ತೆಲಂಗಾಣ: ಮಾಜಿ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶ(Telangana Assembly Election Result)ಕ್ಕೂ ಮುನ್ನವೇ  ರೇವಂತ್ ರೆಡ್ಡಿ(Revant Reddy)ಯವರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್(Anjani Kumar) ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.

ತೆಲಂಗಾಣ: ಮಾಜಿ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ
ಅಂಜನಿ ಕಮಾರ್
Follow us
ನಯನಾ ರಾಜೀವ್
|

Updated on: Dec 12, 2023 | 12:58 PM

ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶ(Telangana Assembly Election Result)ಕ್ಕೂ ಮುನ್ನವೇ  ರೇವಂತ್ ರೆಡ್ಡಿ(Revant Reddy)ಯವರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್(Anjani Kumar) ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.

ತೆಲಂಗಾಣ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಂಜನಿ ಕುಮಾರ್ ರೇವಂತ್​ ರೆಡ್ಡಿಯನ್ನು ಭೇಟಿಯಾಗಿದ್ದರು. ರೇವಂತ್ ರೆಡ್ಡಿ ಭೇಟಿ ವಿಚಾರವಾಗಿ ಅಂಜನಿ ಕುಮಾರ್ ಅವರಿಂದ ವಿವರಣೆ ಕೇಳಿರುವ ಚುನಾವಣಾ ಆಯೋಗ . ಅವರನ್ನು ಅಮಾನತುಗೊಳಿಸಿತ್ತು.  ಅಂಜನಿ ಕುಮಾರ್ ಬದಲಿಗೆ ರವಿ ಗುಪ್ತಾ ಅವರನ್ನು ಡಿಜಿಪಿಯಾಗಿ ನೇಮಿಸಿತ್ತು.

ಇನ್ನು ಮುಂದೆ ಇಂತಹ ಪ್ರಮಾದ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅಂಜನಿಕುಮಾರ್ ವಿವರಿಸಿದರು. ಅವರ ವಿವರಣೆಗೆ ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ಆಯೋಗ, ಅಮಾನತು ಆದೇಶವನ್ನು ಹಿಂಪಡೆದಿದೆ.

ಅಧಿಕೃತವಾಗಿ ಫಲಿತಾಂಶ ಇನ್ನೂ ಹೊರಬಂದಿರಲಿಲ್ಲ, ಅಷ್ಟರೊಳಗೆ ಅಂಜನಿ ಕುಮಾರ್ ರೆಡ್ಡಿಯವರನ್ನು ಭೇಟಿಯಾಗಿ, ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದ್ದರು.

ಮತ್ತಷ್ಟು ಓದಿ: ಫಲಿತಾಂಶ ಪ್ರಕಟಕ್ಕೂ ಮುನ್ನವೇ ಅಭ್ಯರ್ಥಿಯನ್ನು ಭೇಟಿ ಮಾಡಿದ ಡಿಜಿ ಐಜಿಪಿ; ಅಂಜನಿ ಕುಮಾರ್ ಅಮಾನತುಗೊಳಿಸಿದ ಚುನಾವಣಾ ಆಯೋಗ

ರೆಡ್ಡಿಗೆ ಪುಷ್ಪಗುಚ್ಛವನ್ನು ಹಸ್ತಾಂತರಿಸುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿತ್ತು.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮತ್ತೊಂದೆಡೆ, ಬಿಆರ್‌ಎಸ್ 39 ಸ್ಥಾನಗಳನ್ನು, ಬಿಜೆಪಿ 9 ಸ್ಥಾನಗಳನ್ನು, ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) 7 ಸ್ಥಾನಗಳನ್ನು ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 1 ಸ್ಥಾನವನ್ನು ಗೆದ್ದಿದೆ. ಇದೀಗ ಕಾಂಗ್ರೆಸ್​ನ ರೇವಂತ್ ರೆಡ್ಡಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್