವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಬೇಕು” ಎಂದು ಚುನಾವಣಾ ಆಯೋಗ ಹೇಳಿದೆ.

ಚುನಾವಣೆಯನ್ನು ಮುಂದೂಡುವುದನ್ನು ಚುನಾವಣಾ ಆಯೋಗ ಪರಿಗಣಿಸುತ್ತದೆಯೇ ಎಂದು ಕೇಳಿದಾಗ, ಚಂದ್ರ ಅವರು “ಸಂವಿಧಾನದ ಪ್ರಕಾರ ಚುನಾವಣಾ ಆಯೋದ ತನಗೆ ನಿಯೋಜಿಸಲಾದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಆ ಜವಾಬ್ದಾರಿಯನ್ನು ನಿರ್ವಹಿಸುವಾಗ, ಹೆಚ್ಚುತ್ತಿರುವ ಕೊವಿಡ್ ಸಂಖ್ಯೆಗಳನ್ನು ಅಥವಾ ಹೆಚ್ಚುತ್ತಿರುವ ರ್ಯಾಲಿಗಳನ್ನು ನಿರ್ವಹಿಸುವುದನ್ನು ಪರಿಗಣಿಸಲು ಅಗತ್ಯವಿರುವ ಯಾವುದನ್ನಾದರೂ ಪರಿಗಣನೆಗೆ ತೆಗೆದುಕೊಂಡ ನಂತರ ಚುನಾವಣೆಗಳನ್ನು ಘೋಷಿಸಲಾಗುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ 86 ಪ್ರತಿಶತ ಜನರು ಮೊದಲ ಡೋಸ್ ಮತ್ತು 49 ಪ್ರತಿಶತದಷ್ಟು ಜನರು ಕೊವಿಡ್ ಲಸಿಕೆಯನ್ನು ಪಡೆದಿದ್ದಾರೆ ಎಂದು ನನಗೆ ತಿಳಿಸಲಾಗಿದೆ. 15-20 ದಿನಗಳಲ್ಲಿ, ಎಲ್ಲಾ ಅರ್ಹ ಜನರು ತಮ್ಮ ಮೊದಲ ಡೋಸ್ ಅನ್ನು ಪಡೆಯುತ್ತಾರೆ ಎಂದು ನಮಗೆ ಭರವಸೆ ನೀಡಲಾಗಿದೆ. ಲಸಿಕೆಯನ್ನು ಹೆಚ್ಚಿಸುವಂತೆ ನಾವು ಕೇಳಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ, ಚುನಾವಣಾ ಆಯೋಗವು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕೊವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ನಡೆಸಿತ್ತು.

ವ್ಯಾಕ್ಸಿನೇಷನ್ ವ್ಯಾಪ್ತಿಯು ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಿದೆ ಎಂಬ ವರದಿಗಳ ನಂತರ ಆರೋಗ್ಯ ಸಚಿವಾಲಯವು ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ಬಹುಶಿಸ್ತೀಯ ತಂಡಗಳನ್ನು ಕಳುಹಿಸಿದೆ. ಆರೋಗ್ಯ ಸಚಿವಾಲಯವು ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ಬಹುಶಿಸ್ತೀಯ ತಂಡಗಳನ್ನು ಕಳುಹಿಸಿದೆ ಆರೋಗ್ಯ ಕಾರ್ಯದರ್ಶಿ ಡಿಸೆಂಬರ್ 23 ರಂದು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ “ವ್ಯಾಕ್ಸಿನೇಷನ್ ವೇಗ ಹೆಚ್ಚಿಸುವಂತೆ” ನಿರ್ದೇಶನ ನೀಡಿದ್ದರು.

ಎಲ್ಲಾ ರಾಜ್ಯಗಳೊಂದಿಗಿನ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಭೂಷಣ್, ಕಡಿಮೆ ವ್ಯಾಕ್ಸಿನೇಷನ್ ಕವರೇಜ್ ಹೊಂದಿರುವ ಪ್ರದೇಶಗಳು ಹೊಸ ಒಮಿಕ್ರಾನ್ ರೂಪಾಂತರಕ್ಕೆ ಹೆಚ್ಚು ದುರ್ಬಲವಾಗಬಹುದು ಮತ್ತು ಈ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಲು ಜಿಲ್ಲಾಡಳಿತಗಳು ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:  Coronavirus cases in India: ಭಾರತದಲ್ಲಿ 33,750 ಹೊಸ ಕೊವಿಡ್ ಪ್ರಕರಣ ಪತ್ತೆ, ಸಾವಿನ ಸಂಖ್ಯೆ ಇಳಿಕೆ; ಒಮಿಕ್ರಾನ್​​​ ಪ್ರಕರಣಗಳಲ್ಲಿ ಏರಿಕೆ

ಇದನ್ನೂ ಓದಿ:  ಫೆಬ್ರವರಿಯೊಳಗೆ 8 ಕೋಟಿ ಕೊವಾಕ್ಸಿನ್ ಡೋಸ್‌ಗಳನ್ನು ಪೂರೈಸುವ ಗುರಿ ಹೊಂದಿದ ಭಾರತ್ ಬಯೋಟೆಕ್

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು