ಚುನಾವಣಾ ಆಯೋಗದಿಂದ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿಗೂ ಹೆಚ್ಚು ಹಣ ವಶಕ್ಕೆ
ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ 1,000 ಕೋಟಿ ರೂ. ಹಣವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. 2026ರ ವಿಧಾನಸಭಾ ಚುನಾವಣೆಗಳು ಮತ್ತು ಉಪಚುನಾವಣೆಗಳ ಮಧ್ಯೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ 1 ಸಾವಿರ ಕೋಟಿ ರೂ.ಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ವರದಿ ಮಾಡಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಾಳೆ (ಏಪ್ರಿಲ್ 23) ವಿಧಾನಸಭಾ ಚುನಾವಣೆ ನಡೆಯಲಿದೆ.

ನವದೆಹಲಿ, ಏಪ್ರಿಲ್ 22: ಪಶ್ಚಿಮ ಬಂಗಾಳ (West Bengal Assembly Elections) ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಮತದಾರರನ್ನು ಆಕರ್ಷಿಸಲು ಉದ್ದೇಶಿಸಲಾದ ನಗದು, ಮಾದಕ ದ್ರವ್ಯಗಳು ಮತ್ತು ಮದ್ಯ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಶಪಡಿಸಿಕೊಳ್ಳುವಿಕೆಗಳು 1000 ಕೋಟಿ ರೂ.ಗಳನ್ನು ದಾಟಿವೆ ಎಂದು ಚುನಾವಣಾ ಆಯೋಗ (Election Commission) ಇಂದು ತಿಳಿಸಿದೆ.
ಈ ವರ್ಷದ ಫೆಬ್ರವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಣ, ಆಲ್ಕೋಹಾಲ್, ಡ್ರಗ್ಸ್, ಅಮೂಲ್ಯವಾದ ಲೋಹಗಳು ಮತ್ತು ಉಚಿತ ವಸ್ತುಗಳು ಸೇರಿದಂತೆ 472 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಾಗೇ, ತಮಿಳುನಾಡಿನಲ್ಲಿ 599 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಉದ್ದೇಶದಿಂದ 5 ಸಾವಿರಕ್ಕೂ ಹೆಚ್ಚು ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ಮತ್ತು 5 ಸಾವಿರಕ್ಕೂ ಹೆಚ್ಚು ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ನಿರ್ದಿಷ್ಟ ಸಮುದಾಯದಲ್ಲಿ 4 ಮದುವೆ ನಿಷೇಧಿಸುತ್ತೇವೆ; ಅಮಿತ್ ಶಾ ಪ್ರತಿಜ್ಞೆ
ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಏಪ್ರಿಲ್ 29ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ನಾಳೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




