ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ನರೇಂದ್ರ ಮೋದಿಯವರ ಫೋಟೊ ಅಳಿಸಲಿದೆ ಆರೋಗ್ಯ ಸಚಿವಾಲಯ
Modi Picture on Vaccine Certificates: ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯವರ ಫೋಟೊವನ್ನು ಅಳಿಸಬೇಕು ಎಂದು ಚುನಾವಣಾ ಆಯೋಗ ಆದೇಶ ನೀಡಿದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಆರೋಗ್ಯ ಸಚಿವಾಲಯ ಮುಂದಾಗಿದೆ.
ದೆಹಲಿ: ವಿಧಾನಸಭೆ ಚುನಾವಣೆಗೆ ಸಿದ್ಧವಾಗಿರುವ ರಾಜ್ಯಗಳಲ್ಲಿ ಕೊವಿಡ್ ಲಸಿಕೆ ಪ್ರಮಾಣಪತ್ರದಲ್ಲಿ (vaccine certificates ) ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಆರೋಗ್ಯ ಸಚಿವಾಲಯ ಅಳಿಸಲಿದೆ. ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯವರ ಫೋಟೊವನ್ನು ಅಳಿಸಬೇಕು ಎಂದು ಚುನಾವಣಾ ಆಯೋಗ ಆದೇಶ ನೀಡಿದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಆರೋಗ್ಯ ಸಚಿವಾಲಯ ಮುಂದಾಗಿದೆ.
ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ಕೊವಿಡ್ ಲಸಿಕೆ ತೆಗೆದುಕೊಂಡಿದ್ದಾರೆ. ಹೀಗೆ ಕೊರೊನಾ ಲಸಿಕೆ ಪಡೆದವರಿಗೆ ಒಂದು ಡಿಜಿಟಲ್ ಸರ್ಟಿಫಿಕೇಟ್ ನೀಡಲಾಗುತ್ತಿದ್ದು ಅದರ ಕೆಳಗೆ ಮೂಲೆಯಲ್ಲಿ ಮೋದಿಯವರ ಫೋಟೋ ಇದೆ. ಇದರ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಲಸಿಕೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ಪಡೆಯುತ್ತಿದ್ದಾರೆ ಎಂಬುದು ವಿಪಕ್ಷಗಳ ಆರೋಪ.
ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಕೂಡ ದೂರು ಕೊಟ್ಟಿತ್ತು. ಅದರ ಪರಿಣಾಮವಾಗಿ, ಏಪ್ರಿಲ್ ತಿಂಗಳು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ನೀಡುವ ಡಿಜಿಟಲ್ ಸರ್ಟಿಫಿಕೇಟ್ನಲ್ಲಿ ಮೋದಿ ಫೋಟೋವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.’
ಏಪ್ರಿಲ್ ತಿಂಗಳಲ್ಲಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶದ ಅನ್ವಯ ಈ ಎಲ್ಲ ರಾಜ್ಯಗಳಲ್ಲಿ ಲಸಿಕೆ ಪಡೆಯುವವರಿಗೆ ನೀಡುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಹಾಕುವಂತಿಲ್ಲ.
ಚುನಾವಣೆ ಹತ್ತಿರ ಬರುತ್ತಿದೆ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಫೋಟೋವನ್ನು ಸರ್ಟಿಫಿಕೇಟ್ನಿಂದ ತೆಗೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಳಿಕ ಆರೋಗ್ಯ ಇಲಾಖೆಗೆ ಪತ್ರ ಬರೆದ ಚುನಾವಣಾ ಆಯೋಗವು ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ, ಪುದುಚೇರಿಗಳಲ್ಲಿ ಫೆ.26ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಅದರ ಅನ್ವಯ ಪ್ರಧಾನಿ ಮೋದಿಯವರ ಫೋಟೋ ಸರ್ಟಿಫಿಕೇಟ್ನಲ್ಲಿ ಇರುವಂತಿಲ್ಲ ಎಂದು ತಿಳಿಸಿದೆ.
Happy to share that my mother has taken the first dose of the COVID-19 vaccine today. I urge everyone to help and motivate people around you who are eligible to take the vaccine.
— Narendra Modi (@narendramodi) March 11, 2021
ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ಮೋದಿ ತಾಯಿ ನರೇಂದ್ರ ಮೋದಿಯವರ ಅಮ್ಮ ಹೀರಾಬೆನ್ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅರ್ಹ ವ್ಯಕ್ತಿಗಳಿಗೆ ಲಸಿಕೆ ಪಡೆಯಲು ಸಹಾಯ ಮಾಡಿ, ಪೋತ್ಸಾಹಿಸಿ ಎಂದು ಕರೆ ನೀಡಿದ್ದಾರೆ.
ಕೋವ್ಯಾಕ್ಸಿನ್ ಲಸಿಕೆಯನ್ನು ವೈದ್ಯಕೀಯ ಪ್ರಯೋಗದ ಹಂತದಿಂದ ತೆಗೆಯಲು ಶಿಫಾರಸು ಒಪ್ಪಿದ ಡಿಸಿಜಿಐ
ಕೋವ್ಯಾಕ್ಸಿನ್ ಲಸಿಕೆಯನ್ನು ವೈದ್ಯಕೀಯ ಪ್ರಯೋಗದ ಹಂತದಿಂದ ತೆಗೆಯಬೇಕೆಂದು ವಿಷಯ ತಜ್ಞರ ಸಮಿತಿಯ ಶಿಫಾರಸನ್ನು ಭಾರತೀಯ ಪ್ರಧಾನ ಔಷಧ ನಿಯಂತ್ರಕ (DCGI) ಒಪ್ಪಿದೆ. ಡಿಸಿಜಿಐ ತಮ್ಮ ತೀರ್ಮಾನವನ್ನು ಕೇಂದ್ರ ಆರೋಗ್ಯ ಇಲಾಖೆ , ಭಾರತ್ ಬಯೋಟೆಕ್ ಜೊತೆಗೆ ಹಂಚಿಕೊಂಡಿತ್ತು.
ಇದನ್ನೂ ಓದಿ: Assembly Election 2021: ಕೊವಿಡ್ ಲಸಿಕೆ ಸರ್ಟಿಫಿಕೇಟ್ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ
Published On - 3:05 pm, Thu, 11 March 21