AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Election 2021: ನಂದಿಗ್ರಾಮ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗದಿಂದ ನೋಟಿಸ್​

ಮಾ.29ರಂದು ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಭಾಷಣ ಮಾಡುವಾಗ ದ್ವೇಷಪೂರಿತ ಮಾತುಗಳನ್ನು ಆಡಿದ್ದಾರೆ ಎಂದು ಸಿಪಿಐ ಎಂಎಲ್​ ಕೇಂದ್ರ ಸಮಿತಿಯ ಕವಿತಾ ಕೃಷ್ಣನ್​ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

West Bengal Election 2021: ನಂದಿಗ್ರಾಮ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗದಿಂದ ನೋಟಿಸ್​
ಸುವೇಂದು ಅಧಿಕಾರಿ
Lakshmi Hegde
|

Updated on: Apr 09, 2021 | 10:58 AM

Share

ನವದೆಹಲಿ: ಪಶ್ಚಿಮಬಂಗಾಳದ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯವರಿಗೆ ಚುನಾವಣಾ ಆಯೋಗ ನೋಟಿಸ್ ನೋಡಿದೆ. ಕಳೆದ ತಿಂಗಳು ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡುವಾಗ ಕೋಮು ಸೌಹಾರ್ದ ಕದಡುವ ಮಾತುಗಳನ್ನು ಆಡುವ ಮೂಲಕ, ನಿಯಮ ಉಲ್ಲಂಘನೆ ಮಾಡಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಿದ್ದಾಗಿ ಚುನಾವಣಾ ಆಯೋಗ ತಿಳಿಸಿದೆ. ಹಾಗೇ, 24ಗಂಟೆಯಲ್ಲಿ ನೋಟಿಸ್​ಗೆ ಉತ್ತರ ನೀಡಲು ಸೂಚನೆ ನೀಡಿದೆ.

ಮಾ.29ರಂದು ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಭಾಷಣ ಮಾಡುವಾಗ ದ್ವೇಷಪೂರಿತ ಮಾತುಗಳನ್ನು ಆಡಿದ್ದಾರೆ ಎಂದು ಸಿಪಿಐ ಎಂಎಲ್​ ಕೇಂದ್ರ ಸಮಿತಿಯ ಕವಿತಾ ಕೃಷ್ಣನ್​ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಯಾವುದೇ ರಾಜಕೀಯ ಮುಖಂಡರು, ಕಾರ್ಯಕರ್ತರ ವಿರುದ್ಧ ಮಾಡುವ ಆರೋಪವು ಅವರ ಕೆಲಸ, ಯೋಜನೆಗಳು, ಹಳೇ ದಾಖಲೆಗಳನ್ನು ಆಧರಿಸಿ ಇರಬೇಕು. ಅದು ಬಿಟ್ಟು ಸಾಬೀತಾಗದ ಅಪರಾಧವನ್ನು ಉಲ್ಲೇಖಿಸುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಲ್ಲದೆ, ಸುವೇಂದು ಅಧಿಕಾರಿಯವರ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸ್ಪಷ್ಟವಾಗಿದೆ ಎಂದೂ ಹೇಳಿದೆ.

ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸಿಎಂ ಮಮತಾ ಬ್ಯಾನರ್ಜಿಯವರೇ ಕಣಕ್ಕೆ ಇಳಿದಿದ್ದಾರೆ. ಮಾರ್ಚ್​ 29ರಂದು ಚುನಾವಣಾ ಪ್ರಚಾರ ನಡೆಸಿದ್ದ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ 2ನೇ ನೋಟಿಸ್ ನೀಡಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳ ಚುನಾವಣೆ: 3ನೇ ಹಂತದ ಬಹುತೇಕ ಕ್ಷೇತ್ರಗಳಲ್ಲಿ ಟಿಎಂಸಿ ಉಕ್ಕಿನ ಹಿಡಿತ, ಮುಸ್ಲಿಂ ಮತದಾರರೇ ನಿರ್ಣಾಯಕ

(Election Commission Sends Notice To Nandigram BJP Candidate Suvendu Adhikari)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್